ದಾವಣಗೆರೆ | ಹೊರಗುತ್ತಿಗೆ ನೌಕರರ ಮೇಲೆ ದೌರ್ಜನ್ಯ; ದೂರು ದಾಖಲು

Date:

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಲಾಗಿದೆ.

ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಸ್‌ಸಿ-ಎಸ್‌ಟಿ ಸಿಬ್ಬಂದಿಯನ್ನು ಗೋಣಿವಾಡ ಮಂಜುನಾಥ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಮಾನಸಿಕ ಹಾಗೂ ದೈಹಿಕ ಹಿಂಸೆಗಳನ್ನು ನೀಡುತ್ತಿರುವುದಾಗಿ ಆರೋಪಿಸಿ ಜೈ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಎಲ್‌.ಸಿ. ನೀಲಗಿರಿ ಅವರು ದೂರು ನೀಡಿದ್ದಾರೆ.

ದಾವಣಗೆರೆಯ ‘ದೀಕ್ಷಾ ಕನ್ಸಲ್ವೆನ್ಸಿ ಮ್ಯಾನ್ ಫವರ್‌ ಮತ್ತು ಸೆಕ್ಯುರಿಟಿ ಸರ್ವೀಸಸ್‌’ನ ಗೋಣಿವಾಡ ಮಂಜುನಾಥ್, ಕೆಟಿಜೆ ನಗರದ ಲೋಹಿತ್, ಮಂಡಿಪೇಟೆಯ ಬಸಣ್ಣ ಹಾಗೂ ಷರೀಫ್ ಅವರುಗಳ ಮೇಲೆ ದೂರು ನೀಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ರೋಗಿಗಳ ಮಲವನ್ನು ಶುಚಿಗೊಳಿಸಬೇಕು. ಎಂದು ಏರು ಧ್ವನಿಯಲ್ಲಿ ನಿಂದಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಲೋಹಿತ್ ಅವರು ಬಾಡಿ ವೈಟ್ ಲಿಪ್ಟರ್‌ಗಳನ್ನು ಹಾಗೂ ಹೊರ ವ್ಯಕ್ತಿಗಳನ್ನು ಕರೆತಂದು ಗೋಣಿವಾಡ ಮಂಜುನಾಥ ಇವರು ಹೇಳುವ ಸಿಬ್ಬಂದಿಗಳಿಗೆ ಹಿಂಸೆ ನೀಡುತ್ತಾರೆ. ಪ್ರತೀ ತಿಂಗಳು ಒಬೊಬ್ಬ ಸಿಬ್ಬಂದಿಯಿಂದ 2000 ರೂ. ಪಡೆಯುತ್ತಾರೆ. ಆಸ್ಪತ್ರೆಯಲ್ಲಿ ಒಟ್ಟು 212 ಸಿಬ್ಬಂದಿಗಳು ಹೊರಗುತ್ತಿಗೆ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಮೇಲೆ ದೈಹಿಕವಾಗಿ ಹಲ್ಲೇ ನಡೆಸುವುದು ಇತ್ಯಾದಿ ರೂಪದಲ್ಲಿ ತೊಂದರೆ ಕೊಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಕ್ರಮವಾಗಿ ಗಣೇಶ ಟೀ ಸ್ಟಾಲ್‌ನ್ನು ಗುತ್ತಿಗೆ ನೀಡುವ ಮೂಲಕ ಪ್ರತೀ ತಿಂಗಳು ಬೇನಾಮಿ ಮಾಮೂಲಿ ವಸೂಲಿ ಮಾಡಿಕೊಂಡು ಸರ್ಕಾರಕ್ಕೆ ಬರಬಹುದಾದ ಆದಾಯವನ್ನು ವಂಚಿಸಲಾಗಿದೆ. ಇಲ್ಲಿ ಬರುವ ರೋಗಿಗಳಿಗೆ ಪ್ರತಿನಿತ್ಯ ಮದ್ಯ ಸೇವನೆ ಮಾಡಿ ಹಿಂಸೆ ನೀಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇ.ಎಸ್‌.ಐ. ಹಾಗೂ ಇ.ಪಿ.ಎಫ್.ಗಳನ್ನು ನಿರ್ವಹಣೆ ಮಾಡಿರುವುದಿಲ್ಲ ಮತ್ತು 5 ತಿಂಗಳ ಹೊರಗುತ್ತಿಗೆ ಸಿಬ್ಬಂದಿಯ ವೇತನ ನೀಡಿಲ್ಲ ಎಂದು ನನಗೆ ನೊಂದ ಹೊರಗುತ್ತಿಗೆ ಸಿಬ್ಬಂದಿಗಳಿಂದ ಗುಪ್ತ ಮಾಹಿತಿ ನೀಡಿದ್ದಾರೆ. ಆದ್ದರಿಂದ ತಾವುಗಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ...

ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) 2024-25ರ ಶೈಕ್ಷಣಿಕ ವರ್ಷದಿಂದ...

ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು...

ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಗ್ರಾಮ ಪಂಚಾಯತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಪಂಚಾಯತಿ...