ದಾವಣಗೆರೆ | ಭತ್ತದಂತಹ ನೀರಾವರಿ ಬೆಳೆ ಬೆಳೆದರೆ ನಾವು ಜವಾಬ್ದಾರಲ್ಲ: ಜಲ ಸಂಪನ್ಮೂಲ ಇಲಾಖೆ

Date:

ಮಳೆ ಮತ್ತು ಜಲಾಶಯದಲ್ಲಿ ಸದ್ಯದ ನೀರಿನ ಕೊರತೆಯ ಕಾರಣದಿಂದ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆ ನೀರಾವರಿ ಬೆಳೆಗಳಿಗೆ ಮಾತ್ರ ನೀರನ್ನು ಒದಗಿಸಲಾಗುವುದು. ಅರೆ ನೀರಾವರಿ ಬೆಳೆಯದೆ ಭತ್ತ, ಇನ್ನಿತರೆ ಬೆಳೆ ಬೆಳೆದರೆ ನಾವು ಜವಾಬ್ದಾರಲ್ಲ ಎಂದು ದಾವಣಗೆರೆಯ ಜಲ ಸಂಪನ್ಮೂಲ ಇಲಾಖೆ ರೈತರಿಗೆ ಸೂಚಿಸಿದೆ.

“ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಬೇಸಿಗೆ ಬೆಳೆಗೆ ನೀರು ಉಳಿಸುವ ಸಲುವಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಾಗ ಮಳೆಯ ಪ್ರಮಾಣಕ್ಕನುಗುಣವಾಗಿ ಕಾಲುವೆಗಳಲ್ಲಿ ನೀರು ಹರಿಸಲಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಹೆಚ್ಚು ನೀರುಣಿಸುವ ಭತ್ತದ ಬೆಳೆಯನ್ನು ಹೊರತುಪಡಿಸಿ ಅರೆ ನೀರಾವರಿ ಬೆಳೆಗಳನ್ನು ಬೆಳೆಯಬೇಕು” ಎಂದು ತಿಳಿಸಿದ್ದಾರೆ.

“ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶದ ಕಬ್ಬು 2,800 ಎಕರೆ, ತೋಟಗಾರಿಕೆ 182 ಎಕರೆ, ಅರೆ ನೀರಾವರಿ 20,792 ಎಕರೆ ಒಳಗೊಂಡಂತೆ ಒಟ್ಟು 23,774 ಎಕರೆ, ದೇವರಬೆಳಕೆರೆ ಪಿಕಪ್ ಯೋಜನೆಯ ಅಚ್ಚುಕಟ್ಟು ಪ್ರದೇಶದ ಕಬ್ಬು 500 ಎಕರೆ, ತೋಟಗಾರಿಕೆ 458 ಎಕರೆ, ಅರೆ ನೀರಾವರಿ 3,332 ಎಕರೆ ಒಳಗೊಂಡಂತೆ ಒಟ್ಟು 4,280 ಎಕರೆ ಹಾಗೂ ಆನವೇರಿ ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶದ ಕಬ್ಬು 200 ಎಕರೆ, ತೋಟಗಾರಿಕೆ 121 ಎಕರೆ, ಅರೆ ನೀರಾವರಿ 5,998 ಎಕರೆ ಒಳಗೊಂಡಂತೆ ಒಟ್ಟು 6,319 ಮಾದರಿ ಬೆಳೆ ಬೆಳೆಯಲು ಹಾಗೂ ಈ ಬೆಳೆಗಳನ್ನು ಬೆಳೆಯದೆ ಭತ್ತ ಮತ್ತು ಇನ್ನಿತರೆ ಬೆಳೆ ಬೆಳೆದರೆ ಜಲ ಸಂಪನ್ಮೂಲ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮದ್ಯ ಮಾರಾಟಕ್ಕೆ ಎಂಎಸ್‌ಐಎಲ್‌ಗೆ ಅನುಮತಿ; ಮಹಿಳೆಯರ ಖಂಡನೆ

“ಬೆಳೆ ಪದ್ಧತಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಪಂಪ್ ಮಾಡಿ ಅನಧಿಕೃತವಾಗಿ ನೀರನ್ನು ಬಳಸಿಕೊಂಡು ನೀರಾವರಿ ಬೆಳೆಗಳನ್ನು ಬೆಳೆದು ನಿಯಮ ಉಲ್ಲಂಘನೆ ಮಾಡಿದಲ್ಲಿ ಪರಿಶೀಲಿಸಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ, ನಂ.3 ಭದ್ರಾ ನಾಲಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಿ ಎಸ್ ಪಟೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...