ದಾವಣಗೆರೆ | ಜ. 30ರಂದು ದೇಶಕ್ಕಾಗಿ ಮಡಿದ ಹುತಾತ್ಮರ ನೆನಪಿನ ದಿನಾಚರಣೆ

Date:

ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮರ ನೆನಪಿನ ದಿನಾಚರಣೆಯನ್ನು ಜ. 30 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಲ್ಲೂರು ರವಿಕುಮಾರ್ ತಿಳಿಸಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ʼಮಹಾತ್ಮ ಗಾಂಧೀಜಿ ಹುತಾತ್ಮರಾದ ಜನವರಿ 30 ರಂದೇ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ಸೈನಿಕರಿಗೆ ಹಾಗೂ ರೈತರಿಗೆ ಗೌರವ ನಮನ ಸಲ್ಲಿಸಲಾಗುವುದು.‌ ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ವಿಕರವೇ ರಾಜ್ಯಾಧ್ಯಕ್ಷ ಕೆ ಜಿ ಯಲ್ಲಪ್ಪ ಮಾತನಾಡಿ, ʼದೇಶದ ಸ್ವಾತಂತ್ರ್ಯಕ್ಕಾಗಿ ಜೀವ ಪಣಕ್ಕಿಟ್ಟು ಹೋರಾಡಿದ್ದ ಸ್ವಾತಂತ್ರ್ಯ ಯೋಧರನ್ನು ಇಂದು ಕಡೆಗಣಿಸಲಾಗುತ್ತಿದೆ.‌ ಅವರಿಗೆ ಸರಿಯಾದ ಸ್ಥಾನಮಾನಗಳು ಸಿಗುತ್ತಿಲ್ಲ. ಅಂತಹ ಹುತಾತ್ಮರನ್ನು ನೆನೆದು ಅವರ ತ್ಯಾಗಕ್ಕೆ ಗೌರವ ಸಲ್ಲಿಸುವುದು ಕಾರ್ಯಕ್ರಮದ ಉದ್ದೇಶ ಎಂದರು.

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ವಸತಿ, ನಿವೇಶನ ರಹಿತರು ʼವಸತಿ, ನಿವೇಶನ ಪಡೆಯಲು ಜಾಗೃತಿ ಸಭೆʼ

ಕಬ್ಬು ಬೆಳೆಗಾರರ ಸಂಘದ ನಿರ್ದೇಶಕ ಹಾಗೂ ಜಿಲ್ಲಾಧ್ಯಕ್ಷ ತೇಜಸ್ವಿ ಪಟೇಲ್ ಮಾತನಾಡಿ, ʼಕೋಮುಗಲಭೆ ಸಂತ್ರಸ್ತರಿಗೆ 25 ಲಕ್ಷ ಪರಿಹಾರ ನೀಡುತ್ತಾರೆ. ಆದರೆ ರೈತ ಹುತಾತ್ಮರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ಸಮಿತಿ ರಚಿಸಿ, ಕಡಿಮೆ ಮೊತ್ತದ ಪರಿಹಾರ ನೀಡುತ್ತಾರೆ. ಪರಿಹಾರ ನೀಡುವಲ್ಲಿ ಕೂಡ ರೈತರಿಗೆ ಅನ್ಯಾಯವಾಗುತ್ತಿದೆ. ರೈತರಿಗೆ ಸರಿಯಾದ ಪರಿಹಾರ ಸಿಗಬೇಕುʼ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅಂಜಿನಪ್ಪ ಪೂಜಾ‌ರ್, ತಿರುಮಲೇಶ್, ಸಿ.ಎಸ್. ಚಂದ್ರಶೇಖರ್, ಹೆಚ್ ವಿಜಯಕುಮಾರ್, ಚಂದ್ರಶೇಖರ್ ಹೊಲಗೇರಿ, ಪ್ರಕಾಶ್ ನಲ್ಲೂರು, ಶಿವಯೋಗಯ್ಯ ಲೋಕನಗೌಡ್ರು ಹಾಗೂ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...

ಉಡುಪಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಇಂದು ಬೆಳಗಿನ ಜಾವದಿಂದಲೇ ಉಡುಪಿ ಜಿಲ್ಲೆಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ...

ಉಡುಪಿ | ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು

ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ...