ದಾವಣಗೆರೆ | ಲೈಂಗಿಕ ದೌರ್ಜನ್ಯಗಳನ್ನು ಕಂಡೂ ಹೇಳದವರೂ ಆರೋಪಿಗಳೇ: ನ್ಯಾ. ಶ್ರೀಪಾದ

Date:

ಲೈಂಗಿಕ ದೌರ್ಜನದಂತಹ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ, ಯಾವುದೇ ಹಿಂಜರಿಕೆ, ಭಯ ಇಲ್ಲದೆ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ನೀಡಬೇಕು ಎಂದು ದಾವಣಗೆರೆಯ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಶ್ರೀಪಾದ ತಿಳಿಸಿದರು.

- Advertisement -

ದಾವಣಗೆರೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪೋಕ್ಸೋ ಕಾನೂನಿನ ಅರಿವು, ಬಾಲ್ಯವಿವಾಹ ತಡೆ, ಬಾಲಕಾರ್ಮಿಕ, ಮಾದಕ ವಸುಗಳ ಸೇವನೆಯಿಂದ ಆಗುವ ಹಾನಿ ಹಾಗೂ ಮಕ್ಕಳ ಸುರಕ್ಷತೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನದ ಅಪರಾಧಗಳೆಂದರೆ ಕೇವಲ ಬಾಲಕಿಯರ ಮೇಲಷ್ಟೇ ಅಲ್ಲ, 18 ವರ್ಷದೊಳಗಿನ ಬಾಲಕ-ಬಾಲಕಿಯರ ಎನ್ನದೆ, ಲಿಂಗ ಭೇದವಿಲ್ಲದೆ ಯಾವುದೇ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳೇ ಆಗಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಶಾಲೆಯ ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಪ್ರಾಧ್ಯಾಪಕರು ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಸದಾ ಕಾಳಜಿ ವಹಿಸುವ ಮೂಲಕ ಅವರ ಚಲನ ವಲನಗಳನ್ನು ಗಮನಿಸಬೇಕು” ಎಂದು ಕಿವಿಮಾತು ಹೇಳಿದರು.

“ಲೈಂಗಿಕ ಅತ್ಯಾಚಾರಗಳು ಕೇವಲ ಅಪರಿಚಿತರಂದಲೇ ಆಗುತ್ತವೆ ಎನ್ನುವುದು ಸಹಜ. ಆದರೆ, ಅದೆಷ್ಟೋ ಪ್ರಕರಣಗಳು ಪೋಷಕರು, ಶಿಕ್ಷಕರು, ನೆರೆಹೊರೆಯವರು ಮತ್ತು ಸಂಬಂಧಿಕರಿಂದಲೇ ಇತ್ತೀಚಿನ ದಿನಗಳಲ್ಲಿ ಲೈಂಗಿಕ ಪ್ರಕರಣಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಯಾವುದೇ ಮುಚ್ಚುಮರೆ ಇಲ್ಲದೆ ಸಂತ್ರಸ್ತರು ತಮ್ಮ ದೂರುಗಳನ್ನು ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಅಥವಾ ನ್ಯಾಯಾಲಯಕ್ಕೆ ನೀಡಿದಾಗ ತಪ್ಪಿತಸ್ಥರಿಗೆ ತಕ್ಷಣ ತಕ್ಕ ಶಿಕ್ಷೆ ನೀಡುವಲ್ಲಿ ನ್ಯಾಯಾಲಯ ಮುಂದಾಗಲಿದೆ, ಅಲ್ಲದೆ ಸಂತ್ರಸ್ತರಿಗೆ ಪರಿಹಾರ ನೀಡಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಯಾವುದೇ ಸ್ಥಳದಲ್ಲಾಗಲಿ ಲೈಂಗಿಕ – ದೌರ್ಜನ್ಯಗಳು ನಡೆದಾಗ ಅದನ್ನು ನೋಡಿದ ಅಥವಾ ಅದರ ಬಗ್ಗೆ ತಿಳಿದಿದ್ದರೂ ಸಹ ಅದರ ಈ ಬಗ್ಗೆ ಹೇಳದವರೂ ಸಹ ಆರೋಪಿಗಳ ಸ್ಥಾನದಲ್ಲಿ ಈ ನಿಲ್ಲುತ್ತಾರೆ. ಸಾರ್ವಜನಿಕರಾಗಲಿ ಅಥವಾ ಇನ್ನಿತರೆ ಯಾವುದೇ ಕ್ಷೇತ್ರದ ವ್ಯಕ್ತಿಗಳಾಗಲಿ ಇಂತಹ ತಪ್ಪುಗಳು ಕಂಡು ಬಂದಾಗ, ತಕ್ಷಣವೇ ಈ ಸಂಬಂಧಪಟ್ಟ ಪ್ರಾಧಿಕಾರಕ್ಕೆ ತಿಳಿಸುವ ಮೂಲಕ ಮಾಡಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್‌ ಮಾತನಾಡಿ, “ದೇಶಕ್ಕೆ ಸ್ವತಂತ್ರ ಬಂದು 76 ವರ್ಷಗಳು ಕಳೆದಿವೆ. ನಾವುಗಳು ಸಂವಿಧಾನವನ್ನು ಒಪ್ಪಿಕೊಂಡು ಅದರ ಅಡಿಯಲ್ಲಿ ಬಾಳುತ್ತಿದ್ದೇವೆ. ಅನೇಕ ಕಾನೂನುಗಳು ಇವೆ. ಎಲ್ಲ ಕಾನೂನುಗಳ ತಾಯಿ ನಮ್ಮ ಸಂವಿಧಾನ, ಸಮಾನತೆ, ಸಹಬಾಳ್ವೆ, ಸಮಾಜದ ಅಭಿವೃದ್ಧಿಗೆ ಹಲವು ಕಾನೂನುಗಳನ್ನು ನಮ್ಮ ಸಂವಿಧಾನ ರಚಿಸಿದೆ. ಆದರೆ, ಇಂದಿಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಶೋಷಣೆ ನಡೆಯುತ್ತಿವೆ. ಹಲವಾರು ಸಮಸ್ಯೆಗಳು ಈಗಲೂ ನಮ್ಮ ಮುಂದೆ ಇವೆ. ಸಮಾನತೆಯ ಯುಗ ಬಂದಿದ್ದರೂ ಸಹ ಹಿಂದಿನಷ್ಟು ಶೋಷಣೆ ಈಗ ಕಾಣುತ್ತಿಲ್ಲ” ಎಂದು ಹೇಳಿದರು.

“ಸಾರ್ವಜನಿಕರಲ್ಲಿ ಕಾನೂನಿನ ಅರಿವಿನ ಬಗ್ಗೆ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆ ಮುಂದಾಗಬೇಕಾಗಿದೆ. ಎಲ್ಲಾ ಹಂತದ ವ್ಯಕ್ತಿಗಳ ನಿರ್ಮಾಣದಲ್ಲಿ ಶಿಕ್ಷಣ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಕಾರಣ ಸಮಾಜವನ್ನು ತಿದ್ದುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ಶಿಕ್ಷಣ ಇಲಾಖೆ ನೀಡಬೇಕಾಗಿದೆ” ಎಂದು ಹೇಳಿದರು.

ಡಿಡಿಪಿಐ ಜಿ.ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ.ಕರೆಣ್ಣವರ, ಬಿಇಓ ಡಾ.ಪುಷ್ಪಾಲತ, ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಎಂ. ಚೌಡಪ್ಪ, ವಕೀಲರ ಸಂಘದ ಎ.ಎಸ್.ಮಂಜುನಾಥ್, ಎಸ್‌. ಬಸವರಾಜ್‌ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...