ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ ಕೂಡಲೇ ಜಾರಿಗೆ ತರಬೇಕು. ಆದರೆ ಒಳಮೀಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸಿ ಇಡೀ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ದಾವಣಗೆರೆ ಜಿಲ್ಲಾ ದಸಂಸ ಸಂಚಾಲಕ ಮಂಜುನಾಥ ಕುಂದುವಾಡ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ ಪ್ರವಾಸಿ ಮಂದಿರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಬಿ. ಕೃಷ್ಣಪ್ಪ ) ಯಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ಬೃಹತ್ ತಮಟೆ ಚಳುವಳಿಯ ಕರಪತ್ರ ಬಿಡುಗಡೆಮಾಡಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಒಳಮೀಸಲಾತಿ ಜಾರಿ ಮಾಡುವಲ್ಲಿ ತೋರುತ್ತಿರುವ ವಿಳಂಬ ನೀತಿ ಖಂಡಿಸಿ ಸೆ.12 ಗುರುವಾರ ರಂದು ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಕ್ಕೆ ದಾವಣಗೆರೆ ನಗರದ ಸಂಗೊಳ್ಳಿರಾಯಣ್ಣ ವೃತ್ತದಿಂದ ಪ್ರಾರಂಭವಾಗಿ ಪಿಬಿ ರಸ್ತೆ ಯಲ್ಲಿ ಸಾಗುವ ಬೃಹತ್ ಪ್ರತಿಭಟನೆ ರ್ಯಾಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ತಾಲ್ಲೂಕು ಸಂಚಾಲಕ ಹನುಮಂತಪ್ಪ ಅಣಜಿ ಹಾಗೂ ಹರಿಹರ ತಾಲ್ಲೂಕು ಸಂಚಾಲಕ ಮಹಾಂತೇಶ್ ಪಿ. ಜೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಮಹಾಂತೇಶ್ ಹಾಲುವರ್ತಿ, ಮಂಜುನಾಥ್. ಆರ್. ಲಕ್ಷ್ಮಣ ಕೊಡಗನೂರ್, ಕೆಂಚಪ್ಪ , ಹನುಮಂತಪ್ಪ ಗಂಗನಕಟ್ಟೆ, ತಾಲ್ಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ ಚಿತ್ತಾನಹಳ್ಳಿನಗರ, ಸಂಚಾಲಕ ಶಿವಶಂಕರ್ ಎಸ್. ಎಂ, ಸ್ಲಮ್ ಸಂಚಾಲಕ ನಾಗರಾಜ್ ಆನೆಕೊಂಡ ಹಾಗೂ ಇತರರು ಉಪಸ್ಥಿತರಿದ್ದರು.
