ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

Date:

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಂಶುಪಾಲ ಕಲ್ಲೇಶ್‌ ಹೇಳಿದರು.

- Advertisement -

ದಾವಣಗೆರೆ ಜಿಲ್ಲೆಯ ಜಗಳೂರು ನಗರದ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜು ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಗಳೂರು ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಬಿ.ಆ‌ರ್. ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಅಂಬೇಡ್ಕರ್ ಅವರು ಒಬ್ಬ ಶಿಕ್ಷಣ ಪ್ರೇಮಿಯಾಗಿ ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣ ಪಡೆಯಬೇಕು ಎಂಬ ಅವರ ಪರಿಶ್ರಮ ಬಹಳಷ್ಟಿದೆ. ಅವರ ಧ್ಯೇಯ ವಾಕ್ಯದಂತೆ ಮೊದಲು ಶಿಕ್ಷಿತರಾಗಬೇಕು ನಂತರ ಸಂಘಟಿತರಾಗಬೇಕು ತದನಂತರ ಹೋರಾಟಕ್ಕೆ ಬದ್ಧರಾಗಬೇಕು ಆಗ ಮಾತ್ರ ದೇಶ ಮುನ್ನಡೆಯಲು ಸಾಧ್ಯ ಎಂದರು.

ಇಂದು ನಾವೆಲ್ಲ ಶಿಕ್ಷಣ ಪಡೆದು ಉನ್ನತ ಮಟ್ಟದಲ್ಲಿ ಇರುವುದಕ್ಕೆ ನೇರ ಕಾರಣ ಅದು ಅಂಬೇಡ್ಕರ್ ಅವರು ಎಂಬುವುದನ್ನು ಎಲ್ಲರೂ ಮನಗಾಣಬೇಕು. ಅಂಬೇಡ್ಕರ್ ಅವರನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ ಅವರ ವಿಚಾರ ಚಿಂತನೆಗಳನ್ನು ತಿಳಿದುಕೊಂಡು ಸಮಾಜದಲ್ಲಿನ ಓರೆಕೋರೆಗಳನ್ನು ತಿದ್ದಲು ಶ್ರಮ ವಹಿಸಬೇಕೆಂದು ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿದರು.

ದಸಂಸ ಸಂಚಾಲಕ ಮಲೆಮಾಚಿಕೆರೆ ಬಿ. ಸತೀಶ್ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ದುಡಿದವರಲ್ಲ, ಈ ದೇಶದ ಪ್ರತಿಯೊಬ್ಬ ಪ್ರಜೆಗಾಗಿ ಅವರು ಶ್ರಮ ವಹಿಸಿದ್ದಾರೆ. ಎಲ್ಲ ಧರ್ಮ ಗ್ರಂಥಗಳಿಗಿಂತ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಶ್ರೇಷ್ಠ ಗ್ರಂಥವಾಗಿದೆ. ಪ್ರಪಂಚದಲ್ಲೇ ಪ್ರಥಮ ಬಾರಿಗೆ ಮಹಿಳೆಯರಿಗೆ ಮತದಾನ ಹಕ್ಕು ಕೊಟ್ಟಿರುವ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಅದಲ್ಲದೆ ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಪ್ರಬಲವಾಗಿ ಸ್ಥಾನಮಾನ ಕಂಡುಕೊಂಡಿರುವುದಕ್ಕೆ ಅಂಬೇಡ್ಕರ್ ಅವರ ಪರಿಶ್ರಮ ಅಗಾಧವಾಗಿದೆ. ವಿದೇಶಿಗರು ಅಂಬೇಡ್ಕ‌ರ್ ಅವರನ್ನು ಜ್ಞಾನದಿಂದ ನೋಡಿದರೆ, ದುರ್ದೈವ ಈ ದೇಶದಲ್ಲಿ ಅವರನ್ನು ಜಾತಿಯ ದೃಷ್ಟಿಯಿಂದ ನೋಡುವುದು ನಾಚಿಕೆಗೇಡಿನ ಸಂಗತಿ ಎಂದರು.

ಜಗತ್ತಿನಲ್ಲೇ ಪ್ರತೀ ನಿಮಿಷಕ್ಕೂ ಗೌರವಕ್ಕೆ ಒಳಪಡುವ ವ್ಯಕ್ತಿಯೆಂದರೆ ಅದು ಅಂಬೇಡ್ಕರ್ ಅವರು ಮಾತ್ರ, ಅದಲ್ಲದೆ ಜಗತ್ತಿನಲ್ಲೇ ಅತೀ ಹೆಚ್ಚು ಪುತ್ಥಳಿಗಳನ್ನೂ ಹೊಂದಿರುವ ವ್ಯಕ್ತಿಯಾಗಿದ್ದಾರೆ. 36 ಪದವಿಗಳನ್ನು ಪಡೆದುಕೊಂಡು ಜಗತ್ತಿನಲ್ಲೇ ಶ್ರೇಷ್ಠ ಜ್ಞಾನಿಗಳ ಪಟ್ಟಿಯಲ್ಲಿ 2ನೇಯ ಸ್ಥಾನದಲ್ಲಿದ್ದಾರೆ. ಅಂಬೇಡ್ಕರ್ ಅವರು ಈ ದೇಶಕ್ಕೆ ಬೃಹತ್‌ ಸಂವಿಧಾನ ನೀಡಿ ಸರ್ವರಿಗೂ ಬೆಳಕಾಗಿದ್ದಾರೆ. ಅವರ ವಿಚಾರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಆರ್.ವಿ. ಹೇಮರೆಡ್ಡಿ, ಪತ್ರಕರ್ತ ಜಗಜೀವನ್ ರಾಮ್ ಆರ್.ಎಲ್. ಉಪನ್ಯಾಸಕರಾದ ಬಸಪ್ಪ, ರವಿ, ಕೊಟ್ರೇಶ್, ರಾಘವೇಂದ್ರ, ಪ್ರೇಮಾ, ಕಾಶಿನಾಥ್, ಸ್ವಾಮಿ ಹಾಗೂ ಸಿಬ್ಬಂದಿ ವರ್ಗ ಮತ್ತು ಪ್ರಶಿಕ್ಷಣಾರ್ಥಿಗಳಾದ ವಿ.ಸಿ.ಚೌಡಪ್ಪ, ಅಮೃತ, ಉಮಾ ಜಿ, ಸೇರಿದಂತೆ ಅನೇಕ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...