ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯಕ್ರಮ ಜರುಗಿತು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿಲಾಯಿತು. ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷರಾದ ಎ.ಡಿ. ಈಶ್ವರಪ್ಪನವರು ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಓದಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಎ.ಡಿ. ಈಶ್ವರಪ್ಪ ಅವರು ಮಾತನಾಡಿ, ಮಕ್ಕಳಿಗೆ ಸಂವಿಧಾನದ ಬಗ್ಗೆ ತಿಳಿಯಲು ಆಸಕ್ತಿ ಬೆಳೆಸಿ, ಸಂವಿಧಾನದ ಬಗ್ಗೆ ತಿಳಿಸುವುದುರಿಂದ ಸಾಮಾಜಿಕ ಮೌಲ್ಯ ಮತ್ತು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ 5ನೇ ವಾರ್ಡ್ ಕಾರ್ಪೊರೇಟರ್ ಸುಧಾ ಇಟ್ಟಿಗುಡಿ ಮಂಜುನಾಥ, ಎಸ್.ಪಿ.ಎಸ್ ನಗರ ಎರಡನೇ ಹಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ ನಾಯ್ಕ, ದಾವಣಗೆರೆ ಜಿಲ್ಲಾ ಉಪಾಧ್ಯಕ್ಷ ಟಿ. ದನಿಕ ತಿಮ್ಮೇನಹಳ್ಳಿ, ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಮನೋಹರ್, ಲಿಂಗರಾಜು ಎಂ. ಗಾಂಧಿನಗರ, ಎಸ್‌ಪಿಎಸ್ ನಗರ ಎರಡನೇ ಹಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.