ದಾವಣಗೆರೆ | ದಸಂಸಗೆ ಐವತ್ತರ ಸಂಭ್ರಮ; ಬೆಂಗಳೂರಿನಲ್ಲಿ ಸಂಭ್ರಮೋತ್ಸವ

Date:

Advertisements

ಪ್ರೊ. ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು (ದಸಂಸ) 50 ವರ್ಷಗಳ ಹೋರಾಟದ ಹೆಜ್ಜೆ ಗುರುತನ್ನು ಹೊಂದಿದ್ದು, ಜುಲೈ 10 ರಂದು ಬೆಂಗಳೂರಿನಲ್ಲಿ 50ನೇ ವರ್ಷದ ಸಂಭ್ರಮಾಚರಣೆಯನ್ನು ಆಯೋಜಿಸಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಕಾರ್ಯಕ್ರಮದ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. “ದಸಂಸ ‌ಆರಂಭವಾಗಿ ಐವತ್ತು ವರ್ಷಗಳ ಸಂಭ್ರಮದಲ್ಲಿದ್ದೇವೆ. ಸಮಾಜದ ದೂರದೃಷ್ಠಿ, ಒಳಿತಿಗಾಗಿ ಪ್ರೋ. ಕೃಷ್ಣಪ್ಪನವರು ಒಡನಾಡಿಗಳೊಂದಿಗೆ ಪ್ರಾರಂಭಿಸಿದ ಮೂಲ ದಸಂಸದ ಆಶಯಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕಾಗಿದೆ. ಕೃಷ್ಣಪ್ಪನವರು ಡಾ. ಅಂಬೇಡ್ಕರ್ ರವರ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟ ಎನ್ನುವ ಮೂಲಮಂತ್ರದೊಂದಿಗೆ ಸಾಮಾಜಿಕವಾಗಿ ಅನೇಕ ಹೋರಾಟಗಳನ್ನು ಸಂಘಟಿಸಲು ಕಾರಣರಾದರು ಅವರನ್ನು ನಾವು ಅನುಸರಿಸಬೇಕಿದೆ” ಎಂದು ಹೇಳಿದರು.

“ತಾಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು, ಸಾರ್ವಜನಿಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದರು.

Advertisements

ಈ ವೇಳೆ ದಸಂಸ ಮಹಿಳಾ ಸಂಚಾಲಾಕಿ ವಿಜಯಲಕ್ಷ್ಮಿ ಹಾಗೂ ದಾವಣಗೆರೆ ತಾಲ್ಲೂಕು ಸಂಚಾಲಕ ಹನುಮಂತಪ್ಪ ಅಣಜಿ, ಹರಿಹರ ತಾಲ್ಲೂಕ್ ಸಂಚಾಲಕ ಪಿ. ಜೆ. ಮಹಾಂತೇಶ್, ಜಗಳೂರು ತಾಲ್ಲೂಕ್ ಸಂಚಾಲಕ ಕುಬೆಂದ್ರಪ್ಪ, ನ್ಯಾಮತಿ ತಾಲ್ಲೂಕ್ ಸಂಚಾಲಕ ಚಂದ್ರಪ್ಪ, ಹೊನ್ನಾಳಿ ತಾಲ್ಲೂಕ್ ಸಂಚಾಲಕ ಪರಮೇಶ್ ಮತ್ತು ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಪ್ರದೀಪ್. ಕೆ ಟಿ ಜೆ ನಗರ, ಮೆಳ್ಳೆಕಟ್ಟೆ ಪರುಶುರಾಮ್, ಕೊಡಗನೂರ್ ಲಕ್ಷ್ಮಣ,ಜಿಲ್ಲಾ ಖಜಾಂಚಿ ಮಂಜುನಾಥ್ ಆರ್ ತಾಲ್ಲೂಕು ಮಹಿಳಾ ಸಂಚಾಲಾಕಿ ಆರತಿ. ಎಸ್ ಮತ್ತು ತಾಲ್ಲೂಕ್ ಸಂಘಟನಾ ಸಂಚಾಲಕ ನಾಗರಾಜ್ ಬಿ ಚಿತ್ತಾನಹಳ್ಳಿ ಹಾಗೂ ಉಮಾ, ಭವಾನಿ ನಾಗರಾಜ್, ಹಾಗೂ ಇತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X