ದಾವಣಗೆರೆ | ಶಾರ್ಟ್‌ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಟ್ಟೆ ಅಂಗಡಿ

Date:

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.

- Advertisement -

ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಡೀ ಬಟ್ಟೆ ಅಂಗಡಿ ಸುಟ್ಟು ಹೋಗಿದೆ. ಇಂದು(ಅ.25) ಮುಂಜಾನೆ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿದ್ಯುತ್ ತಂತಿಗೆ ಹಕ್ಕಿಯೊಂದು ತಾಗಿದ್ದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಇಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ ಬಟ್ಟೆ ಅಂಗಡಿಗೆ ತಗುಲಿದೆ. ಇದು ಬೆಂಕಿ ಅವಘಡ ಸಂಭವಿಸಲು ಪ್ರಮುಖ ಕಾರಣ ಎನ್ನುತ್ತಿದ್ದಾರೆ ಪ್ರತ್ಯಕ್ಷದರ್ಶಿಗಳು. ಬೆಂಕಿ ಹೊತ್ತಿಕೊಂಡ ವೇಳೆ ಅಂಗಡಿಯಲ್ಲಿ ನಾಲ್ಕುಜನ ಕೆಲಸದವರಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಅವರು ಪ್ರಾಣ ರಕ್ಷಣೆಗಾಗಿ ಓಡಿಹೋಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಬೆಂಕಿ ಬಟ್ಟೆಗಳಿಗೆ ಸಂಪೂರ್ಣ ಆವರಿಸಿದ್ದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿವೆ. ಬಟ್ಟೆ ಅಂಗಡಿ ಸಂಪೂರ್ಣ ಸುಟ್ಟು, ಪಕ್ಕದ ಹೊಟೆಲ್​ಗೂ ಸಣ್ಣಪುಟ್ಟ ಹಾನಿಯಾಗಿದೆ ಎಂದು ಸಂತೆಬೆನ್ನೂರು ಗ್ರಾ.ಪಂ ಸದಸ್ಯ ಆಸೀಪ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...