ದಾವಣಗೆರೆ | ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾರನ್ನು ಅಭ್ಯರ್ಥಿ ಮಾಡಲು ಒತ್ತಾಯ

Date:

Advertisements

ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.

ಮಾ.14ರ ಸಂಜೆ ದಾವಣಗೆರೆಯ ಬಂಟರ ಭವನದಲ್ಲಿ ಸುಮಾರು 200ಕ್ಕೂ ಹೆಚ್ಚು ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಜನಪ್ರತಿನಿಧಿಗಳು ಸಭೆ ಸೇರಿ ಈ ನಿರ್ಣಯ ತೆಗೆದುಕೊಂಡಿದ್ದಾರೆ.

ಸುಮಾರು 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾಯಕರ್ತರಾಗಿ ಪ್ರತಿಯೊಂದು ಚುನಾವಣೆಗಳಲ್ಲಿ ಮತದಾರರ ಬಳಿ ತೆರಳಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಕ್ಷೇತ್ರದ ಜನತೆಯ ಮನೆ ಮಾತಾಗಿದ್ದಾರೆ. ಅವರ ಸ್ಪರ್ಧೆಯಿಂದ ಲಕ್ಷಕ್ಕೂ ಹೆಚ್ಚು ಮತಗಳಿಂದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisements

ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ನೂರಾರು ಆರೋಗ್ಯ ಶಿಬಿರಗಳನ್ನು ನಡೆಸಿ ಅನೇಕರ ಬಾಳಲ್ಲಿ ಆಶಾಕಿರಣವಾಗಿರುವ ಮಲ್ಲಿಕಾರ್ಜುನ್ ಅವರು ಪ್ರತಿನಿತ್ಯ ನೂರಾರು ಸಾರ್ವಜನಿಕರನ್ನು ಭೇಟಿ ಮಾಡಿ ಸ್ಥಳದಲ್ಲೇ ಸಮಸ್ಯೆ ಬಗೆಹರಿಸುತ್ತಿದ್ದಾರೆ. ಅವರು ಅಭ್ಯರ್ಥಿ ಆದರೆ ನಮ್ಮ ಪಕ್ಷದ ಗೆಲುವಿಗೆ ಅನುಕೂಲವಾಗಲಿದೆ ಎಂದರು.

ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಪ್ರಭಾವವನ್ನು ಮೂಡಿಸಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸಿದರೆ ದಾವಣಗೆರೆ ಲೋಕಸಭಾ ಕ್ಷೇತ್ರ ಮಾದರಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ಬಗ್ಗೆ ದಾವಣಗೆರೆ ಜಿಲ್ಲೆಯ ಪಕ್ಷದ ವರಿಷ್ಠರಾದ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡೋಣ. ಅವಶ್ಯವಿದ್ದರೆ ಹೈಕಮಾಂಡ್‌ಗೂ ನಿಯೋಗ ತೆರಳಲು ಸಭೆಯಲ್ಲಿ ತೀರ್ಮಾನಿಸಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಯೂಬ್ ಪೈಲ್ವಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಕೆ.ಪಿ.ಸಿ.ಸಿ. ಸದಸ್ಯ ಮುದೇಗೌಡ್ರು ಗಿರೀಶ್, ನಿಟುವಳ್ಳಿ ಆರ್.ಎಸ್. ಶೇಖರಪ್ಪ, ಎ.ನಾಗರಾಜ್ ಇವರುಗಳ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮಹಾಪೌರರಾದ ವಿನಾಯಕ ಪೈಲ್ವಾನ್, ಬಿ.ಎಚ್. ವೀರಭದ್ರಪ್ಪ, 200ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X