ದಾವಣಗೆರೆ | ಸಂವಿಧಾನವೇ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್

Date:

ಸಂವಿಧಾನವೇ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದರು.

- Advertisement -

ದಾವಣಗೆರೆ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಬುದ್ಧ, ಬಸವ, ಅಂಬೇಡ್ಕರ್ ಅವರ ಸದಾಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯ ತುಂಬಿರುವುದರಿಂದ ರೈತಾಪಿ ವರ್ಗದಲ್ಲಿ ಹರ್ಷ ಮನೆಮಾಡಿದೆ. ರೈತರು ಬೇಸಿಗೆ ಬೆಳೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
WhatsApp Image 2025 01 26 at 9.34.56 PM

“ಜನಸಾಮಾನ್ಯರ ಬದುಕಿಗೆ ಆರ್ಥಿಕ ಸಬಲತೆಯೊಂದಿಗೆ ಸಾಮಾಜಿಕ ಗೌರವ ತಂದುಕೊಡುವ ದೃಷ್ಟಿಯಿಂದ ಜಾರಿಗೆ ತಂದ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿನ ಜನರ ಜೀವನ ಮಟ್ಟವನ್ನು ಸುಧಾರಿಸಿವೆ. ಈ ಯೋಜನೆಗಳು ರಾಜ್ಯದ ಆರ್ಥಿಕ ಬೆಳವಣಿಗೆಗೆ ಉತ್ತೇಜಕವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ” ಎಂದರು.

“ಜಿಲ್ಲೆಗೆ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿ 8,510 ಮನೆಗಳನ್ನು ಮಂಜೂರು ಮಾಡಲಾಗಿದೆ. ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ 2 ಅಕ್ಕ ಕೆಫೆ ಮಂಜೂರಾಗಿದ್ದು, ಈಗಾಗಲೇ ದಾವಣಗೆರೆ ನಗರದಲ್ಲಿ ಆರಂಭಿಸಲಾಗಿದೆ. ಮಹಿಳಾ ಸ್ವ ಸಹಾಯ ಸಂಘದವರೇ ಇದರ ನಿರ್ವಹಣೆ ಮಾಡುತ್ತಿದ್ದಾರೆ. ದಾವಣಗೆರೆ ಮಹಾನಗರಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಮಂಜೂರಾದ ₹200 ಕೋಟಿ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಜಿಲ್ಲೆ ತೋಟಗಾರಿಕೆಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯ ರೈತರ ಬದುಕನ್ನು ಇನ್ನಷ್ಟು ಹಸನುಗೊಳಿಸಲು ಕೆರೆ ತುಂಬಿಸುವ ಯೋಜನೆ, ನಾಲೆಗಳ ದುರಸ್ಥಿ ಕೈಗೊಳ್ಳುವ ಮೂಲಕ ಕೊನೆ ಭಾಗದ ರೈತರಿಗೂ ನೀರು ಸಿಗುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ” ಎಂದರು.

WhatsApp Image 2025 01 26 at 9.34.55 PM

ಸಾಂಸ್ಕಂತಿಕ ಕಾರ್ಯಕ್ರಮದಲ್ಲಿ ಅಲ್ ಇಕ್ರಾ ಶಾಲೆ, ಡಿ ಆರ್ ಆರ್ ಶಾಲೆ, ಸೆಂಟ್ ಜಾನ್ಸ್ ಪ್ರೌಢಶಾಲೆಯ ಮಕ್ಕಳು ದೇಶಪ್ರೇಮ, ತ್ಯಾಗ, ಬಲಿದಾನದ ಸಾರವನ್ನು ಹೊಂದಿದಂತಹ ನೃತ್ಯರೂಪಕಗಳನ್ನು ಪ್ರದರ್ಶಿಸಿದ್ದು ನೋಡುಗರ ಕಣ್ಮನ ಸೆಳೆಯುವಂತಿತ್ತು.

ನಗರದ ವಿಶ್ವೇಶ್ವರಯ್ಯ ಉದ್ಯಾವನದಲ್ಲಿ ಹಾಗೂ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಂವಿಧಾನ ಪೀಠಿಕೆಯನ್ನು ಸ್ಥಾಪಿಸಲಾಗಿದ್ದು ಗಣಿ ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ₹30,000 ದಂಡ, 21 ವರ್ಷ ಜೈಲು ಶಿಕ್ಷೆ

ಕಾರ್ಯಕ್ರಮದಲ್ಲಿ ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೇಯರ್ ಚಮನ್‍ಸಾಬ್ ಕೆ, ದೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ರವಿಕಾಂತೇಗೌಡ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ ಎಂ, ಎಸ್‌ಪಿ ಉಮಾ ಪ್ರಶಾಂತ್, ಜಿ ಪಂ ಸಿಇಒ ಸುರೇಶ್ ಬಿ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ ಎನ್ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 01 26 at 9.34.54 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...