ದಾವಣಗೆರೆ | ಅಕ್ರಮವಾಗಿ ಆಸ್ತಿ ಒತ್ತುವರಿ; ಅಧಿಕಾರಿಗಳ ವಿರುದ್ಧ ಗೆದ್ದು ಬೀಗಿದ ರೈತ ಮೇಘರಾಜಪ್ಪ

Date:

ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಜಗಳೂರು ತಾಲೂಕು ಅಧಿಕಾರಿಗಳ ವಿರುದ್ಧ ವೃದ್ಧ ರೈತರೊಬ್ಬರು ಗೆದ್ದು ಬೀಗಿದ್ದಾರೆ.

- Advertisement -

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ಒಡೆಯರಳ್ಳಿ ಗ್ರಾಮದ ರೈತ ಮೇಘರಾಜಪ್ಪ ಸ್ಥಳೀಯ ಆಡಳಿತದ ವಿರುದ್ಧ ಛಲ ಬಿಡದೆ ಹೋರಾಡಿ ತಮ್ಮ ಜಮೀನನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಅಂತಿಮವಾಗಿ ಹಿಂದಿನ ಅವಧಿಯ ಮತ್ತು ಪ್ರಸ್ತುತ ಅವಧಿಯ ಅಧಿಕಾರಿಗಳು ಲೋಕಾಯುಕ್ತ ಕೋರ್ಟ್‌ನಲ್ಲಿ ಹಾಜರಾಗಿ, ರೈತ ಮೇಘರಾಜಪ್ಪನವರ ಜಮೀನಿಗೆ ಯಾವುದೇ ಅತಿಕ್ರಮ ಪ್ರವೇಶ ಮಾಡುವುದಾಗಲಿ, ಜಮೀನಿನ ವಿಷಯದಲ್ಲಿ ತಲೆ ಹಾಕುವುದಾಗಲೀ ಮಾಡುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಹಿಂದೆ ವೃದ್ಧರ ಇತರೆ ಜಮೀನಿನ ಕಬಳಿಕೆ ಸಂಬಂಧಪಟ್ಟಂತೆ ಈದಿನ ಡಾಟ್‌ ಕಾಂ “ರೈತರ ಜಾಗ ಕಬಳಿಸಲು ದಿದ್ದಿಗೆ ಗ್ರಾಮ ಪಂಚಾಯಿತಿ ಹುನ್ನಾರ, ಆರೋಪ” ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಹಲವಾರು ವರ್ಷಗಳಿಂದ ಪೂರ್ವಜರ ಆಸ್ತಿಯನ್ನು ಉಳಿಸಿ ಅನುಭವಿಸಿಕೊಂಡು ಬಂದಿದ್ದ ಜಾಗವನ್ನು ಕಬಳಿಸಲು ಸ್ಥಳೀಯ ಆಡಳಿತ ಯತ್ನಿಸಿದಾಗ. ಮೇಘರಾಜಪ್ಪ ಇದರ ವಿರುದ್ಧ ಹೋರಾಡಿ 1999ರಲ್ಲಿ ತಮ್ಮ ಪರವಾಗಿ ಆದೇಶ ಪಡೆದಿದ್ದರು. ಅಲ್ಲಿಂದಲೂ ಯಾವುದೇ ತಕರಾರು ಮಾಡದಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು 2021ರಲ್ಲಿ ಆಸ್ತಿಯ ಈ-ಸ್ವತ್ತಿಗೆ ಅರ್ಜಿ ಹಾಕಿದಾಗ ಈ ಖಾತೆ ಮಾಡಿಕೊಡಲು ₹50,000 ಲಂಚ ಕೇಳಿದ್ದರು. ಆದರೆ ಅದನ್ನು ನಿರಾಕರಿಸಿದಾಗ ಸದರಿ ಜಮೀನನ್ನು ಶಾಲೆ ಮತ್ತು ಗ್ರಾಮ ಪಂಚಾಯಿತಿ ಜಾಗವೆಂದು ಅಕ್ರಮವಾಗಿ ವಶಪಡಿಸಿಕೊಳ್ಳಲು 14 ಮಂದಿಗೆ ನೋಟಿಸ್ ನೀಡಿದ್ದರು. ಆ ಪೈಕಿ ಮೇಘರಾಜಪ್ಪನವರ ಜಮೀನನ್ನು ಕಬಳಿಸಲು ಸಂಚು ರೂಪಿಸಲಾಗಿತ್ತು ಎಂದು ಆರೋಪ ವ್ಯಕ್ತವಾಗಿತ್ತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ, ಆ ಜಾಗವು ಶಾಲೆ ಅಥವಾ ಗ್ರಾಮ ಪಂಚಾಯಿತಿಗೆ ಸೇರಿದ ಜಾಗವೆಂದು ಖಚಿತಪಡಿಸಲು ಯಾವುದೇ ಪೂರಕ ದಾಖಲೆಗಳಿರದೆ ಅಧಿಕಾರಿಗಳು ದಾಖಲೆ ಸಲ್ಲಿಸಲು ವಿಫಲರಾಗಿದ್ದರು. ಇಲ್ಲಿ ಮೇಘರಾಜಪ್ಪನವರು ಪೂರಕ ದಾಖಲೆಗಳನ್ನು ಒದಗಿಸಿದ್ದರು. ಈ ಬಗ್ಗೆ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ತಪ್ಪಾಗಿರುವುದನ್ನು ಕಂಡು ಎಚ್ಚೆತ್ತಿರುವ ಅಧಿಕಾರಿಗಳು ಡಿಸೆಂಬರ್‌ನಲ್ಲಿ ಸ್ಥಳ ಮಹಜರು ಮಾಡಿ ಲೋಕಾಯುಕ್ತ ಕೋರ್ಟಿಗೆ ವರದಿ ಸಲ್ಲಿಸಿದ್ದು, ಈ ಜಮೀನಿಗೆ ಯಾವುದೇ ಅತಿಕ್ರಮ ಪ್ರವೇಶ ಮತ್ತು ಜಮೀನಿನ ವಿಷಯದಲ್ಲಿ ಪ್ರವೇಶ ಮಾಡುವುದಿಲ್ಲವೆಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಾಲಯ ವೃದ್ಧರೈತ ಮೇಘರಾಜಪ್ಪನಿಗೆ ನ್ಯಾಯ ಒದಗಿಸಿಕೊಟ್ಟಿದೆ.

ರೈತ ಮೇಘರಾಜಪ್ಪನ ಆಸ್ತಿಯನ್ನು ಅಳತೆ ಮಾಡಲಾಗಿದ್ದು, ಯೋಜನೆ ಸಿದ್ಧಪಡಿಸಿ, ಅವರ ಸ್ವಾಧೀನದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲವೆಂಬ ಭರವಸೆ ನೀಡಲಾಗಿದೆ.

ರೈತ ಮೇಘರಾಜಪ್ಪ ತನ್ನ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಅನುಭವಿಸುವಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲವೆಂದು ದಿದ್ದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಮತ್ತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯದಲ್ಲಿ ಒಪ್ಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...