ರಾಜ್ಯದಲ್ಲಿ ಹೆಚ್ಚಿರುವ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಹಂಚಿಕೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಕೇಳಲಾಗಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ನಮ್ಮ ಸಮಾಜಕ್ಕೆ ಗೌರವ ನೀಡಿಲ್ಲ. ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಇರುವ ನಮ್ಮ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಲ್ಲಿ ಕೇವಲ ಒಂದು ಮತ್ತು ಕಾಂಗ್ರೆಸ್ ನಲ್ಲಿ ಕೇವಲ ಎರಡು ಟಿಕೆಟ್ ಹಂಚಿಕೆ ಮಾಡಲಾಗಿದೆ. ಇದು ನಮ್ಮ ಸಮಾಜಕ್ಕೆ ಆಗಿರುವ ನ್ಯಾಯವನ್ನು ಎತ್ತಿ ತೋರಿಸುತ್ತದೆ ಹಾಗಾಗಿ ನಾವು ಇತರ ವಿರುದ್ಧದ ನಿಯತ್ತಿದ್ದೇವೆ ರಾಷ್ಟ್ರೀಯ ಪಕ್ಷಗಳು ನಮ್ಮ ಸಮಾಜಕ್ಕೆ ಮನ್ನಣೆ ನೀಡಿ ಲೋಕಸಭೆ ಟಿಕೆಟ್ ಘೋಷಿಸಬೇಕಿತ್ತು ಎಂದು ಸಮಾಧಾನ ವ್ಯಕ್ತಪಡಿಸಿದರು.
ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಕರೆದಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಈ ವಿಚಾರ ಕುರಿತಂತೆ ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತೇವೆ. ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ಕಲಬುರಗಿ, ಉತ್ತರ ಕನ್ನಡ, ಚಿಕ್ಕೋಡಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮಾಜ ಹೆಚ್ಚಿದೆ. ಮಾತ್ರವಲ್ಲ, ನಿರ್ಣಾಯಕ ಪಾತ್ರ ವಹಿಸುತ್ತದೆ. ಹಾಗಾಗಿ, ಹೆಚ್ಚಿನ ಪ್ರಾತಿನಿಧ್ಯ ದೊರಕದಿದ್ದರೆ ಉತ್ತರ ನೀಡುತ್ತೇವೆ ಎಂದು ಹೇಳಿದರು.
ಸಮಾಜಕ್ಕೆ ಆಗಿರುವ ಅನ್ಯಾಯ ಕುರಿತಂತೆ ಮುಖಂಡರು, ಬಾಂಧವರ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುದೀರ್ಘವಾಗಿ ಚರ್ಚಿಸುತ್ತೇವೆ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರಿದ್ದಾರೆ. ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ, ಕಾದು ನೋಡಿ ಎಂದು ಎಚ್ಚರಿಕೆ ನೀಡಿದರು.