ದಾವಣಗೆರೆ | ಆಸ್ಪತ್ರೆ ಎದುರು ಪ್ರದರ್ಶನಕ್ಕಷ್ಟೇ ನಿಂತಿದೆ ಆ್ಯಂಬುಲೆನ್ಸ್‌

Date:

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ‘108’ ಆ್ಯಂಬುಲೆನ್ಸ್‌ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ‘108’ ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು ರೋಗಿಗಳ ಸೇವೆಗೋ? ಅಥವಾ ಆವರಣದಲ್ಲಿ ನಿಲ್ಲಿಸಿ ಪ್ರದರ್ಶನ ಮಾಡುವುದಕ್ಕೋ? ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

- Advertisement -

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಬಳಿ 108 ಅಂಬ್ಯುಲೆನ್ಸ್ ಕಳೆದ 25 ದಿನಗಳಿಂದ ಕೆಟ್ಟು ನಿಂತಿದೆ. ಪರಿಣಾಮವಾಗಿ ರೋಗಿಗಳು, ಗರ್ಭಿಣಿಯರು ತುರ್ತು ಸಂದರ್ಭಗಳಲ್ಲಿ 108ಕ್ಕೆ ಕರೆ ಮಾಡಿದರೆ ಅಂಬ್ಯುಲೆನ್ಸ್ ಸಿಗುತ್ತಿಲ್ಲ ಎಂದು ರೋಗಿಗಳು ಮತ್ತು ಅವರ ಪಾಲಕರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕಷ್ಟಕಾಲದಲ್ಲಿ ರೋಗಿಗಳಿಗೆ ನೆರವಿಗೆ ನಿಲ್ಲಬೇಕಾದ ‘108’ ಆ್ಯಂಬುಲೆನ್ಸ್, ರೋಗಿಗಳಿಗೆ ಉಪಯೋಗವಾಗುದಕ್ಕಿಂತಲೂ ಕೆಟ್ಟು ನಿಲ್ಲುವುದೇ ಹೆಚ್ಚಾಗಿದೆ. ಆಸತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ ಅಥವಾ ಆ್ಯಂಬುಲೆನ್ಸ್ ನಿರ್ವಹಣೆ ಮಾಡುವ ಅಧಿಕಾರಿಗಳ ನಿರ್ಲಕ್ಷದಿಂದಾಗಿ, ಸೂಕ್ತ ನಿರ್ವಹಣೆ ಇಲ್ಲದೆ ಆ್ಯಂಬುಲೆನ್ಸ್ ಸಾರ್ವಜನಿಕರ ಬಳಕೆಗೆ ದೊರೆಯದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಕಳೆದ 25 ದಿನಗಳಿಂದ 108 ಅಂಬುಲೆನ್ಸ್ ವಾಹನದ ಬ್ಯಾಟರಿ ಹಾಳಾಗಿದೆ. ಏಜೆನ್ಸಿಯವರಾಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಲೀ ಆ ಬಗ್ಗೆ ಗಮನ ಕೊಡುತ್ತಿಲ್ಲ. ಪರಿಣಾಮ ತಾಲೂಕಿನ ಮಹಿಳೆಯರು, ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಹರಿಹರ ತಾಲೂಕಿನ ಜನರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...