ದಾವಣಗೆರೆ | ಖೋಟಾನೋಟು ಚಲಾವಣೆ; ಆರೋಪಿಗಳ ಬಂಧನ

Date:

ಖೋಟಾನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ಸರ್ವಿಸ್ ರಸ್ತೆಯಲ್ಲಿ ಇಬ್ಬರು ಖೋಟಾನೋಟು ಚಲಾವಣೆಗೆ ಪ್ರಯತ್ನಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆರೋಪಿ ತಳವಾರ ಕುಬೇರಪ್ಪ, ಹರೀಶ ಬಿ ಹರೀಶಗೌಡ ಎಂಬವರನ್ನು ಬಂಧಿಸಲಾಗಿದೆ. ಅವರಿಂದ 500 ರೂ, ಮುಖಬೆಲೆಯ 37,000 ರೂ. ಮೌಲ್ಯದ ಖೋಟಾನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಇಬ್ಬರು ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ದಾವಣಗೆರೆ ಬಾಡಾ ಕ್ರಾಸ್ ಬಳಿ ಜೆ. ರುದೇಶ, ಮನೋಜ್ ಗೌಡ, ಸಂದೀಪ, ಕೃಷ್ಣನಾಯ್ಕ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು, 500 ರೂ. ಮುಖಬೆಲೆಯ ಒಟ್ಟು 9,000 ರೂ. ಮೌಲ್ಯದ ಖೋಟಾನೋಟುಗಳನ್ನು ವಶಕ್ಕೆ ಪಡೆಯಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಸೀಜ್ ಮಾಡಲಗಿದೆ ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

3 ಮತ್ತು 4 ನೇ ಆರೋಪಿತರ ಮಾಹಿತಿ ಮೇರೆಗೆ ಮೈಸೂರು ಜಿಲ್ಲೆ ಕೂರಗಳ್ಳಿ ಮೇಗಲಕೊಪ್ಪಲಿನಲ್ಲಿರುವ 3ನೇ ಆರೋಪಿಯ ಬಾಡಿಗೆ ಮನೆಯಲ್ಲಿ  7,07,700 ರೂ. ಮೌಲ್ಯದ ಖೋಟಾನೋಟುಗಳು, 43,000 ರೂ. ಮೌಲ್ಯದ ಅಸಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಒಟ್ಟು 3,00,000 ರೂ. ಮೌಲ್ಯದ ಲ್ಯಾಪ್ ಟಾಪ್ ಗಳು, ಕಲರ್ ಪ್ರಿಂಟರ್‌ಗಳು, ಪೇಪರ್ ಇತರೇ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಬೇಧಿಸಿದ ಹರಿಹರ ಸಿ.ಪಿ.ಐ ಸುರೇಶ ಸಗರಿ, ಪಿ.ಎಸ್.ಐ ಬಿ.ಎಸ್ ಅರವಿಂದ್, ಅಬ್ದುಲ್ ಖಾದರ್ ಜಿಲಾನಿ, ದಾವಣಗೆರೆ ಡಿ.ಸಿ.ಆರ್.ಬಿ ವಿಭಾಗದ ಸಿಬ್ಬಂದಿಯವರಾದ ಮಜೀದ್, ಅಂಜಿನೇಯ, ರಾಘವೇಂದ್ರ, ರಮೇಶ್ ನಾಯ್ಕ, ಬಾಲರಾಜ್. ಹರಿಹರ ವೃತ್ತ ಕಛೇರಿಯ ಮಹ್ಮದ್ ಇಲಿಯಾಜ್, ನಾಗರಾಜ, ಮುರುಳಿಧರ, ಹರಿಹರ ಗ್ರಾಮಾಂತರ ಠಾಣೆಯ ಸಿಬ್ಬಂದಿಯವರಾದ ರಮೇಶ್, ನೀಲಮೂರ್ತಿ, ಬಣಕಾರ ಶ್ರೀಧರ, ಗಂಗಾಧರ, ಸಿದ್ದಪ್ಪ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯ ಜಾಧವ್, ರಾಘವೇಂದ್ರ, ಶಾಂತ್ ಕುಮಾರ್ ರವರಿಗೆ ಬಹುಮಾನ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ವಿಜಯಕುಮಾರ.ಎಂ. ಸಂತೋಷ, ಜಿ.ಮಂಜುನಾಥ, ಡಿವೈಎಸ್ಪಿಗಳಾದ ಬಿ.ಎಸ್ ಬಸವರಾಜ ಇತರರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ...