ದಾವಣಗೆರೆ | ಶಿವಗಂಗೋತ್ರಿ ಆವರಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Date:

ಸಂವಿಧಾನದ ಮಹತ್ವ ಹಾಗೂ ಆಶಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿರುವ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿತ್ತು.

- Advertisement -

ಕುಲಪತಿ ಪ್ರೊ. ಬಿ.ಡಿ.ಕುಂಬಾರ ಅವರು ಸಂವಿಧಾನ ಜಾಗೃತಿ ಸ್ತಬ್ಧಚಿತ್ರಕ್ಕೆ ಗೌರವ ಸಲ್ಲಿಸಿದರು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಪ್ರತಿಮೆಗಳ ಜೊತೆಗೆ ಸಂವಿಧಾನದ ಪೀಠಿಕೆಯ ಫಲಕವನ್ನು ಹೊತ್ತ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ವಿದ್ಯಾರ್ಥಿಗಳಿಗೆ ವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದ ಕುಲಪತಿ ಪ್ರೊ. ಕುಂಬಾರ ಮಾತನಾಡಿ, ಅಂಬೇಡ್ಕರ್ ರಚಿಸಿದ ಸಂವಿಧಾನ ಮಹತ್ವ, ಹಕ್ಕುಗಳು ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಅರ್ಥಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯ, ಭ್ರಾತೃತ್ವ ಭಾವನೆ, ಸ್ವಾಭಿಮಾನಿ ಬದುಕಿಗೆ ಪ್ರೇರಣೆಯಾಗಿರುವ ಸಂವಿಧಾನದ ಆಶಯಗಳಿಗೆ ಮನ್ನಣೆ ನೀಡಬೇಕು ಎಂದು ಕರೆ ನೀಡಿದರು.

ವಿಶ್ವವಿದ್ಯಾನಿಲಯದ ಎನ್‌ಎಸ್ಎಸ್ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆವರಣದ ಒಳಗೆ ಜಾಗೃತಿ ಜಾಥಾ ನಡೆಯಿತು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಡಿ ಸಂವಿಧಾನದ ಜಾಗೃತಿ ಮೂಡಿಸಿದರು.

ಜಾಥಾದಲ್ಲಿ ಕುಲಪತಿ ಪ್ರೊ. ಕುಂಬಾರ, ಕುಲಸಚಿವ ಪ್ರೊ.ವೆಂಕಟರಾವ್ ಪಲಾಟೆ, ಹಣಕಾಸು ಅಧಿಕಾರಿ ಮುದ್ದನಗೌಡ ದ್ಯಾಮನಗೌಡ್ರ, ಸಂಯೋಜನಾಧಿಕಾರಿ ಅಶೋಕಕುಮಾರ ಪಾಳೇದ, ಪ್ರಾಧ್ಯಾಪಕರಾದ ಪ್ರೊ. ಬಿ.ಶಶಿಧರ, ಪ್ರೊ. ಡಾ.ಶಿವಕುಮಾರ ಕಣಸೋಗಿ, ಗೋವಿಂದಪ್ಪ,  ಸಂತೋಷಕುಮಾರ, ಎನ್‌ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸಿದ್ದಪ್ಪ ಕಕ್ಕಳಮೇಲಿ, ಡಾ. ಸೌಮ್ಯ ಬುಳ್ಳಾ ಮತ್ತಿತರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...