ದಾವಣಗೆರೆ | ಅಕ್ರಮವಾಗಿ ಸ್ಮಶಾನದ ಮಣ್ಣು ಸಾಗಾಟ; ದಸಂಸ ಖಂಡನೆ

Date:

ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದ ಸ್ಮಶಾನದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು ವಿರೂಪ ಗೊಳಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಕಬ್ಬೂರಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆ ಬಳಿಕ ದಾವಣಗೆರೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದು, “ಕಬ್ಬೂರು ಗ್ರಾಮದಲ್ಲಿ ಸುಮಾರು 30-40 ವರ್ಷಗಳಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಡಿವಾಳ, ಗೊಲ್ಲ, ಭೋವಿ ಸೇರಿದಂತೆ ಇತರೆ ಜನಾಂಗದವರಿಗೆ ಸೇರಿದ ಸ್ಮಶಾನದಲ್ಲಿ ಎಂಟರಿಂದ ಹತ್ತು ಅಡಿಗಳಷ್ಟು ಆಳಕ್ಕೆ ಬಗೆದು ನೂರಾರು ಲೋಡು ಅಕ್ರಮ ಮಣ್ಣು ಸಾಗಾಟ ಮಾಡಲಾಗಿದೆ. ಪೂರ್ವಜರ ಅಸ್ತಿಪಂಜರಗಳನ್ನು ಕಿತ್ತುಹಾಕಿ ವಿರೂಪ ಗೊಳಿಸಲಾಗಿದೆ. ಸಮಾಧಿಗಳನ್ನು ವಿರೂಪಗೊಳಿಸಿ ನಂಬಿಕೆಗಳಿಗೆ, ಭಾವನೆಗಳಿಗೆ ಧಕ್ಕೆಯುಂಟು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ನೂರಾರು ಮಂದಿ ಕಬ್ಬೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ದಸಂಸ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾತನಾಡಿ, “ಕಬ್ಬೂರಿನ ಗೋಮಾಳದಲ್ಲಿ ಅನೇಕ ತಿಂಗಳಿಂದ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಸ್ಮಶಾನದಲ್ಲಿ ಮಣ್ಣು ಮಾಫಿಯಾ ದಂಧೆಕೋರರು ಪೂರ್ವಜರ ಸಮಾಧಿಗಳನ್ನೂ ಕೂಡಾ ನಾಶ ಮಾಡಿದ್ದು, ಅಲ್ಲಿನ ಅಸ್ಥಿಪಂಜರಗಳ ಯಾವುದೇ ಕುರುಹು ಸಿಗದಂತೆ ಮಾಡಿ ಅಲ್ಲಿನ ಮಣ್ಣನ್ನು ಸಾಗಾಟ ಮಾಡಿ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ಆರೋಪಿಸಿದರು.

ದಲಿತ ಮುಖಂಡ ಮಂಜು ಕಬ್ಬೂರು ಮಾತನಾಡಿ, “ಕಬ್ಬೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಕೆರೆ ಅಂಗಳ ಮತ್ತು ಗೋಮಾಳ, ಸರ್ಕಾರಿ ಜಮೀನುಗಳು ಒತ್ತುವರಿಯಾಗಿವೆ. ಈಗ ಅಕ್ರಮವಾಗಿ ಮರಳು ಸಾಗಾಟ ಮಾಡುವವರು ಸ್ಮಶಾನವನ್ನೂ ಬಿಟ್ಟಿಲ್ಲ. ಈ ಕೂಡಲೇ ಕಂದಾಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನಮ್ಮ ಪೂರ್ವಜರ ಅಸ್ಥಿಪಂಜರಗಳನ್ನು ಪತ್ತೆಹಚ್ಚಿ ಅದೇ ಸ್ಥಳದಲ್ಲಿ ಸ್ಮಶಾನ ನಿರ್ಮಿಸಿ ಅಲ್ಲಿ ನಾಮಫಲಕಗಳನ್ನು ಅಳವಡಿಸಿಕೊಟ್ಟು, ನೊಂದ ಕುಟುಂಬಗಳಿಗೆ ಪರಿಹಾರ ಕೊಡಬೇಕು. ಕೆರೆಯನ್ನು ಒತ್ತುವರಿಮುಕ್ತಗೊಳಿಸಿ ತಡೆಬೇಲಿ ನಿರ್ಮಾಣ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?:ದಾವಣಗೆರೆ | ಹರಜಾತ್ರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ; ಪಂಚಮಸಾಲಿ ಮಹಾಸಭಾ ಖಂಡನೆ

“ಒತ್ತುವರಿಯಾಗಿರುವ ಗೋಮಾಳದ ಜಾಗವನ್ನು ಒತ್ತುವರಿಮುಕ್ತ ಮಾಡಿಕೊಡಬೇಕು. ಗೋಮಾಳದಲ್ಲಿ ನಿವೇಶನ ಹಾಗೂ ವಸತಿರಹಿತ ಎಸ್‌ಸಿ ಮತ್ತು ಎಸ್‌ಟಿ ಜನಾಂಗದವರಿಗೆ ಸುಮಾರು 10 ಎಕರೆ ಜಾಗದಲ್ಲಿ ವಸತಿಗೆ ಅನುಕೂಲ ಕಲ್ಪಿಸಿಕೊಡಬೇಕು. ಉಳಿದ ಜಾಗವನ್ನು ಜಾನುವಾರುಗಳ ಮೇವಿಗೆ ಮೀಸಲಿಟ್ಟು ಅರಣ್ಯ ಇಲಾಖೆಗೆ ವಹಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿಜಯಲಕ್ಷ್ಮಿ,‌ ಎನ್ಎಂ ಕೋಟಿ, ಅಂಜನಪ್ಪ, ಗೋವಿಂದಪ್ಪ, ಬಸವರಾಜಪ್ಪ, ಮಂಜಪ್ಪ, ಕುಮಾರಪ್ಪ, ಮಲ್ಲಿಕಾರ್ಜುನ, ಶೇಖರಪ್ಪ, ಎಂ ರಾಮಚಂದ್ರಪ್ಪ, ಸಂದೀಪ್, ಮಹೇಶ್, ಯಲ್ಲೇಶ, ಮಂಜುನಾಥ‌ ಸೇರಿದಂತೆ ಕಬ್ಬೂರಿನ ನೂರಾರು ಗ್ರಾಮಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...