ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಚಿಕ್ಕಮೇಗಳಗೆರೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದಾವಣಗೆರೆ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ ಮಾಹಿತಿ ನೀಡಿದರು.
ದಸಂಸ ಸಭೆಯಲ್ಲಿ ಮಾತನಾಡಿದ ಅವರು, “ಚಿಕ್ಕಮೆಗಳಗೆರೆ ಗ್ರಾಮದಲ್ಲಿ ದಸಂಸ ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಮಾಡುತ್ತಿದೆ. ಇದಕ್ಕೆ ವಿಜಯನಗರ ಜಿಲ್ಲಾ ಸಂಚಾಲಕರಾದ ದುರ್ಗೇಶ್ ಅವರ ಅಧ್ಯಕ್ಷತೆಯಿದೆ. ಶಿವಮೊಗ್ಗ ಜಿಲ್ಲಾ ಸಂಚಾಲಕ ಏಳುಕೋಟಿ ಅವರು ಸಹಕಾರ ನೀಡುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ದಸಂಸ ಉಸ್ತುವಾರಿ ವಹಿಸಿದೆ” ಎಂದು ಹೇಳಿದರು.
ರಾಷ್ಟ್ರವೇ ಹೆಮ್ಮೆ ಪಡುವಂತ ಸಂವಿಧಾನ ನೀಡಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿ ನಿರ್ಮಾಣಕ್ಕೆ ಸಹಕಾರ ಕೋರಿ ಹಾಗೂ ವಸತಿ ರಹಿತರಿಗೆ ನಿವೇಶನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸುತ್ತೇವೆ ಎಂದರು.
ವಸತಿ ರಹಿತರ ಸಮಸ್ಯೆ ಸೇರಿ ಇನ್ನಿತರ ವಿಷಯಗಳ ಬಗ್ಗೆ, ಎಲ್ಲರೂ ಒಗ್ಗಟ್ಟಿನಿಂದ ಸಂಘಟನೆ ಮಾಡುವುದು ಹಾಗೂ ಗ್ರಾಮ ಶಾಖೆಯ ಉದ್ಘಾಟನೆ ಮಾಡುವುದರ ವಿಷಯವಾಗಿ ಗ್ರಾಮದ ದಲಿತ ಯುವಕರು ಯುವತಿಯರು, ಹಿರಿಯರು,ಮುಖಂಡರು ಜೊತೆಗೆ ಚರ್ಚಿಸಲಾಗಿದ್ದು ಸಮುದಾಯದ ಹಿತಕ್ಕಾಗಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷ್ಣಪ್ಪ, ಮಹಿಳಾ ಜಿಲ್ಲಾ ಸಂಚಾಲಕಿ ವಿಜಯಲಕ್ಷ್ಮೀ, ದಾವಣಗೆರೆ ತಾಲೂಕು ಸಂಚಾಲಕ ಹನುಮಂತಪ್ಪ ಅಣಜಿ ಹಾಗೂ ಸಂಘಟನೆಯ ಹಿರಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.