ದಾವಣಗೆರೆ | ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು: ಎಐಡಿಎಸ್ಒ ಪೂಜಾ ನಂದಿಹಳ್ಳಿ

Date:

ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು. ಕಡಿಮೆ ದಾಖಲಾತಿ ಹೊಂದಿರುವ ದ್ಯಾಮೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ವಿಲೀನಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿ ಎಐಡಿಎಸ್ಒ ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಗ್ರಾಮಸ್ಥರು ಸೇರಿ ದ್ಯಾಮೇನಹಳ್ಳಿ ಸರ್ಕಾರಿ ಶಾಲೆ ಎದುರು ಪ್ರತಿಭಟನೆ ನಡೆಸಿದರು.

- Advertisement -

ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ ಮಾತನಾಡಿ, “ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಈ ಶಾಲೆಗೆ ಹೊಸ ಕಟ್ಟಡವನ್ನು ನಿರ್ಮಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಬೇಕು. ಶಾಲೆಯ ಆವರಣದಲ್ಲಿ ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡ ಸಂಪೂರ್ಣ ಪಾಳು ಬಿದ್ದಿದೆ. ಅದರ ಪಕ್ಕದ ಇನ್ನೊಂದು ಕಟ್ಟಡ ಮಳೆ ಬಂದರೆ ಸೋರುತ್ತದೆ. ಮುಖ್ಯ ಕಟ್ಟಡ ಸೋರುವ ಕಾರಣ ಇತ್ತೀಚಿಗಷ್ಟೇ ಆರ್‌ಸಿಸಿ ಮೇಲೆ ಶೀಟ್‌ ಹಾಕಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಪಾಳು ಬಿದ್ದ ಕಟ್ಟಡವನ್ನು ಕೆಡವಿಸಿ, ಕಳೆಯಿಂದ ಕೂಡಿದ ಆಟದ ಮೈದಾನವನ್ನು ಸ್ವಚ್ಛಂದಗೊಳಿಸಬೇಕು. ಬಹುತೇಕ ಬಡ ವಿದ್ಯಾರ್ಥಿಗಳು ಓದುವ ಸರ್ಕಾರಿ ಶಾಲೆಗಳನ್ನು ಬಲಗೊಳಿಸಬೇಕು. ನಿಜವಾಗಲೂ ಈ ಜನನಾಯಕರಿಗೆ ಸರ್ಕಾರಿ ಶಾಲೆ ಬೆಳೆಸುವ ಜವಾಬ್ದಾರಿ ಇದೆಯೆ ಎಂಬ ಪ್ರಶ್ನೆ ಜನಗಳಲ್ಲಿ ಮೂಡುತ್ತಿದೆ. ಉನ್ನತ ಭವಿಷ್ಯ ರೂಪಿಸುವ ಕನಸು ಹೊತ್ತ ದೊಡ್ಡ ಸಂಖ್ಯೆಯ ಬಡವರು, ರೈತರು, ಕೂಲಿಕಾರರು ಕೂಡ ಸಾಲ ಮಾಡಿ ಖಾಸಗಿ ಶಾಲೆಗೆ ಸೇರಿಸುವ ಪರಿಸ್ಥಿತಿ ಎದುರಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆ ಉಳಿವಿಗೆ ಸಹಿ ಸಂಗ್ರಹ 1

ಇದನ್ನೂ ಓದಿದ್ದೀರಾ? ಉಡುಪಿ | ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣ; ಚೆನ್ನೈ ಮೂಲದ ಎಂಜಿನಿಯರ್ ಯುವತಿ ಬಂಧನ

“ಜನಗಳ ತೆರಿಗೆ ಮೇಲೆ ನಡೆಯುತ್ತಿರುವ ಸರ್ಕಾರವು ಶಿಕ್ಷಣಕ್ಕೆ ರಾಜ್ಯದಲ್ಲಿ 30 ಪರ್ಸೆಂಟ್ ಅನುದಾನವನ್ನು ಮೀಸಲಿಡಬೇಕಿತ್ತು. ಆದರೆ ದುರಂತವೆಂದರೆ ಶಿಕ್ಷಣ ಕಟ್ಟಕಡೆಯ ಆದ್ಯತೆಯಾಗಿದೆ. ಭಾರತದ ನವೋದಯ ಚಿಂತಕರು ರಾಜಾರಾಮ್ ಮೋಹನ್ ರಾಯ್, ಸಾವಿತ್ರಿ ಬಾಫುಲೆ, ಜ್ಯೋತಿ ರಾವ್ ಬಾಫುಲೆ,‌ ಈಶ್ವರ ಚಂದ್ರ ವಿದ್ಯಾ ಸಾಗರ್, ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರ ಬೋಸ್, ಚಂದ್ರಶೇಖರ್ ಆಜಾದ್ ಮುಂತಾದವರು ಇಂತಹ ಭಾರತಕ್ಕಾಗಿ ಕನಸು ಕಂಡರೆ? ಈ ಅಸಮಾನತೆಯ ಭಾರತಕ್ಕಾಗಿ ಹೋರಾಡಿ, ತ್ಯಾಗ-ಬಲಿದಾನವನ್ನು ಮಾಡಿದರೆ? ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ, ಇನ್ನೂ ಬಲಿಷ್ಠ ಹೋರಾಟಗಳನ್ನು ಬೆಳೆಸೋಣ” ಎಂದು ಗ್ರಾಮಸ್ಥರಿಗೆ ಕರೆ ಕೊಟ್ಟರು.

ಈ ಸಂದರ್ಭದಲ್ಲಿ ಸಹೋದರ ಸಂಘಟನೆಯಾದ ಎಐಕೆಕೆಎಂಎಸ್‌ನ ಜಿಲ್ಲಾಧ್ಯಕ್ಷ ಮಧು ತೊಗಲೇರಿ, ಎಐಡಿಎಸ್ಓ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್, ದ್ಯಾಮೇನಹಳ್ಳಿಯ ರೈತ ಮುಖಂಡರು, ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...