ದಾವಣಗೆರೆ | ದಾವಣಗೆರೆ ಮಾದರಿಯಲ್ಲಿ ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗೆ ಒಮ್ಮೆ ಅವಕಾಶ ಕೊಡಿ: ಡಾ. ಪ್ರಭಾ ಮಲ್ಲಿಕಾರ್ಜುನ್

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಸ್ಥಳೀಯ ಮುಖಂಡರೊಂದಿಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು.

- Advertisement -

ಅಣಜಿ ಕಿತ್ತೂರು, ಕುರುಡಿ, ಹೆಮ್ಮನಬೇತೂರು, ದ್ಯಾಮವ್ವನಹಳ್ಳಿ, ಗಾಂಧಿನಗರ, ಹುಲಿಕಟ್ಟೆ, ಕೆರೆಯಾಗಳಹಳ್ಳಿ, ಗಿರಿಯಾಪುರ, ಗೊಲ್ಲರಹಳ್ಳಿ, ಚಿಕ್ಕವ್ವನಾಗ್ತಿಹಳ್ಳಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | ಬಿಜೆಪಿಯ ಹಿಂದುತ್ವದ ಅಸ್ತ್ರಕ್ಕೆ ಎಸ್‌ಪಿ...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳು ಬಾಕಿ ಇವೆ. ಆ ರಾಜ್ಯದ ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಮಾಜಿ ಮುಖ್ಯಮಂತ್ರಿ...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ...

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ ಬಲಿ ಕೇವಲ ಸೋಲಿನ ಸಂಕೇತವಲ್ಲ; ಆತ ಚಾರಿತ್ರಿಕವಾಗಿ ಪ್ರಭುತ್ವದ ವಂಚನೆಯನ್ನು ಬಯಲು ಮಾಡುವ ಜೀವಂತ ಪ್ರತಿರೋಧ. ಊರಿಗೆಲ್ಲ ದೀಪಾವಳಿಯು ಬೆಳಕಿನ ಸಂಭ್ರಮವಾದರೆ,...

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಪ್ರತೀ ಗ್ರಾಮದಲ್ಲಿ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಅವರು, ದಾವಣಗೆರೆ ನಗರವನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದು, ರಾಜ್ಯ ಮತ್ತು ದೇಶದಲ್ಲೇ ಮಾದರಿ ನಗರವಾಗಿದೆ. ಇದೇ ರೀತಿ ದಾವಣಗೆರೆ ಲೋಕಸಭಾ ಕ್ಷೇತ್ರ ಪ್ರತಿ ನಗರ ಮತ್ತು ಗ್ರಾಮಗಳು ಅಭಿವೃದ್ಧಿ ಹೊಂದಲು ನನಗೆ ಒಂದು ಬಾರಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಈ ಭಾಗದಲ್ಲಿ 22 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಹರಿಸಲು ಸ್ಥಳೀಯ ಮುಖಂಡರ ಸಹಕಾರ ಮತ್ತು ಸಿರಿಗೆರೆ ಶ್ರೀಗಳ ಸಲಹೆಯಿಂದ ಮಲ್ಲಿಕಾರ್ಜುನ್ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಇಂದಿನ ಬೇಸಿಗೆಯಲ್ಲೂ ಕೆರೆಗಳಲ್ಲಿ ನೀರು ಇರುವುದರಿಂದ ಅಂತರ್ಜಲ ಹೆಚ್ಚಾಗಿ ಕೊಳವೆ ಬಾವಿಗಳಿಂದ ರೈತರಿಗೆ ನೀರು ಸಿಗುತ್ತಿದೆ. ಇಂತಹ ಕಾರ್ಯಗಳು ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ತಲುಪಬೇಕೆಂದರೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದರು.

ಕಾಂಗ್ರೆಸ್ ಸರ್ಕಾರವು ಎಲ್ಲಾ ಸಮುದಾಯಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ, ಮಧ್ಯಕರ್ನಾಟಕ ದಾವಣಗೆರೆಯಲ್ಲಿ ಬದಲಾವಣೆಯ ಅಲೆ ಇದ್ದು, ಜನರಲ್ಲಿ ನಮ್ಮ ಮೇಲಿದ್ದ ವಿಶ್ವಾಸವನ್ನು ಹೆಚ್ಚಾಗಿದೆ. ಎಲ್ಲರಿಗೂ ನ್ಯಾಯ ಸಿಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ದೇಶದಲ್ಲಿ ಬದಲಾವಣೆಯ ಅಲೆ ಆರಂಭವಾಗಿದ್ದು, ಕಳೆದ 10 ವರ್ಷಗಳಲ್ಲಿ ರೈತರಿಗೆ ನೆರವಾಗುವ ಯಾವುದೇ ಕೆಲಸಗಳನ್ನು ಕೇಂದ್ರ ಸರ್ಕಾರವಾಗಲೀ, ದಾವಣಗೆರೆ ಸಂಸದರು ಮಾಡಲಿಲ್ಲ. ಆದರೆ, ಹಿಂದಿನ ಮನಮೋಹನ್ ಸಿಂಗ್ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಿತ್ತು ಎಂದರು.

ಇದೇ ವೇಳೆ ಮತದಾನದ ಹಕ್ಕಿನ ಮಹತ್ವವನ್ನು ತಿಳಿಸಿ ಹೇಳಿದ ಪ್ರಭಾ ಮಲ್ಲಿಕಾರ್ಜುನ್ ಅವರು ಜನರಲ್ಲಿ ಮತದಾನ ಮತ್ತು ಆರೋಗ್ಯದ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಜನರ ಆಶೋತ್ತರಗಳ ನಿರಾಸೆಗೊಳಿಸದೆ ಶ್ರದ್ಧೆಯಿಂದ ಪ್ರತಿನಿಧಿಸುತ್ತೇನೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ನಿಂತಿದೆ, ಈ ಬಾರಿಯ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದೇ ಆದರೆ, ಎಲ್ಲಾ ವರ್ಗಗಳ ಹಿತಾಸಕ್ತಿಗಳ ಪರವಾಗಿ ಪ್ರಬಲವಾಗಿ ನಿಲ್ಲುತ್ತೇನೆಂದು ಆಶ್ವಾಸನೆ ನೀಡಿದರು.

ಪ್ರಚಾರದ ವೇಳೆ ಶಾಸಕ ಬಸವಂತಪ್ಪ, ಬ್ಲಾಕ್ ಅಧ್ಯಕ್ಷ ಹನುಮಂತಪ್ಪ, ಬಿ.ಜಿ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಣ್ಣ, ಮುದೇಗೌಡ್ರ ಗಿರೀಶ್, ಬೇತೂರು ಕರಿಬಸಪ್ಪ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಟ್ಟೆ ಒಣಗಿಸುವ ಕಬ್ಬಿಣದ ತಂತಿ ಸ್ಪರ್ಶಿಸಿ ವಿದ್ಯುತ್ ಆಘಾತ: ವ್ಯಕ್ತಿ ಸಾವು

ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ...

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ...

ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ...