ದಾವಣಗೆರೆ | ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಅನುದಾನ ಬಳಸದಂತೆ ಒತ್ತಾಯ

Date:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ದಾವಣಗೆರೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಕ್ಕುಗಳ ಹೋರಾಟ ಸಮಿತಿ ಆಗ್ರಹಿಸಿದೆ.

ದಾವರಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಉಪ ವಿಭಾಗಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

“ಕಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಆವರಗೆರೆ ವಾಸು, ರುದ್ರೇಶ್‌ ಮಳಲ್ಕೆರೆ, ಹನುಮಂತಪ್ಪ, ರಂಗನಾಥ, ಕೆರಯಾಗನಹಳ್ಳಿ ರಾಜು,ಎನ್‌.ಹೆಚ್‌ ರಾಮಣ್ಣ,ರಂಗನಾಥ, ನರೇಗ ಬಸಣ್ಣ, ವಿ.ಲಕ್ಷ್ಮಣ್, ಹನುಮಂತಪ್ಪ ಯರನಾಗತಿಹಳ್ಳಿ ರಮೇಶ್ ಸಿ.ದಾಸ‌, ಸಿ.ಗುರುಮೂರ್ತಿ, ಪರಶುರಾಮ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಪರಿಸರ ಉಳಿಸುವ ವಾಗ್ದಾನ ಪಕ್ಷಗಳ ಪ್ರಣಾಳಿಕೆ ಸೇರಲಿ: ಡಾ. ವಾಸು

ಆರೋಗ್ಯ ರಕ್ಷಣೆ ವ್ಯಕ್ತಿಗತವಾಗಿ ಉಳಿದಿಲ್ಲ. ಹಾಗಾಗಿ ವಾಯುಗುಣ ವೈಪರೀತ್ಯ ಮತ್ತು ಆರೋಗ್ಯದ...

ದಾವಣಗೆರೆ | ಅಸ್ಪೃಶ್ಯತಾ ನಿವಾರಣಾ ಜಾಗೃತಿ ಕಲಾ ಜಾಥಾ

ಎಲ್ಲ ಸಮುದಾಯಗಳ ಮಾನವರು ಒಂದೇ. ನಾವೆಲ್ಲ ಕೂಡಿ ಸಹೋದರತ್ವ ಭಾವನೆಯಿಂದ ಬದುಕಬೇಕೆಂಬ...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ...

ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು,...