ದಾವಣಗೆರೆ | ಒಳ ಮೀಸಲಾತಿ ಅನುಷ್ಠಾನ ಮಾಡದೆ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ : ಮಂಜುನಾಥ್ ಕುಂದುವಾಡ

Date:

ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ ಕೂಡಲೇ ಜಾರಿಗೆ ತರಬೇಕು. ಆದರೆ ಒಳಮೀಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸಿ ಇಡೀ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ದಾವಣಗೆರೆ ಜಿಲ್ಲಾ ದಸಂಸ ಸಂಚಾಲಕ ಮಂಜುನಾಥ ಕುಂದುವಾಡ ಆಕ್ರೋಶ ವ್ಯಕ್ತಪಡಿಸಿದರು‌.

- Advertisement -

ದಾವಣಗೆರೆ ಪ್ರವಾಸಿ ಮಂದಿರದಲ್ಲಿ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಸೆ.12 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ.ಬಿ. ಕೃಷ್ಣಪ್ಪ ) ಯಿಂದ ರಾಜ್ಯಾದ್ಯಂತ ಏಕಕಾಲದಲ್ಲಿ ಬೃಹತ್ ತಮಟೆ ಚಳುವಳಿಯ ಕರಪತ್ರ ಬಿಡುಗಡೆಮಾಡಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರದ ಒಳಮೀಸಲಾತಿ ಜಾರಿ ಮಾಡುವಲ್ಲಿ ತೋರುತ್ತಿರುವ ವಿಳಂಬ ನೀತಿ ಖಂಡಿಸಿ ಸೆ.12 ಗುರುವಾರ ರಂದು ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಕ್ಕೆ ದಾವಣಗೆರೆ ನಗರದ ಸಂಗೊಳ್ಳಿರಾಯಣ್ಣ ವೃತ್ತದಿಂದ ಪ್ರಾರಂಭವಾಗಿ ಪಿಬಿ ರಸ್ತೆ ಯಲ್ಲಿ ಸಾಗುವ ಬೃಹತ್ ಪ್ರತಿಭಟನೆ ರ್ಯಾಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ತಾಲ್ಲೂಕು ಸಂಚಾಲಕ ಹನುಮಂತಪ್ಪ ಅಣಜಿ ಹಾಗೂ ಹರಿಹರ ತಾಲ್ಲೂಕು ಸಂಚಾಲಕ ಮಹಾಂತೇಶ್ ಪಿ. ಜೆ, ಜಿಲ್ಲಾ ಸಂಘಟನಾ ಸಂಚಾಲಕರಾದ ಮಹಾಂತೇಶ್ ಹಾಲುವರ್ತಿ, ಮಂಜುನಾಥ್. ಆರ್. ಲಕ್ಷ್ಮಣ ಕೊಡಗನೂರ್, ಕೆಂಚಪ್ಪ , ಹನುಮಂತಪ್ಪ ಗಂಗನಕಟ್ಟೆ, ತಾಲ್ಲೂಕು ಸಂಘಟನಾ ಸಂಚಾಲಕರಾದ ನಾಗರಾಜ ಬಿ ಚಿತ್ತಾನಹಳ್ಳಿನಗರ, ಸಂಚಾಲಕ ಶಿವಶಂಕರ್ ಎಸ್. ಎಂ, ಸ್ಲಮ್ ಸಂಚಾಲಕ ನಾಗರಾಜ್ ಆನೆಕೊಂಡ ಹಾಗೂ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...