ದಾವಣಗೆರೆ | ಸ್ವಾಭಿಮಾನಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಜಿ.ಬಿ. ವಿನಯಕುಮಾರ

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುವುದು ಖಚಿತ, ನಾಮಪತ್ರ ಸಲ್ಲಿಸಿ, ನಂತರ ಅದನ್ನು ವಾಪಸ್ಸು ತೆಗೆದುಕೊಳ್ಳುವ ಪ್ರಶ್ನೆಯೇ ಇರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಟಿಕೆಟ್ ವಂಚಿತ ಜಿ.ಬಿ. ವಿನಯಕುಮಾರ ಪುನರುಚ್ಛರಿಸುವ ಮೂಲಕ ಸ್ಪರ್ಧೆ ಖಚಿತಗೊಳಿಸಿದ್ದಾರೆ.

- Advertisement -

ದಾವಣಗೆರೆ ನಗರದಲ್ಲಿ ಸುದ್ದಿಮಾದ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾನು ನಾಮಪತ್ರ ಸಲ್ಲಿಸುತ್ತೇನೆ. ನಾಮಪತ್ರ ಸಲ್ಲಿಸಿದ ನಂತರ ಯಾವುದೇ ಕಾರಣಕ್ಕೂ ವಾಪಸ್ಸು ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರಿಂದಲೂ ನನಗೆ ಫೋನ್ ಬರುತ್ತಿದೆ. ನಾನು ಈಗಾಗಲೇ ಕ್ಷೇತ್ರಾದ್ಯಂತ ಸುತ್ತಾಡಿದ್ದೇನೆ. ಕಾಂಗ್ರೆಸ್ ಪಕ್ಷದ ಟಿಕೆಟ್ ನನಗೆ ತಪ್ಪಿರಬಹುದು. ಆದರೆ, ನಾನು ಪಕ್ಕಾ ಕಾಂಗ್ರೆಸ್ಸಿಗ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾಂಗ್ರೆಸ್ಸನ್ನು ಸೋಲಿಸುವುದು, ಬಿಜೆಪಿಯನ್ನು ಗೆಲ್ಲಿಸುವುದು ನನ್ನ ಗುರಿಯಂತೂ ಅಲ್ಲ. ನಾನು ಗೆಲ್ಲಬೇಕು. ಅದಕ್ಕಾಗಿ ಗೆಲ್ಲುವ ಕಡೆಗೆ ನನ್ನೆಲ್ಲಾ ಪ್ರಯತ್ನ ಮಾಡುತ್ತೇನೆ. ಕ್ಷೇತ್ರದಲ್ಲಿ ನಾನು ಸಹ ಕಾಂಗ್ರೆಸ್ ಅಭ್ಯರ್ಥಿಯೆಂದೇ ಪ್ರಚಾರ ಮಾಡಿ, ಅಹಿಂದ ಮತಗಳನ್ನು ಒಟ್ಟುಗೂಡಿಸುತ್ತೇನೆ ಎಂದರು.

ಎಲ್ಲಾ ಅಹಿಂದ ಮುಖಂಡರು, ಜಿಲ್ಲೆ, ರಾಜ್ಯ ಮುಖಂಡರು ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಆದರೆ, ನೂರಾರು ಹಳ್ಳಿಗಳ ಜನ ಸಾಮಾನ್ಯರು, ಮತದಾರರು ನನ್ನನ್ನು ಒಪ್ಪಿಕೊಂಡಿದ್ದಾರೆ. ಅವರ ಅಭಿಪ್ರಾಯದಂತೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ.

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾನು ನಾಮಪತ್ರ ಸಲ್ಲಿಸಿ, ಸ್ಪರ್ಧಿಸುವುದಂತೂ ಖಚಿತ ಎಂದು ಜಿ.ಬಿ. ವಿನಯಕುಮಾರ ಸ್ಪಷ್ಟವಾಗಿ ಖಚಿತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...