ದಾವಣಗೆರೆ | ಸೂಳೆಕೆರೆ ಹೂಳು ಜಮೀನುಗಳಿಗೆ; ಪರೋಕ್ಷವಾಗಿ ಕೆರೆ ಪುನಶ್ಚೇತನಕ್ಕೆ ಮುಂದಾದ ರೈತರು

Date:

ದಾವಣಗೆರೆ ಜಿಲ್ಲೆಯ ಸೂಳೆಕೆರೆಯಲ್ಲಿ ಅಪಾರ ಹೂಳು ತುಂಬಿದ್ದು, ಸಂಗ್ರಹವಾಗುತ್ತಿದ್ದ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಹಿನ್ನೀರಿನ ಭಾಗದಲ್ಲಿರುವ ರೈತರು ಕೆರೆಯಲ್ಲಿನ ಫಲವತ್ತಾದ ಹೂಳನ್ನು ತೆಗೆದು ತಮ್ಮ ಜಮೀನುಗಳಿಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಪರೋಕ್ಷವಾಗಿ ಕೆರೆಯ ಪುನಶ್ಚೇತನಕ್ಕೆ ಮುಂದಾಗಿದ್ದಾರೆ.

ಕೆರೆಯಲ್ಲಿ ಇರುವ ಹೂಳು ತೆರವುಗೊಳಿಸುವ ಯೋಜನೆ ರೂಪಿಸುವಂತೆ ಖಡ್ಗ ಸಂಘ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿವೆ. ಆದರೆ, ಸರ್ಕಾರ ಯೋಜನೆ ರೂಪಿಸಲಿ ಎಂದು ಕಾಯದ ರೈತರು ಸ್ವಯಂ ಪ್ರೇರಣೆಯಿಂದ ಕೆರೆಯ ಹೂಳನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವ ಉದ್ದೇಶದಿಂದ ಹೂಳೆತ್ತುವ ಕಾರ್ಯಕ್ಕೆ ಕೈ ಹಾಕಿದ್ದಾರೆ.

ಕೆರೆಯಲ್ಲಿ ಹಿಟ್ಯಾಚಿ, ಜೆಸಿಬಿ ಯಂತ್ರಗಳು ಹೂಳು ತೆಗೆಯುತ್ತಿದ್ದು, ಕೆರೆಬಿಳಚಿ, ಸೋಮಲಾಪುರ, ಜಕ್ಕಲಿ, ಚೆನ್ನಾಪುರ, ಕೊಂಡದಹಳ್ಳಿ ವ್ಯಾಪ್ತಿಯಲ್ಲಿ ರೈತರು ಭರದಿಂದ ಮಣ್ಣು ಸಾಗಿಸುತ್ತಿದ್ದಾರೆ. ಪ್ರತೀ ನಿತ್ಯ 200ರಿಂದ 250 ಟ್ರ್ಯಾಕ್ಟರ್‌ಗಳು ಮಣ್ಣನ್ನು ತೋಟಗಳಿಗೆ ಸಾಗಿಸುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಿಟ್ಯಾಚಿಗಳಿಗೆ ಪ್ರತಿ ಗಂಟೆಗೆ ₹2,200 ದರ ನಿಗದಿಗೊಳಿಸಲಾಗಿದೆ. ಟಿಪ್ಪರ್‌ಗಳಿಗೆ ದಿನಕ್ಕೆ ₹6,000 ಬಾಡಿಗೆ ನೀಡಿ, ಡೀಸೆಲ್ ಅನ್ನು ರೈತರೇ ತುಂಬಿಸುವ ಕರಾರಿನ ಮೂಲಕ ಜಮೀನುಗಳಿಗೆ ಮಣ್ಣು ಸಾಗಿಸಲಾಗುತ್ತಿದೆ.

ತೋಟದ ಬೆಳೆಗಳಿಗೆ ಹೂಳು ಮಣ್ಣು ಹಾಕುವುದರಿಂದ ಮಣ್ಣು ಫಲವತ್ತಾಗುವುದರ ಜೊತೆಗೆ, ಇಳುವರಿ ವೃದ್ಧಿಸುತ್ತದೆ. 15 ದಿನಗಳಿಂದ 5ರಿಂದ 8 ಅಡಿ ಆಳದವರೆಗೆ ಅಗೆದು ಮಣ್ಣು ತುಂಬಿಸಲಾಗುತ್ತಿದೆ. ವ್ಯವಸ್ಥಿತವಾಗಿ ಹೂಳನ್ನು ತೆಗೆಯಲಾಗುತ್ತಿದೆ. ಮುಂದೆ ಮಳೆ ಬಂದಾಗ ಕೆರೆ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಲಿದೆ ಎನ್ನುತ್ತಾರೆ ಸ್ಥಳೀಯ ರೈತರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ಡಿವಿಪಿ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ...

ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ...

ದಾವಣಗೆರೆ | ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌; ಸ್ಥಳಾಂತರಗೊಂಡವರ ಬದುಕು ದುಸ್ತರ

ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌ಗಾಗಿ ನಮ್ಮ ಮನೆಗಳನ್ನು ವಶಪಡಿಸಿಕೊಂಡು, ನಮ್ಮನ್ನು ಒಕ್ಕಲೆಬ್ಬಿಸಿದರು....

ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ ‘ರೆಮಲ್ ಚಂಡ‌ಮಾರುತ’; ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ...