ದಾವಣಗೆರೆ | ಅಕ್ರಮ ಪಡಿತರ ಸಾಗಾಟ: ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ಒತ್ತಾಯ

Date:

ದಾವಣಗೆರೆಯ ಹರಿಹರದ ಪಡಿತರ ವಿತರಣಾ ಕೇಂದ್ರವೊಂದರಲ್ಲಿ ಅಕ್ರಮವಾಗಿ ಅಕ್ಕಿ ಮತ್ತು ರಾಗಿಯನ್ನು ಸಾಗಿಸುವುದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಗ್ರಾಮಾಂತರ ಘಟಕದ ಭಾಜಪಾ ವತಿಯಿಂದ ಪ್ರತಿಭಟನೆ ನಡೆಸಿದರು.

- Advertisement -

ಹರಿಹರದ ಆಶ್ರಯ ಬಡಾವಣೆಯಲ್ಲಿರುವ ಶ್ರೀ ಶಕ್ತಿ ಜಯದೇವಿ ಮಹಿಳಾ ಮಂಡಳಿ ಪಡಿತರ ವಿತರಣಾ ಕೇಂದ್ರ ಸೊಸೈಟಿಯ ಮಾಲೀಕ ಡಿ. ಹನುಮಂತಪ್ಪ ದಂಪತಿಗಳಿಬ್ಬರು ಸೇರಿ ಬಡವರಿಗೆ ನೀಡಬೇಕಿದ್ದ ಅಕ್ಕಿ ಹಾಗೂ ರಾಗಿಯನ್ನು ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ನಗರಸಭೆ ಸದಸ್ಯ ಆಟೋ ಹನುಮಂತಪ್ಪ ಹಾಗೂ ಸ್ಥಳೀಯರು ತಡೆಯಲು ಹೋಗಿದ್ದಕ್ಕೆ ಸೊಸೈಟಿ ಮಾಲೀಕರಿಬ್ಬರು ಸೇರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹನುಮಂತಪ್ಪನವರ ಮೇಲೆ ಗುಂಡಾ ವರ್ತನೆ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ವೇಳೆ ಬಿಜೆಪಿ ಅಧ್ಯಕ್ಷ ಲಿಂಗರಾಜು‌ ಮಾತನಾಡಿ, ಸರ್ಕಾರ ಬಡವರಿಗೆ ನೀಡುವ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಾಗಿಸಲು ಕಾರಣವಾದ ಪಡಿತರ ವಿತರಣಾ ಕೇಂದ್ರವನ್ನು ಬಂದ್ ಮಾಡಿಸಿ ಸೋಸೈಟಿ ಮಾಲೀಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಆಹಾರ ಸರಬರಾಜು ಇಲಾಖೆ ಕಂದಾಯ ಇಲಾಖೆ ಮತ್ತು ಪೊಲೀಸ್ ಇಲಾಖಾ ಅಧಿಕಾರಿಗಳು ಈ ಕೂಡಲೇ ಗಮನಹರಿಸಬೇಕು. ಒಂದು ವೇಳೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಭಾರತೀಯ ಜನತಾದಳ ಪಕ್ಷದ ವತಿಯಿಂದ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...