ದಾವಣಗೆರೆ | ಕೃಷಿಭಾಗ್ಯ ಯೋಜನೆಯಡಿ 30ಸಾವಿರ ಕೃಷಿ ಹೊಂಡ: ಸಚಿವ ಚಲುವರಾಯಸ್ವಾಮಿ

Date:

ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು. ಈಗ ಮತ್ತೆ ಪ್ರಾರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ನಿಂದ 100 ಕೋಟಿ ಅನುದಾನ ದೊರೆಯಲಿದೆ. ರಾಜ್ಯದಲ್ಲಿ 30 ಸಾವಿರ ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ 13ಸಾವಿರ ಕೋಟಿಯಷ್ಟು ಬೆಳೆಹಾನಿಯಾಗಿದೆ. ಕೇಂದ್ರಕ್ಕೆ ಪರಿಹಾರ ಕೋರಿ ಪತ್ರ ಬರೆಯಲಾಗಿದೆ. ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾ ರಾಮನ್ ಭೇಟಿಗೆ ಸಮಯ ನೀಡಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರೊಂದಿಗೆ ಭೇಟಿ ಮಾಡಿ, ಬರ ಪರಿಹಾರ ಅನುದಾನವನ್ನ ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಲಾಗುವುದು ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಮಗೆ ದೊರೆತ ಮಾಹಿತಿಯಂತೆ ಬರ ಪರಿಹಾರ ಅನುದಾನದ ಬಿಡುಗಡೆ ಪ್ರಕ್ರಿಯೆ ಬಹುತೇಕ ಪೂರ್ಣವಾಗಿದೆ. ಗುರುವಾರದ ಭೇಟಿ ಸಮಯದ ನಂತರ ಅನುದಾನ ಬಿಡುಗಡೆಯಾಗುವ ಎಲ್ಲ ವಿಶ್ವಾಸವೂ ಇದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿದ್ದಂತೆಯೇ ಜಿಲ್ಲಾವಾರು ಬರ ಪರಿಹಾರ ವಿತರಣೆಗೆ ಕೃಷಿ, ತೋಟಗಾರಿಕೆ, ಕಂದಾಯ ಮೂರು ಇಲಾಖೆಗಳು ಎಲ್ಲ ಸಿದ್ಧತೆ ಮಾಡಿಕೊಂಡಿವೆ ಎಂದು ತಿಳಿಸಿದರು.

ಫೂಟ್ಸ್‌ನಡಿ ಶೇ.100ರಷ್ಟು ರೈತರ ನೋಂದಣಿ ಮುಗಿದಿದೆ. ಕೆಲವಾರು ಕಡೆ ಆರ್‌ಟಿಸಿ ಜೋಡಣೆ ಮತ್ತಿತರ ತಾಂತ್ರಿಕ ಕಾರಣಗಳಿಂದ ನೋಂದಣಿ ನಡೆಯುತ್ತಿದೆ. ಆದಷ್ಟು ಬೇಗ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಫೂಟ್ ನಡಿ ನೋಂದಣಿಯಾದಂತಹ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಒಳಗೊಂಡಂತೆ ಇಲಾಖೆಯ ಸೌಲಭ್ಯಗಳು ದೊರೆಯಲಿವೆ.

ಕೃಷಿ ವಿಶ್ವವಿದ್ಯಾಲಯಗಳನ್ನು ಹೆಚ್ಚು ಬಳಕೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ, ಕಡಿಮೆ ಪ್ರಮಾಣದ ನೀರು ಬಳಸಿ ಹೆಚ್ಚು ಇಳುವರಿ ನೀಡುವಂತಹ ಬೆಳೆಗಳು, ಮಣ್ಣಿನ ಫಲವತ್ತತೆ ಆಧಾರದಲ್ಲಿ ಪರ್ಯಾಯ ಬೆಳೆಗಳ ಬೆಳೆಯುವುದು ಒಳಗೊಂಡಂತೆ ರೈತರಿಗೆ ಹೆಚ್ಚಿನ ಮಾಹಿತಿ ನೀಡುವ ಕೆಲಸ ಮಾಡಲಿದ್ದಾರೆ.

ಭತ್ತ, ಕಬ್ಬನ್ನು ಇನ್ನೂ ಹೆಚ್ಚಿನ ಯಾಂತ್ರಿಕವಾಗಿ ಕಟಾವು ಮಾಡು ವಂತಹ 100 ಕೇಂದ್ರ ಪ್ರಾರಂಭಿಸಲಾಗುವುದು. ಭತ್ತದಂತೆ ತೊಗರಿಯನ್ನೂ ನಾಟಿ ಮಾಡುವ ಪ್ರಯೋಗ ಧನಾತ್ಮಕ ಫಲಿತಾಂಶ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲೆಡೆ ವಿಸ್ತರಣೆ ಮಾಡಲಾಗುವುದು.

ಕೇಂದ್ರ ಸರ್ಕಾರ ಯಾಂತ್ರಿಕೃತ ಕೃಷಿಗೆ ಅನುದಾನ ನೀಡಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ, ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಹಣಕಾಸು ಇಲಾಖೆ ಸಚಿವರ ಭೇಟಿ ಸಂದರ್ಭದಲ್ಲಿ ಈ ವಿಷಯವನ್ನೂ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಹಣ ಖರ್ಚು ಮಾಡಬೇಕು ಎಂಬುದಾಗಿ ಇಂಧನ ಇಲಾಖೆಯ ಹೊಸ ಮಾರ್ಗಸೂಚಿಗೆ ಎಲ್ಲೆಡೆ ವಿರೋಧ, ಆಕ್ಷೇಪಣೆ ಕೇಳಿ ಬರುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಇಂಧನ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

ಬೆಂಗಳೂರು | 2 ವರ್ಷಗಳ ಬಳಿಕ ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನ ಸಂಚಾರ ಅವಕಾಶ; ಷರತ್ತೂ ಅನ್ವಯ

ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ...