ನವವಿವಾಹಿತೆ ಮೇಲೆ ಆರೋಪಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಪಿ ಕಾಟಪ್ಪನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.
ನವವಿವಾಹಿತೆ ಇತ್ತೀಚೆಗೆ ತನ್ನ ತವರು ಮನೆಗೆ ಬಂದಿದ್ದಳು. ಮಹಿಳೆ ಮನೆಯ ಪಕ್ಕದ ಮನೆಯಲ್ಲಿಯೇ ಆರೋಪಿ ಕಾಟಪ್ಪ ವಾಸವಾಗಿದ್ದಾನೆ. ಜೂನ್ 21ರಂದು ಆರೋಪಿ ಮಹಿಳೆಯ ಮನೆಗೆ ಏಕಾಏಕಿ ನುಗ್ಗಿ ಆಕೆಯ ಮೇಲೆ ಅತ್ಯಾಚರ ಎಸಗಲು ಮುಂದಾಗಿದ್ದಾನೆ. ಇದಕ್ಕೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ, ಕೂಗಾಡಿದ್ದಾಳೆ.
ಮಹಿಳೆಯ ಕಿರುಚಾಟ ಕೇಳಿದ ಅಕ್ಕಪಕ್ಕದ ಮನೆಯವರು ಮನೆಯ ಬಳಿ ಸೇರುವುದಕ್ಕೆ ಆರಂಭ ಮಾಡಿದ್ದಾರೆ. ಈ ವೇಳೆ ಆರೋಪಿ ಮಹಿಳೆಯ ಕುತ್ತಿಗೆಗೆ ಸೇರಿ ಇನ್ನು ಎರಡ್ಮೂರು ಕಡೆ ಚಾಕುವಿನಿಂದ ಇರಿದು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಗ್ರಾಮಸ್ಥರು ಕೂಡಲೇ ಆತನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ವಿಚಾರ ತಿಳಿದ ಪೊಲೀಸರು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಮೊದಲಿಗೆ ಜಗಳೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ
ಆರೋಪಿ ಕಾಟಪ್ಪ ಈ ಹಿಂದೆ ಎರಡೂ ಬಾರಿ ಮಹಿಳೆ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನ ಪಟ್ಟಿದ್ದಾನೆ. ಅಲ್ಲದೇ, ಮಹಿಳೆಯ ಮದುವೆಯ ಸಮಯದಲ್ಲಿಯೂ ಅತ್ಯಾಚಾರಕ್ಕೆ ಯತ್ನಿಸಿದ್ದನು ಎನ್ನಲಾಗಿದೆ.
ಸದ್ಯ ಈ ಘಟನೆಗೆ ಸಂಬಂಧಿಸಿದಂತೆ, ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.