ದಾವಣಗೆರೆ | ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ʼಗ್ಯಾರಂಟಿ ಸಮಾವೇಶʼ

Date:

Advertisements

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತೀ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ, ಸರ್ಕಾರ ʼಗ್ಯಾರಂಟಿ ಸಮಾವೇಶʼ ಕಾರ್ಯಕ್ರಮ ಆಯೋಜಿಸುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳು ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಗೂ ಆನಗೋಡು ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ‘ಗ್ಯಾರಂಟಿ ಸಮಾವೇಶ’ ಉದ್ಘಾಟಿಸಿ ಮಾತನಾಡಿದ ಅವರು, ಕೆಲವರು ಈ ಯೋಜನೆಗಳನ್ನು ತಪ್ಪಿಸಬೇಕೆಂಬ ಉದ್ದೇಶದಿಂದಲೇ ಇಲ್ಲಸಲ್ಲದ ವದಂತಿಗಳನ್ನು ಫಲಾನುಭವಿಗಳ ತಲೆಯಲ್ಲಿ ತುಂಬುತ್ತಿದ್ದಾರೆ. ಯಾರೂ ಕೂಡ ಈ ಊಹಾಪೋಹಗಳಿಗೆ ಕಿವಿ ಗೊಡಬಾರದು ಎಂದರು.

ಈ ಯೋಜನೆಗಳು ಇನ್ನೂ ಹತ್ತು ವರ್ಷಗಳು ಇರಬೇಕು. ಬಡವರಿಗೆ, ತಾಯಂದಿಯರಿಗೆ ಸೌಲಭ್ಯ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ಫಲಾನುಭವಿಗಳು ಸುಳ್ಳು ವದಂತಿಗಳನ್ನು ನಂಬಬಾರದು ಎಂದು ಕಿವಿಮಾತು ಹೇಳಿದರು.

Advertisements

ಇದೇ ವೇಳೆ ಆನಗೋಡು ಗ್ರಾಮದಲ್ಲಿ ಗ್ರಾಪಂ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, 42 ಗ್ರಾಪಂ ಮಟ್ಟದ ಒಕ್ಕೂಟಗಳ ಮತ್ತು ವಿಶ್ವಬಂಧು ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಆಶ್ರಯದಲ್ಲಿ ದಿನಬಳಕೆ ವಸ್ತುಗಳು, ಆಹಾರ ಪದಾರ್ಥಗಳು, ಕರಕುಶಲ ವಸ್ತುಗಳು ಮತ್ತು ಗೃಹೋಪಯೋಗಿ ವಸ್ತುಗಳ ‘ಸಂಜೀವಿನಿ ಮಾಸಿಕ ಸಂತೆಮೇಳ’ಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪ ತಹಸೀಲ್ದಾರ್ ರಾಮಸ್ವಾಮಿ, ಡಿ.ಎಂ. ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ, ಸಿಡಿಪಿಒ ಅಭಿಕುಮಾ‌ರ್, ತಾಪಂ ಇಒ ರಾಮಭೋವಿ, ಕಂದಾಯ ಅಧಿಕಾರಿ ಚಂದ್ರಪ್ಪ, ಕೆಇಬಿ ಎಇಇ ತೀರ್ಥೇಶ್, ಶ್ರೀನಿವಾಸ್, ತೇಜವರ್ಧನ್ ಸೇರಿದಂತೆ ಇನ್ನಿತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X