ದಾವಣಗೆರೆ | ಹೊಸಬರಿಗೆ ಅವಕಾಶ ಕೇಳಿದ್ದರಲ್ಲಿ ತಪ್ಪೇನಿದೆ: ಮಾಜಿ ಸಚಿವ ರೇಣುಕಾಚಾರ್ಯ

Date:

ಮುಂಬರುವ ಲೋಕಸಭೆ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಾಗ ಹೊಸಮುಖಗಳಿಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದೇವೆ. ಯಾರ ವಿರುದ್ಧವೂ ಪಿತೂರಿ ಮಾಡಿಲ್ಲ. ಅದರಲ್ಲಿ ತಪ್ಪೇನಿದೆ ಎಂದು  ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ, ಹಾಲಿ ಜಿ ಎಂ ಸಿದ್ದೇಶ್ವರರ ಹೆಸರು ಪ್ರಸ್ತಾಪಿಸದೇ ಅಸಮಾಧಾನ ಹೊರಹಾಕಿದ್ದಾರೆ.

- Advertisement -

ದಾವಣಗೆರೆಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ದಾವಣಗೆರೆಯಲ್ಲಿ ನಾಲ್ವರು ಟಿಕೆಟ್ ಆಕಾಂಕ್ಷಿಗಳಿದ್ದೇವೆ. ಹೈಕಮಾಂಡ್ ವರಿಷ್ಠರು ಅಭಿಪ್ರಾಯ ಪರಿಗಣಿಸುತ್ತಾರೆಂಬ ವಿಶ್ವಾಸವಿದೆ” ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಿಜೆಪಿ ರಾಜಕೀಯ ಪಕ್ಷ. ನಾವೆಲ್ಲರೂ ಒಮ್ಮತದಿಂದ ತೀರ್ಮಾನ ನೀಡಿ ಹೊಸ ಮುಖಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಜಿಲ್ಲೆಯ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಹೇಳಿದ್ದೇವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಆರ್‌ಎಸ್‌ಎಸ್‌ನ ಪ್ರಮುಖರು, ಇಲ್ಲಿಗೆ ಬಂದಿರುವ ವೀಕ್ಷಕರಿಗೆ ನಾಲ್ಕು ಗೋಡೆಗಳ ಮಧ್ಯೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ” ಎಂದು ಹೇಳಿದರು.

“ನಾಲ್ಕು ಜನ ಅಭ್ಯರ್ಥಿಗಳಿದ್ದೇವೆ. ಟಿಕೆಟ್ ನೀಡುವಂತೆ ಕೇಳಿದ್ದೇವೆ. ನಮ್ಮವರೇ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರ ಮನೆಯಲ್ಲಿ ಸೇರಿದ್ದರಲ್ಲಿ ತಪ್ಪೇನಿದೆ? ನಾವೇನೂ ಕಾಂಗ್ರೆಸ್‌ನವರ ಮನೆಯಲ್ಲಿ ಸೇರಿದ್ದೇವಾ? ರವೀಂದ್ರನಾಥ್ ತುಂಬಾ ಹಿರಿಯರು. ಅವರೊಟ್ಟಿಗೆ ಸೇರಿ ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆ, ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಬೇಕು. ನಾವೇನೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಬಂಡಾಯ ಸಭೆ ಅಲ್ಲ. ದೇಶದಲ್ಲಿ 400 ಸ್ಥಾನ ಹಾಗೂ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಸಮಾಲೋಚನೆ ನಡೆಸುತ್ತೇವೆ” ಎಂದರು.

“ಕಾರ್ಯಕರ್ತರು, ಮುಖಂಡರು ನನ್ನನ್ನು ಸ್ಪರ್ಧೆ ಮಾಡಿ ಎನ್ನುತ್ತಿದ್ದಾರೆ. ಕಾರ್ಯಕರ್ತರ ಮನದಾಳದ ಮಾತು ಹೇಳಿದ್ದೇವೆ. ರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ್ದೇವೆ, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ನಾವು ಕೇಳಿದ್ದು ಸತ್ಯ, ಇದನ್ನು ಮುಚ್ಚಿಡಲು ಆಗಲ್ಲ. ದಾವಣಗೆರೆ ಜಿಲ್ಲೆಯ ಪಕ್ಷದ ಸಂಘಟನೆ ದೃಷ್ಟಿಯಿಂದ ಅವಕಾಶ ಸಿಗಬಹುದೆಂಬ ಆಶಾಭಾವನೆ ನಮ್ಮೆಲ್ಲರಿಗೂ ಇದೆ. ನನ್ನ ಭಾವನೆ ಮತ್ತೊಬ್ಬರ ಭಾವನೆ ಅಲ್ಲ. ಕಾರ್ಯಕರ್ತರ ಭಾವನೆಗಳನ್ನೂ ತಿಳಿಸಿದ್ದೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮಾ.7ರಂದು ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನಾ ಸಮಾರಂಭ; ಸಚಿವ ಈಶ್ವರ್ ಖಂಡ್ರೆ

ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ಟಿ ಜಿ ರವಿಕುಮಾರ್, ಜಗಳೂರು ಮಾಜಿ ಶಾಸಕ ಗುರುಸಿದ್ದನಗೌಡ, ಲೋಕಿಕೆರೆ ನಾಗರಾಜ್ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...