ದಾವಣಗೆರೆ | ಜಗಳೂರಲ್ಲಿ ನವೆಂಬರ್ 9ಕ್ಕೆ ʼಬುದ್ಧನ ಬೆಳಕುʼ ನಾಟಕ ಪ್ರದರ್ಶನ

Date:

Advertisements

ಜಗಳೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಪ್ರಗತಿಪರ ಸಂಘಟನೆ ಮುಖಂಡರುಗಳು ಬುದ್ಧನ ಬೆಳಕು ನಾಟಕೋತ್ಸವ ಪೂರ್ವ ಭಾವಿ ಸಭೆ ನಡೆಸಿತು. ʼಬುದ್ದನಬೆಳಕುʼ ನಾಟಕವನ್ನು ಬಂಧುತ್ವ ಕಲಾತಂಡದಿಂದ ರಾಜ್ಯದ ವಿವಿಧ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ನಾಟಕೋತ್ಸವ ಪ್ರದರ್ಶನ ನೀಡಲಿದೆ.

ವಿಕಾಸ್ ಆರ್. ಮೌರ್ಯ ಅವರ ವಿರಚಿತ, ಡಿಂಗ್ರಿ ನರೇಂದ್ರ ಅವರ ನಿರ್ದೇಶನದ ನಾಟಕ, ನವೆಂಬರ್ ೦9, ಗುರುವಾರ ಸಂಜೆ 6ಗಂಟೆಗೆ ಪಟ್ಟಣದ ಬಯಲು ರಂಗಮಂದಿರದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಗೌತಮ ಬುದ್ದ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಅವರ ಅಭಿಮಾನಿಗಳು ವಿವಿಧ ಸಂಘಸಂಸ್ಥೆಯ ಮುಖಂಡರುಗಳು,ವಿದ್ಯಾರ್ಥಿ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಮುಖಂಡ ವಕೀಲ ಟಿ.ಬಸವರಾಜ್ ಮರೇನಹಳ್ಳಿ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕ ಧನ್ಯಕುಮಾ‌ರ್, ಕಾನನಕಟ್ಟೆ ಪ್ರಭು, ಕಲ್ಲೇಶ್ ರಾಜ್ ಪಟೇಲ್, ಪ್ರಾಂಶುಪಾಲ ನಾಗಲಿಂಗಪ್ಪ, ಹಟ್ಟಿ ತಿಪ್ಪೇಸ್ವಾಮಿ, ಶಂಭುಲಿಂಗಪ್ಪ, ಹನುಮಂತಾಪುರ ಶಿವಕುಮಾರ್, ವಕೀಲ ಸಣ್ಣಒಬಯ್ಯ, ನಾಗೇಶ್, ಲುಕ್ಟ್ರಾನ್ ಖಾನ್, ಎ.ಪಿ. ನಿಂಗಪ್ಪ, ರಾಜಪ್ಪ ವ್ಯಾಸಗೊಂಡನಹಳ್ಳಿ, ಸತೀಶ್, ಮಾದಿಹಳ್ಳಿ ಮಂಜುನಾಥ್, ಗೋಗುದ್ದು ತಿಪ್ಪೇಸ್ವಾಮಿ, ಹನುಮಂತಪ್ಪ, ಬಡಪ್ಪ, ಪರುಶರಾಮ್, ಅನ್ವರ್ ಅಲಿ ಸೇರಿದಂತೆ ಹಲವರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X