ದಾವಣಗೆರೆ | ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಆರೋಪ; ಪಾಲಿಕೆ ಸಿಬ್ಬಂದಿ ದಾಳಿ – ಪರಿಶೀಲನೆ

Date:

ದಾವಣಗೆರೆಯ ಕೆಲವು ಬೆಣ್ಣೆ ದೋಸೆ ಹೋಟೆಲ್‌ಗಳಲ್ಲಿ ನಕಲಿ ಬೆಣ್ಣೆ ಬಳಕೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನಗರದ ಬೆಣ್ಣೆ ದೋಸೆ ಹೋಟೆಲ್‌ಗಳ ಮೇಲೆ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

- Advertisement -

ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಜಗದೀಶ್ ಅವರ ನೇತೃತ್ವದಲ್ಲಿ ಶ್ರೀ ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಹಾಗೂ ರವಿ ಬೆಣ್ಣೆ ದೋಸೆ ಹೋಟೆಲ್ ಮೇಲೆ ದಾಳಿ ನಡೆದಿದೆ. ಬೆಣ್ಣೆಯನ್ನು ವಶ ಪಡಿಸಿಕೊಂಡಿದ್ದು, ಹೆಚ್ಚಿನ ಪರೀಕ್ಷೆಗಾಗಿ ಹೈದರಾಬಾದ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪರೀಕ್ಷಾ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೀನಾಕ್ಷಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಲ್ಲದೆ, ರಾಂ ಅಂಡ್ ಕೋ ಸರ್ಕಲ್‌ನಿಂದ ತೊಗಟವೀರ ಕಲ್ಯಾಣ ಮಂಟಪದವರೆಗಿನ ಅಂಗಡಿ ಮಾಲಿಕರುಗಳಿಗೆ ಆಂಗ್ಲ ನಾಮ ಫಲಕಗಳನ್ನು ತೆರೆವುಗೊಳಿಸಿ ಕನ್ನಡ ನಾಮಫಲಕಗಳನ್ನು ಹಾಕುವಂತೆ ತಿಳಿಸಿ ಜಾಗೃತಿಯನ್ನೂ ಮೂಡಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚಂದ್ರಮೋಹನ್, ಅಧಿಕಾರಿಗಳಾದ ನಾಗರಾಜ್, ಕೊಟ್ರೇಶ್ವರ್, ಆರೋಗ್ಯ ನಿರೀಕ್ಷಕರುಗಳಾದ ಮದನ್ ಕುಮಾ‌ರ್, ಲಕ್ಷ್ಮೀ ಎನ್.ಟಿ, ದಫೇದಾರುಗಳಾದ ಪರಶುರಾಮಪ್ಪ, ಹನು ಮಂತಪ್ಪ, ಸೇರಿದಂತೆ ಅನೇಕ ಸಿಬ್ಬಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...