ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

Date:

ದಾವಣಗೆರೆ, ಹರಿಹರ ನಗರದಲ್ಲಿ ರಾಜಕಾಲುವೆಗಳನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವು ಬಡಾವಣೆಗಳಲ್ಲಿ ಸರ್ಕಾರಿ ಜಾಗ ಹಾಗೂ ಉದ್ಯಾನವನಗಳ ಜಾಗಗಳನ್ನು ಅತಿಕ್ರಮಣ ಮಾಡಿದ್ದಾರೆ. ಒತ್ತುವರಿಗಳ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು. ಒತ್ತುವರಿಗಳನ್ನು ತೆರವು ಮಾಡಬೇಕೆಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

- Advertisement -

ದಾವಣಗೆರೆ ಜಿಲ್ಲಾಧಿಕಾರಿಗೆ ಸಂಘಟನೆಯ ಪದಾಧಿಕಾರಿಗಳು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಜಿ ಯಲ್ಲಪ್ಪ, “ರಾಜ್ಯ ಸರ್ಕಾರಕ್ಕೆ ಸೇರಿದ ಸಾವಿರಾರು ಕೋಟಿಗಳ ಆಸ್ತಿ ಪ್ರಭಾವಿಗಳ ಪಾಲಾಗಿದೆ. ನಗರ ವ್ಯಾಪ್ತಿಯಲ್ಲಿ ಹಲವರು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಆದರೂ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಖಂಡನೀಯ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

“ರಾಜಕಾಲುವೆಗಳಿಗೆ ಸೇರಿದ ಜಾಗವನ್ನು, ಕೆಲವು ಸಂಸ್ಥೆಗಳು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿವೆ. ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಲಾಗಿದೆ. ಕೆಲವು ಅಧಿಕಾರಿಗಳು ಖಾಸಗಿ ಬಡಾವಣೆಗಳ ಮಾಲೀಕರ ಜೊತೆಗೆ ಶಾಮೀಲಾಗಿ ಬಡಾವಣೆಗಳಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗಗಳಿಗೆ ಆಕ್ರಮವಾಗಿ ಡೋರ್ ನಂಬ‌ರ್ ನೀಡಿರುವ ಪ್ರಕರಣಗಳಿವೆ” ಎಂದು ಹೇಳಿದ್ದಾರೆ.

“ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹೋಟೆಲ್‌ ಒಂದರ ಮಾಲೀಕರು ರಾಜಕಾಲುವೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಿದ್ದು, ಸರ್ಕಾರಿ ಜಾಗವನ್ನು ತಮ್ಮ ಸಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಇಂತಹ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸರ್ಕಾರಿ ಜಾಗಗಳನ್ನು ವಶಕ್ಕೆ ಮರಳಿ ಪಡೆಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಕೆ.ಹೆಚ್ ಮಹೆಬೂಬ್, ದಯಾನಂದ, ಸಂತೋಷ್ ದೊಡ್ಡನಿ,ಸಿದ್ದೇಶ್‌. ಎಸ್, ಗದಿಗೆಪ್ಪ, ಅಮ್ಮದ್ ಅಲಿ,ಎಂ. ರವಿ, ಬಾಬುರಾವ್‌, ಜಿ.ರಮೇಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...