ದಾವಣಗೆರೆ | ಫೈನಾನ್ಸ್‌ ಕಂಪನಿ ಕಿರುಕುಳ: ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಮೃತದೇಹ ನದಿಯಲ್ಲಿ ಪತ್ತೆ

Date:

ಫೈನಾನ್ಸ್‌ ಕಂಪನಿ ನೀಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಟಲತಾ ಎಂ.ಟಿ ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ.

- Advertisement -

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿ ಪ್ರದೇಶದ ನಿವಾಸಿಯಾಗಿದ್ದ ಪುಷ್ಟಲತಾ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ತುಮ್ಮಿನಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಅವರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದರು. ಅವರು ರಾಘವೇಂದ್ರ ಮಠದ ಬಳಿ ತುಂಗಭದ್ರಾ ನದಿಗೆ ಇಳಿದಿರುವುದು ಸಿಸಿ ಟಿ.ವಿ ಕ್ಯಾಮೆರಾದಲ್ಲಿ ಪತ್ತೆಯಾಗಿತ್ತು. ಪುಷ್ಟಲತಾ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆಯ ಮೇಲೆ ಸೋಮವಾರ ಬೆಳಗ್ಗೆಯಿಂದಲೇ ನದಿಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಮುಳುಗು ತಜ್ಞರು ಶೋಧ ಕಾರ್ಯ ನಡೆಸಿದ್ದರು.

ಇದೀಗ, ಮಂಗಳವಾರ ಬೆಳಗ್ಗೆ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

ಮನೆ ಕಟ್ಟಿಸುವುದಕ್ಕಾಗಿ ಫೈನಾನ್ಸ್‌ ಕಂಪನಿಯಿಂದ ಪುಷ್ಪಲತಾ 40 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರುಪಾವತಿಗಾಗಿ ಫೈನಾನ್ಸ್‌ ಕಂಪನಿಯ ಅಧಿಕಾರಿಗಳು ಮನೆ ಮತ್ತು ಶಾಲೆಯ ಬಳಿ ಬಂದು ಜಗಳ ಮಾಡುತ್ತಿದ್ದರು. ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡುತ್ತಿದ್ದರು. ಆದ್ದರಿಂದಲೇ ಪುಷ್ಟಲತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಫೈನಾನ್ಸ್‌ ಕಂಪನಿಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪುಷ್ಪಲತಾ ದೂರು ದಾಖಲಿಸಿದ್ದರು. ಅವರ ವಿರುದ್ಧ ಫೈನಾನ್ಸ್‌ ಕಂಪನಿಯೂ ಪ್ರತಿ ದೂರು ದಾಖಲಿಸಿತ್ತು. ಇಬ್ಬರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿದ ಬಳಿಕ, ಇಬ್ಬರೂ ದೂರನ್ನು ವಾಪಸ್ ಪಡೆದುಕೊಂಡಿದ್ದರು. ಅಲ್ಲದೆ, ಸಾಲದಿಂದ ಮುಕ್ತರಾಗಲು ಪುಷ್ಟಲತಾ ತಮ್ಮ ಮನೆಯನ್ನೂ ಮಾರಾಟಕ್ಕಿಟ್ಟಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...