ದಾವಣಗೆರೆ | ‘ಮದ್ಯದಂಗಡಿಗೆ ಕೋಟಿ, ಸರ್ಕಾರದ ಖಜಾನೆ ಲೂಟಿ’: ಸಚಿವ ಕುಮಾರಸ್ವಾಮಿ ವ್ಯಂಗ್ಯ

Date:

ಪರಿಶಿಷ್ಟ ಜಾತಿ ಮತ್ತು ಪಂಗಡ ಉಪಯೋಜನೆ (ಎಸ್‌ಸಿಪಿ-ಟಿಎಸ್‌ಪಿ), ಅಬಕಾರಿ ಇಲಾಖೆ ಸೇರಿ ಎಲ್ಲಾ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರದ ಖಜಾನೆ ಲೂಟಿ ಮಾಡಲಾಗುತ್ತಿದೆ. ಮದ್ಯದಂಗಡಿಗೆ ಕೋಟಿ ಕೋಟಿ ನಿಗದಿಗೊಳಿಸಿ ಹರಾಜು ಪ್ರಕ್ರಿಯೆ ನಡೆಸಿರುವುದೇ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಿದ ಹೊಸವರ್ಷದ ಕೊಡುಗೆಯಾಗಿದೆ” ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

- Advertisement -

ಖಾಸಗಿ ಭೇಟಿಗಾಗಿ ಬೆಳಗ್ಗೆ 11.30 ರ ಸುಮಾರಿಗೆ ದಾವಣಗೆರೆಗೆ ಆಗಮಿಸಿ, ಇತ್ತೀಚೆಗೆ ಅಗಲಿದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮದ್ಯದಂಗಡಿ ಹರಾಜಿಗೆ ಪ್ರತಿ ಪರವಾನಗಿಗೆ 1 ಕೋಟಿ 95 ಲಕ್ಷ ರೂಪಾಯಿವರೆಗೆ ದರ ನಿಗದಿ ಮಾಡಿರುವುದು ರಾಜ್ಯ ಸರ್ಕಾರದ ಇಲಾಖೆಗಳ ದುರ್ಬಳಕೆ, ಲೂಟಿಗೆ ಸಾಕ್ಷಿ. ಇಲಾಖೆಗಳಲ್ಲಿ ಕೋಟಿ ಕೋಟಿ ದರ ನಿಗದಿಪಡಿಸಿ ರಾಜ್ಯ ಸರ್ಕಾರದ ಪ್ರತಿ ಇಲಾಖೆಯನ್ನು ಲೂಟಿ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ಸರ್ಕಾರ ರಚನೆಯಾದ ಆರಂಭದಿಂದಲೂ ಅಧಿಕಾರ ಹಂಚಿಕೆಯ ಕಿತ್ತಾಟ ನಡೆಯುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ. ಇನ್ನೂ ಎಷ್ಟು ದಿನ ಹೀಗೆ ಕಾಲ ಕಳೆಯುತ್ತೀರಿ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ದಾವಣಗೆರೆ | ಲಿಂಗಾಪುರ ರೈತ ಘಟಕದಿಂದ ರೈತ ದಿನಾಚರಣೆ ಸಂಭ್ರಮ ಬೈಕ್ ರ್ಯಾಲಿ

“ಸಾವಿರಾರು ಕೋಟಿ ಹಣ ಸರ್ಕಾರದ ಖಜಾನೆಯಿಂದ ಬಿಡುಗಡೆಯಾಗಿರುವುದು ಆರ್ಥಿಕ ಸಚಿವ, ತಜ್ಞರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ. ಹೆಚ್ಚು ಬಾರಿ ಬಜೆಟ್ ಮಂಡಿಸಿದ್ದಾಗಿ ಹೇಳಿಕೊಳ್ಳುವ ಇಂತಹ ಆರ್ಥಿಕ ತಜ್ಞರನ್ನು ಪ್ರಪಂಚದಲ್ಲಿಯೇ ಕಾಣಲು ಸಾಧ್ಯವಿಲ್ಲ” ಎಂದು ವ್ಯಂಗ್ಯವಾಡಿದರು.

ಭೇಟಿ ವೇಳೆ ಜೆಡಿಎಸ್ ಮುಖಂಡ ಹರಿಹರ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್, ಬೋಜೇಗೌಡ, ಮುಖಂಡರಾದ ಅಮಾನುಲ್ಲಾ ಖಾನ್ ಸೇರಿದಂತೆ ಇತರರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...