ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

Advertisements

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗುಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.

ದಾವಣಗೆರೆಯಲ್ಲಿ ಪ್ರತಿಭಟನೆನ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಸಾಮಾಜಿಕ, ಶೈಕಣಿಕ ಮತ್ತು ಜಾತಿ ಸಮೀಕ್ಷೆ ನಡೆಸಿರುವ ಕಾಂತರಾಜು ಜಾತಿ ಗಣತಿ ವರದಿಯನ್ನು ಜಾರಿಗೊಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್, “ದಾವಣಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಹೆಸರಿಡಬೇಕು. ಜಿಲ್ಲೆಯಾದ್ಯಂತ ಹಾಗೂ ಬೇತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿ ಚಿತ್ರಾನಹಳ್ಳಿ, ಬಿ ಕಲನಹಳ್ಳಿ ಮತ್ತು  ಯರಗುಂಟಿ ಗ್ರಾಮದಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವವರಿಗೆ ನಿವೇಶನ ಒದಗಿಸಿ ಹಕ್ಕು ಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

Advertisements

“ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ಅಂಬೇಡ್ಕರ್ ಭವನಕ್ಕೆ ಜಾಗ ಮಂಜೂರು ಮಾಡಿ ಭವನ ನಿರ್ಮಾಣ ಮಾಡಿಕೊಡಬೇಕು. ಗೋಣಿವಾಡ ಗ್ರಾಮದ ಸರ್ವೆ ನಂ. 19/1ರಲ್ಲಿ ದಲಿತರು ಖರೀದಿಸಿರುವ ಜಮೀನನ್ನು ಸ್ಮಶಾನಕ್ಕೆ ಮಂಜೂರು ಮಾಡಮಾಡಿದ್ದು, ಅದನ್ನು ವಜಾಗೊಳಿಸಿ ಸಾಗುವಳಿಗೆ ಅವಕಾಶ ಮಾಡಿಕೊಡಬೇಕು” ಎಂದರು.

“ಕಿತ್ತೂರು ಗ್ರಾಮದ ದಲಿತರು ಉಳಿಮೆ ಮಾಡುತ್ತಿರುವ ಭೂಮಿಗೆ ಸಾಗುವಳಿ ಪತ್ರ ನೀಡಿ ಅವರವರ ಹೆಸರಿಗೆ ಪಹಣಿ ಮಾಡಿಕೊಡಬೇಕು. ಸಂಘಟನೆಯ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ವಜಾಗೊಳಿಸಬೇಕು” ಎಂದು ಒತ್ತಾಯಿಸಿದರು.

“ಜಿಲ್ಲೆಯಲ್ಲಿ ಮೊರಾರ್ಜಿ ಶಾಲೆ, ಕಿತ್ತೂರು ರಾಣಿ, ನವೋದಯ ಶಾಲೆ ಹಾಗೂ ಸರ್ಕಾರಿ ವಸತಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಆಹಾರ ಹಾಗೂ ಸ್ವಚ್ಛತೆಯನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ, ಉದ್ಯಮಶೀಲತೆ ಹಾಗೂ ಇನ್ನಿತರೆ ಸೌಲಭ್ಯವನ್ನು ಹೆಚ್ಚಿನ ಫಲಾನುಭವಿಗಳೆಗೆ ಆಯ್ಕೆ ಮಾಡಿ ದಲಿತರನ್ನು ಸ್ವಾವಲಂಬಿಗಳಾಗಿ ಮಾಡಬೇಕು” ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಕೆ.ವಿಜಯಲಕ್ಷ್ಮಿ, ಪ್ರದೀಪ್, ಮಹಾಂತೇಶ್ ಹಾಲುವರ್ತಿ, ಅಣಜಿ ಹನುಮಂತಪ್ಪ, ಆ‌ರ್.ಮಂಜುನಾಥ್, ಹನುಮಂತಪ್ಪ, ಖಾಲೀದ್ ಅಲಿ ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X