ದಾವಣಗೆರೆ | ʼರಾಷ್ಟ್ರದ ವಿಚಾರಕ್ಕೆ ಭಾರತೀಯರು, ರಾಜ್ಯದ ವಿಚಾರಕ್ಕೆ ಕನ್ನಡಿಗರು: ವಚನಾನಂದ ಸ್ವಾಮೀಜಿ

Date:

Advertisements

ರಾಷ್ಟ್ರದ ವಿಚಾರ ಬಂದಾಗ ನಾವೆಲ್ಲ ಭಾರತೀಯರಾಗಿ, ರಾಜ್ಯದ ವಿಚಾರ ಬಂದಾಗ ಕನ್ನಡಿಗರಾಗೋಣ. ಪರಂಪರೆ, ಸಂಸ್ಕೃತಿ ವಿಚಾರ ಬಂದಾಗ ವೀರಶೈವ ಲಿಂಗಾಯತರಾಗಿ, ಸಮುದಾಯ ವಿಚಾರ ಬಂದಾಗ ನಾವೆಲ್ಲರೂ ಪಂಚಮಸಾಲಿಗಳಾಗಿ, ರಾಷ್ಟ್ರಧರ್ಮದ ವಿಚಾರ ಬಂದಾರ ನಾವೆಲ್ಲ ಹಿಂದೂಗಳಾಗಿ, ವೀರಶೈವ ಲಿಂಗಾಯತ ಎಂಬ ಭೇದಭಾವ ಮರೆತು ನಾವೆಲ್ಲ ಹಿಂದೂಗಳು ಒಂದೇ ಎಂಬ ಭಾವನೆಗಳನ್ನು ಬೆಳೆಸಿಕೊಳ್ಳೋಣ ಎಂದು ಪಂಚಮಸಾಲಿ ಗುರುಪೀಠಾಧ್ಯಕ್ಷ ವಚನಾನಂದ ಅವರು ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲೆ ಹರಿಹರ ನಗರದ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಸರಳವಾಗಿ ನಡೆದ ಮಹಾಯೋಗಿನಿ ಅಕ್ಕಮಹಾದೇವಿ ವಚನಗಳ ಪಲ್ಲಕ್ಕಿ ಮಹೋತ್ಸವ ಮತ್ತು ಆರನೇಯ ವರ್ಷದ ಪೀಠಾರೋಹಣ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರದ ಉದ್ಘಾಟನೆಯ ಸಮಯದಲ್ಲಿ ಪ್ರತಿಯೊಂದು ಮನೆಯಲ್ಲಿ ದೀಪವನ್ನು ಹಚ್ಚಿ ಆ ದಿನದಂದು ರಾಮನವಮಿ ಆಚರಣೆ ಎಂದು ಭಾವಿಸಿಕೊಂಡು ತಿಳಿದು ಪೂಜೆ ಮಾಡಿ ರಾಮನನ್ನು ಆರಾಧಿಸಬೇಕು ಎಂದು ಹೇಳಿದರು.

Advertisements

ರಾಜ್ಯದ ವೀರಶೈವ ಲಿಂಗಾಯತ ಸಮಾಜದಲ್ಲಿ, ಪಂಚಮಸಾಲಿ ಸಮಾಜದ ಜನರು ಅಧಿಕ ಸಂಖ್ಯೆಯ ಇರುವುದರಿಂದ ಅವರನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಸಮಾಜದಲ್ಲಿ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ಪ್ರತಿವರ್ಷ ಹರ ಜಾತ್ರಾ ಮಹೋತ್ಸವ ಆಚರಣೆ ಮಾಡಿ, ಜಾತ್ರಾ ಸಮಯದಲ್ಲಿ ಸಮಾಜದ ಎಲ್ಲರನ್ನೂ ಒಗ್ಗೂಡಿಸಿ ಸಮಾಜಕ್ಕೆ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡಲಾಗುತ್ತದೆಯೇ ಹೊರತು ಸಮಾಜವನ್ನು ಒಡೆಯುವಂತ ಕಾರ್ಯವನ್ನು ಮಾಡುತ್ತಿಲ್ಲ ಎಂದು ಹೇಳಿದರು.

ಪಂಚಮಸಾಲಿ ಸಮಾಜದಲ್ಲಿ ಬಹುತೇಕ ಜನರು ಕೃಷಿಯನ್ನು ಹೆಚ್ಚು ಅವಲಂಬಿಸಿ ಜೀವನ ಮಾಡುವುದರಿಂದ ಈ ಬಾರಿ ಮಳೆ ಬರದೆ ರೈತರು ಸಂಕಷ್ಟದ ಜೀವನ ಮಾಡುವಂತ ಸಂದರ್ಭದಲ್ಲಿ ಅದ್ದೂರಿಯಾಗಿ ಹರ ಜಾತ್ರಾ ಮಹೋತ್ಸವ ಆಚರಣೆ ಮಾಡದೆ ಸರಳವಾಗಿ ಆಚರಣೆ ಮಾಡಲಾಗಿದೆ. ರಾಜ್ಯದ ಸಕಲ ವೀರಶೈವ ಲಿಂಗಾಯತ ಸಮಾಜಕ್ಕೆ ಒಂದೇ ರೀತಿಯ ಮೀಸಲಾತಿ ಇರಬೇಕೆಂದು ನಮ್ಮ ಅಭಿಪ್ರಾಯವಾಗಿದ್ದು, ನಾವು ಈಗಾಗಲೇ ಎಲ್ಲಾ ಲಿಂಗಾಯತರನ್ನು ಕೇಂದ್ರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಅನೇಕ ರೀತಿಯ ಹೋರಾಟ ಮಾಡಲಾಗಿದೆ ಎಂದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪಡೆಯವ ನಿಟ್ಟಿನಲ್ಲಿ ಈಗಲೂ ಕೂಡ ಕಾನೂನು ಹೋರಾಟ ನಡೆಸುತ್ತಿದ್ದು, ಸುಮಾರು 900ಪುಟಗಳಷ್ಟು ದಾಖಲೆಗಳನ್ನು ಸರ್ಕಾರಕ್ಕೆ ನೀಡಿದ್ದು, ಆ ದೃಷ್ಟಿಯಿಂದ ನಮಗೆ ನ್ಯಾಯಲಯದಲ್ಲಿ ನ್ಯಾಯ ದೊರೆಯುತ್ತದೆ ಎಂಬ ವಿಶ್ವಾಸವಿದ್ದು, ಮುಂಬರುವ ಲೋಕಸಭೆಯ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಪಂಚಮಸಾಲಿ ಸಮುದಾಯಕ್ಕೆ ಜನಸಂಖ್ಯೆಯ ಅನುಗುಣವಾಗಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂದು ಶ್ರೀಗಳು ಆಗ್ರಹಿಸಿದರು.

ಈ ವೇಳೆ ವಿವಿಧ ಅಲಗೂರು ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ, ಮೈಸೂರಿನ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಹದಿನೈದಕ್ಕೂ ಹೆಚ್ಚಿನ ವಿವಿಧ ಮಠಾಧೀಶರು ಮಾತನಾಡಿದರು.

ಈ ಸಂದರ್ಭದಲ್ಲಿ ರಾಣೇಬೆನ್ನೂರು ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್, ಎಸ್.ಎಸ್. ಕೇರ್ ಟ್ರಸ್ಟ್ ನ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್, ಪಂಚಮಸಾಲಿ ಸಮಾಜದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಬಸವರಾಜ್ ದಿಂಡೂರು, ಪಿ.ಡಿ. ಶಿರೂರು, ಜ್ಯೋತಿ ಪ್ರಕಾಶ್, ಚಂದ್ರಶೇಖರ್ ಪೂಜಾರ್, ಆಡಳಿತಾಧಿಕಾರಿ ರಾಜಕುಮಾರ್ ಹೊನ್ನಾಳಿ, ಪ್ರಕಾಶ್ ಪಾಟೀಲ್ ದಾವಣಗೆರೆ, ವಸಂತ್ ಉಲ್ಲತ್ತಿ, ರಶ್ಮಿ ಕುಂಕದ್, ಡಿ.ಜೆ. ಶಿವಾನಂದಪ್ಪ, ಗುತ್ತೂರು ಹಾಲೇಶ್ ಗೌಡ್ರು, ಮಂಜುನಾಥ್ ಪುರವಂತರ, ಕರಿಬಸಪ್ಪ ಕಂಚಿಕೇರಿ ಹರಿಹರ, ಕರಿಬಸಪ್ಪ ಗುತ್ತೂರು, ಬಾದಮಿ ಜಯಣ್ಣ, ಲಿಂಗರಾಜ್ ಪಟೇಲ್ ಬೆಳಕೇರಿ, ಶಿವಪ್ಪ ಬಂಕಾಪುರ, ಮಲ್ಲಿಕಾರ್ಜುನ, ಅಶೋಕ ಬೆಂಡಿಗೇರಿ, ಸೋಮಶೇಖರ್, ಬಾತಿ ರವಿಕುಮಾರ್, ಶ್ರೀಶೈಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X