ಬಹುಮಹಡಿ ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಂಪ್ಯೂಟರ್ ಸೇರಿದಂತೆ ಲಕ್ಷಾಂತರ ಮೌಲ್ಯದ ಕ್ರೀಡಾ ಉಪಕರಣಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯ ಕಾಸೆಲ್ ಆರ್ಕೆಡ್ ಬಿಲ್ಡಿಂಗ್‌ನಲ್ಲಿ ನಡೆದಿದೆ.
ನಿನ್ನೆ (ಫೆ.4) ರಾತ್ರಿ ಸುಮಾರು 8.30ಕ್ಕೆ ಕಾಸೆಲ್ ಆರ್ಕೆಡ್ ಸ್ಪೋರ್ಟ್ಸ್‌ನ ಅನಿಮೇಶನ್ ಅಂಡ್ ಸ್ನೋಕರ್ ಜೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅರ್ಧ ಗಂಟೆಯೊಳಗೆ ದಟ್ಟ ಹೊಗೆ ಆವರಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಸುಮಾರು 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಕಟ್ಟಡದಲ್ಲಿ ಬೆಂಕಿ ನಿರೋಧಕ ಇಲ್ಲದಿರುವುದು ಹಾಗೂ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ.
ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಫೆ. 16ರಂದು ವಿಚಾರ ಸಂಕ್ರಾಂತಿ ಕಾರ್ಯಕ್ರಮ
