ದಾವಣಗೆರೆ | ಲಾಕಪ್‌ಡೆತ್ ಆರೋಪ; ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ

Date:

ಮಟ್ಕಾ ಆಡಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದ ಆರೋಪಿ, ಪೊಲೀಸ್‌ ಠಾಣೆಯಲ್ಲೇ ಕುಸಿದುಬಿದ್ದು, ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ನಡೆದಿದೆ. ಆತನನ್ನು ಪೊಲೀಸರೇ ಕೊಂದಿದ್ದಾರೆ. ಇದು ಲಾಕಪ್‌ಡೆತ್‌ ಎಂದು ಮೃತದ ಸಂಬಂಧಿಕರು ಪೊಲೀಸ್‌ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

- Advertisement -

ಶುಕ್ರವಾರ ರಾತ್ರಿ ಘಟನೆ ನಡೆದಿದೆ. ಮಟ್ಕಾ ಆರೋಪದ ಮೇಲೆ ಪೊಲೀಸರು ಆದಿಲ್‌ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಆತನಿಗೆ ‘ಬಿ.ಪಿ’ ಕಡಿಮೆಯಾದ ಪರಿಣಾಮ ಕುಸಿದು ಬಿದ್ದಿದ್ದಾನೆ. ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಆದರೆ, ಇದನ್ನು ಲಾಕಪ್‌ಡೆತ್ ಎಂದು ಆರೋಪಿಸಿರುವ ಮೃತನ ಸಂಬಂಧಿಕರು ಪ್ರತಿಭಟನೆ ನಡೆಸಿ, ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 11 ಮಂದಿ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್, “ಆದಿಲ್‌ ಪೊಲೀಸ್‌ ಠಾಣೆಯಲ್ಲಿ 6-7 ನಿಮಿಷ ಕೂಡ ಇರಲಿಲ್ಲ. ಠಾಣೆಗೆ ಬರುತ್ತಲೇ ಆಗ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಆತನ ಸಂಬಂಧಿಗಳು ಲಾಕಪ್‌ಡೆತ್ ಎನ್ನುತ್ತಿದ್ದಾರೆ. ಠಾಣೆಯಲ್ಲಿ ಸಿಸಿ ಕ್ಯಾಮೆರಾ ಇದೆ. ಪರಿಶೀಲನೆ ಮಾಡುತ್ತೇವೆ. ನ್ಯಾಯಾಧೀಶರ ಸಮ್ಮುಖದಲ್ಲಿ ಪ್ರಾಮಾಣಕವಾಗಿ ತನಿಖೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...