ದಾವಣಗೆರೆ | ಶಿಕ್ಷಕರನ್ನು ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಳ್ಳಿ; ಪ್ರಜಾ ಪರಿಪರ್ತನಾ ವೇದಿಕೆ ಮನವಿ

Date:

Advertisements

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಮುಖ್ಯವಾಗಿ ಕಲಿಸುವಿಕೆಗೆ ಮಾತ್ರ ತೊಡಗಿಸಿಕೊಂಡು ಬೋಧಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಿ ಮಕ್ಕಳ ಶಿಕ್ಷಣ ಗುಣಮಟ್ಟ ಕಾಯ್ದುಕೊಳ್ಳಲು ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಪ್ರಜಾ ಪರಿವರ್ತನಾ ವೇದಿಕೆ ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ಪ್ರಕರಣ 27ರನ್ವಯ ದಶವಾರ್ಷಿಕ ಜನಗಣತಿ, ವಿಪತ್ತು ಪರಿಹಾರ ಕಾರ್ಯಗಳು ಅಥವಾ ಸಂದರ್ಭಾನುಸಾರ, ಸ್ಥಳೀಯ ಪ್ರಾಧಿಕಾರ ಅಥವಾ ರಾಜ್ಯ ವಿಧಾನ ಮಂಡಲ ಅಥವಾ ಸಂಸತ್ತು ಚುನಾವಣೆಗಳಿಗೆ ಸಂಬಂಧಿಸಿದ ಕರ್ತವ್ಯಗಳನ್ನು ಹೊರತುಪಡಿಸಿ, ಉಳಿದ ಯಾವುದೇ ಶಿಕ್ಷಣ ಹೊರತು ಪಡಿಸಿದ ಅನ್ಯ ಉದ್ದೇಶಗಳಿಗೆ ಶಿಕ್ಷಕರನ್ನು ನಿಯೋಜಿಸಬಾರದು. ಆದರೆ‌ ನಿಯಮ ಮೀರಿ ಬೇರೆ ಬೇರೆ ಶಿಕ್ಷಣೇತರ ಕಾರ್ಯಭಾರದಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದು ಮಕ್ಕಳ ಶೈಕ್ಷಣಿಕ ಹಕ್ಕಿನ ಮೇಲೆ ಪ್ರಭಾವ ಬೀರುತ್ತದೆ. ಕೂಡಲೇ ಶಿಕ್ಷಕರಿಗೆ ಬೋಧಕೇತರ ಕಾರ್ಯಾಭಾರ ಕಡಿಮೆ ಮಾಡಬೇಕು ಎಂದು ಸಮಿತಿ ಆಗ್ರಹಿಸಿತು.

ʼಕ್ಷೀರಭಾಗ್ಯ, ಅಕ್ಷರ ದಾಸೋಹ, ಆಧಾರ್ ನೋಂದಣಿ, ಮಾತ್ರೆ ವಿತರಣೆ, ಶೂ, ಬೈಸಿಕಲ್, ಸಮವಸ್ತ, ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಕಾರ್ಯಕ್ರಮಗಳ ದಾಖಲೆ ನಿರ್ವಹಣೆ, ಬೋಧಕೇತರ ಸಿಬ್ಬಂದಿ ಇಲ್ಲದಿರುವ ಎಲ್ಲಾ ಶಾಲಾ ದಾಖಲೆಗಳ ನಿರ್ವಹಣೆ, ವಿವಿಧ ಅನುದಾನಗಳ ಸಮರ್ಪಕ ವೆಚ್ಚ ಹಾಗೂ ದಾಖಲೆ ನಿರ್ವಹಣೆ, ವೆಚ್ಚವಾದ ಅನುದಾನಗಳ ಲೆಕ್ಕಪತ್ರ ಹಾಗೂ ದಾಖಲೆ ನಿರ್ವಹಣೆ, ಬ್ಯಾಂಕ್‌ನೊಂದಿಗೆ ಶಾಲೆಯ ವ್ಯವಹಾರ ಖಾತೆಯ ನಿರ್ವಹಣೆ, ಜನಗಣತಿ, ಜಾತಿಗಣತಿ, ಮಕ್ಕಳ ಗಣತಿ ಇಷ್ಟೆಲ್ಲಾ ಕಾರ್ಯಭಾರಗಳು ಶಿಕ್ಷಕರ ಮೇಲಿದೆ. ಇದರಿಂದಾಗಿ ಬೋಧನೆಗೆ ಸಮಯ ಕೊಡುವ ಸಮಯ ದಿನೇ ದಿನೇ ಕಡಿಮೆಯಾಗುತ್ತಿದೆ. ಇದು ಮಕ್ಕಳ ಕಲಿಕೆಗೆ ಅಡ್ಡಿಯುಂಟು ಮಾಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆʼ ಎಂದು ಆತಂಕ ವ್ಯಕ್ತಪಡಿಸಿತು.

Advertisements

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಶಿಕ್ಷಕರಿಗೆ ಕಲಿಕೇತರ ಕಾರ್ಯಭಾರವನ್ನು ಕಡಿಮೆ ಮಾಡಿ ಶಿಕ್ಷಕರು ಪೂರ್ಣವಾಗಿ ಬೋಧನೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಕ್ರಮ ವಹಿಸಬೇಕೆಂದು ಸಮಿತಿ ಒತ್ತಾಯಿಸಿತು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರ; ಯತ್ನಾಳ್ ಪರ ನಿಂತ ಜಯಮೃತ್ಯುಂಜಯ ಶ್ರೀ

ಈ ವೇಳೆ ಸಮಿತಿಯ ಕಾರ್ಯಾಧ್ಯಕ್ಷ ಎ ಡಿ ಈಶ್ವರಪ್ಪ, ಜಿಲ್ಲಾ ಅಧ್ಯಕ್ಷ ಹೆಚ್ ಕೆ ಕೃಷ್ಣಪ್ಪ, ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು ಎಂ, ಧನಿಕ, ಮಹಮ್ಮದ್ ಹನೀಫ್ ಕೆ, ಜಿಲ್ಲಾ ಕಾನೂನು ಸಲಹೆಗಾರ ರಾಕೇಶ್ ಕಕ್ಕರಗೊಳ್ಳ, ನಾಗರಾಜ್ ಕಲ್ಕೆರೆ, ಸಿದ್ದಪ್ಪ ಸಿಂಗಟಗೇರಿ ಸೇರಿದಂತೆ ಇತರರು ಹಾಜರಿದ್ದರು.‌

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X