ದಾವಣಗೆರೆ | ಹೆದ್ದಾರಿ ಬದಿ ತ್ಯಾಜ್ಯಕ್ಕೆ ಬೆಂಕಿ; ಸಾಲು ಮರಗಳಿಗೆ ಕಂಟಕ

Date:

ದಾವಣಗೆರೆ ಜಿಲ್ಲೆಯ ಹರಿಹರದ ಹೊರವಲಯದಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಿಗಳು ತ್ಯಾಜ್ಯವನ್ನು ಹೆದ್ದಾರಿ ಮತ್ತು ರೈಲ್ವೆ ಮಾರ್ಗ ಮಧ್ಯದ ಜಾಗದಲ್ಲಿ ಸುರಿಯುತ್ತಿದ್ದಾರೆ. ಅಲ್ಲದೇ, ಈ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ರಸ್ತೆಬದಿಯ ಸಾಲು ಮರಗಳು ಮತ್ತು ಹತ್ತಿರದ ರೈಲ್ವೆ ವಿದ್ಯುತ್ ಮಾರ್ಗಕ್ಕೆ ಈ ಬೆಂಕಿ ಕಂಟಕವಾಗಿ ಪರಿಣಮಿಸಿದೆ.

ಸ್ಥಳೀಯರೂ ಸಹ ಕಸವನ್ನು ಇಲ್ಲೇ ಹಾಕುತ್ತಿದ್ದು, ತ್ಯಾಜ್ಯಕ್ಕೆ ಬೆಂಕಿ ಹಾಕುತ್ತಿರುವುದು ಅಪಾಯಕ್ಕೆ ಆಹ್ವಾನಿ ನೀಡುತ್ತಿದ್ದಾರೆ. ಹಳೆ ಪಿ.ಬಿ. ರಸ್ತೆಗೆ ಪರ್ಯಾಯವಾಗಿ 10 ವರ್ಷಗಳ ಹಿಂದೆ ಬೀರೂರು-ಸಮ್ಮಸಗಿ ಹೆದ್ದಾರಿ ನಿರ್ಮಿಸಲಾಯಿತು. ಈ ಹೆದ್ದಾರಿ ಪಕ್ಕದಲ್ಲೆ ಬೆಂಗಳೂರು-ಹುಬ್ಬಳ್ಳಿ ರೈಲ್ವೆ ಮಾರ್ಗವಿದೆ. ರೈಲ್ವೆ ಮಾರ್ಗ ಮತ್ತು ಹೆದ್ದಾರಿ ಮಧ್ಯೆ 30-40 ಅಡಿ ಖಾಲಿ ಜಾಗವಿದೆ. ಈ ಖಾಲಿ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಎರಡೂ ಬದಿ ಸಾಲು ಮರಗಳನ್ನು ನೆಟ್ಟಿದೆ.

ಹೆದ್ದಾರಿ ಬದಿಯಲ್ಲಿ ಓಡಾಡಿದರೆ ಕಸದ ರಾಶಿ ಬಿಟ್ಟರೆ ಬೇರೆನೂ ಕಾಣಸಿಗುವುದಿಲ್ಲ. ಕಸದ ರಾಶಿಗೆ ಹಾಕುವ ಬೆಂಕಿಯ ಜ್ವಾಲೆ 15 ಅಡಿ ಎತ್ತರದವರೆಗೆ ಹೊತ್ತಿ ಉರಿಯುತ್ತದೆ. ಹೆದ್ದಾರಿ ಬದಿ ಜಾಲಿ ಗಿಡಗಳೂ ಬೆಳೆದಿದ್ದು, ಬೆಂಕಿ ಆ ಗಿಡಗಳಿಗೂ ವ್ಯಾಪಿಸಿ ದೊಡ್ಡ ದೊಡ್ಡ ಮರಗಳಿಗೆ ಹೊತ್ತಿಕೊಳ್ಳುತ್ತಿದೆ. ಇದರ ಪಕ್ಕದಲ್ಲೇ ವಿದ್ಯುತ್ತೀಕರಣಗೊಂಡ ರೈಲ್ವೇ ಮಾರ್ಗವಿದ್ದು, ವಿದ್ಯುತ್ ಲೈನ್‌ಗೆ ಬೆಂಕಿ ತಗುಲಿದರೆ ಭಾರಿ ಅನಾಹುತವಾಗುವ ಸಂಭವಿಸಬಹುದು ಎನ್ನುವುದು ಪ್ರಜ್ಞಾವಂತ ನಾಗರಿಕರ ಕಾಳಜಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಾರದಲ್ಲಿ 2-3 ಬಾರಿ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ದಟ್ಟವಾಗಿ ಏಳುವ ಹೊಗೆಯಿಂದ, ವಾಹನ ಸವಾರರಿಗೆ ತೊಂದರೆಯಾಗಿದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಅನಾಹುತ ಸಂಭವಿಸುವ ಮುನ್ನ ಕಸ ಹಾಕುವವರು ಹಾಗೂ ಕಸಕ್ಕೆ ಬೆಂಕಿ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿ ಓಡಾಡುವ ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.

ಇಲ್ಲಿ ಕಸ ಹಾಕುವವರ ವಿರುದ್ಧ ನಗರಸಭೆ ದಂಡ ವಿಧಿಸಿ, ಪ್ರಕರಣ ದಾಖಲಿಸಲು ಮುಂದಾಗಬೇಕು. ಕಸ ಹಾಕುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಇಲ್ಲದಿದ್ದರೆ ಕಸವನ್ನು ನಿಯಮಿತವಾಗಿ ವಿಲೇವಾರಿ ಮಾಡಬೇಕು ಎನ್ನುವುದು ವಾಹನ ಸವಾರರ ಆಗ್ರಹವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...