ದಾವಣಗೆರೆ | ಬರಿದಾಗುವ ಆತಂಕದಲ್ಲಿದೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ

Date:

ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ ಭಾಗದ ಜನರ ಜೀವನಾಡಿ ಶಾಂತಿಸಾಗರ (ಸೂಳೆಕೆರೆ) ಕೂಡ ಬರಿದಾಗುತ್ತಿದ್ದು, ನೀರಿನ ಅಭಾವ ಹೆಚ್ಚಾಗಿದೆ.

ಸ್ಥಳೀಯರು ತಮ್ಮ ತೋಟ ಉಳಿಸಿಕೊಳ್ಳಲೂ ಕೆರೆಯ ನೀರಿಗೆ ಮುಗಿಬಿದ್ದಿದ್ದಾರೆ. ಇದರಿಂದ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂಬ ಖ್ಯಾತಿಯ ಶಾಂತಿಸಾಗರ ಕೆರೆ ಶೀಘ್ರದಲ್ಲಿ ಬರಿದಾಗುವ ಆತಂಕ ಎದುರಾಗಿದೆ.

ರೈತರು ತೋಟಗಳನ್ನು ಉಳಿಸಿಕೊಳ್ಳಲು ಶಾಂತಿಸಾಗರದ ಹಿನ್ನೀರು ಭಾಗದಲ್ಲಿ ನೂರಾರು ಪಂಪ್‌ಸೆಟ್‌ಗಳನ್ನು ಅಳವಡಿಸಿ, ನಿರಂತರ ತೋಟಗಳಿಗೆ ನೀರು ಹಾಯಿಸುತ್ತಿದ್ದಾರೆ. ಅಂತರ್ಜಲ ಕುಸಿದು, ಕೊಳವೆಬಾವಿಗಳು ಬರಿದಾಗಿರುವ ರೈತರು ಈ ಕೆರೆಯ ನೀರನ್ನೇ ಅವಲಂಭಿಸುವುದು ಅನಿವಾರ್ಯವಾಗಿದೆ. ಲಕ್ಷಾಂತರ ರೂ. ಖರ್ಚುಮಾಡಿ ಬೆಳೆದ ತೋಟ ನೀರಿಲ್ಲದೆ ಒಣಗುತ್ತಿರುವುದನ್ನು ನೋಡಲು ಚಿಂತೆಯಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಳ್ಳುವ ಇಲ್ಲಿನ ರೈತರು. ಬೆಳೆ ಉಳಿಸಿಕೊಳ್ಳಲು ರಾತ್ರಿ-ಹಗಲು ಕೆರೆಯಿಂದ ನೀರನ್ನು ಹಾಯಿಸಿಕೊಳ್ಳುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೊಂಡದಹಳ್ಳಿ, ಹಿರೇಉಡ, ದೇವರಹಳ್ಳಿ, ಚೆನ್ನಾಪುರ, ಕಗತೂರು, ಬುಳುಸಾಗರ, ಮಂಟರಘಟ್ಟ, ಹಟ್ಟಿ, ಆಕಳಕಟ್ಟೆ, ಇಟಗಿ, ಚಿಕ್ಕದೇವರಹಳ್ಳಿ, ಬನ್ನಿಹಟ್ಟಿ, ಗುಳ್ಳಳ್ಳಿ ಗ್ರಾಮಗಳ ಸುಮಾರು 200 ಪಂಪ್‌ಸೆಟ್‌ಗಳು ಕೆರೆಯ ಹಿನ್ನೀರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇರುವ ಕೊಳವೆಬಾವಿಗಳು ಬತ್ತಿವೆ. ಹೊಸದಾಗಿ ಕೊರೆಯಿಸಿರುವ ಕೊಳವೆ‌ಬಾವಿಗಳಲ್ಲಿ ನೀರು ಬರುತ್ತಿಲ್ಲ. ಕೆರೆಯ ಹಿನ್ನೀರಿಗೆ ಮೋಟಾರ್ ಅಳವಡಿಸಿಕೊಂಡು ತೋಟ ಉಳಿಸಿಕೊಳ್ಳುತ್ತಿದ್ದೇವೆ. ಭದ್ರಾ ನಾಲೆಯ ನೀರನ್ನು ಶಾಂತಿಸಾಗರಕ್ಕೆ ಬಿಟ್ಟರೆ, ಇದರಿಂದ ಕೊಂಚ ನಿರಾತಂಕವಾಗುತ್ತದೆ ಎನ್ನುತ್ತಾರೆ ರೈತರು.

ಸಂತೇಬೆನ್ನೂರು ಸೇರಿದಂತೆ ಚನ್ನಗಿರಿ ತಾಲೂಕಿನ ನೂರಾರು ಗ್ರಾಮಗಳಿಗೆ ಕುಡಿಯುವ ನೀರಿನ ಆಗರ ಈ ಕೆರೆ. ಚಿತ್ರದುರ್ಗ, ಹೊಳಲ್ಕೆರೆ ಭಾಗಗಳಿಗೂ ಇಲ್ಲಿಂದ ಕುಡಿಯುವ ನೀರು ಪೂರೈಕೆಯಾಗುತ್ತದೆ. ಸದ್ಯ ಸಂಗ್ರಹದಲ್ಲಿರುವ ನೀರು 30 ದಿನಗಳಿಗಾಗೂವುದು ಅನುಮಾನ. ಜೂನ್‌ವರೆಗೆ ಕುಡಿಯುವ ನೀರು ಪೂರೈಸಲು 0.54 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ. ಭದ್ರಾ ನಾಲೆಯಿಂದ ಕೆರೆಗೆ ನೀರು ಹರಿಸಿದರೆ ಕುಡಿಯುವ ನೀರು ಸಿಗಲಿದೆ. ಇಲ್ಲವಾದರೆ ಕುಡಿಯುವ ನೀರಿಗಾಗಿ ತೀವ್ರ ಸಂಕಷ್ಟ ಅನುಭವಿಸುವ ದಿನಗಳು ಎದುರಾಗಲಿವೆ ಎನ್ನುತ್ತಾರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಬಿಎನ್‌ ಲೋಹಿತ್ ಮಾದ್ಯಮದೆದುರು ಆತಂಕ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ...

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು; ಎಡಿಜಿಪಿ ಅಲೋಕ್ ಕುಮಾರ್

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ...