ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಸರ್ಕಾರದ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ. ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ದಾವಣಗೆರೆಯಲ್ಲಿ ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿದಂತೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ದಲಿತ ಮುಖಂಡರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಭೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, “ದಾವಣಗೆರೆಯ ಕೊಳಚೆ ನಿರ್ಮೂಲನಾ ಮಂಡಳಿ ಇಲಾಖೆ ಮತ್ತು ಅಧಿಕಾರಿಗಳು ಅವ್ಯವಹಾರ ನೆಡೆಸುತ್ತಿದ್ದಾರೆ. ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಹಲವು ಸೇವೆಗಳನ್ನು ಒದಗಿಸಲು ವಿಫಲವಾಗಿದ್ದಾರೆ” ಎಂದು ಆರೋಪಿಸಿದ್ದಾರೆ.
“ಅಧಿಕಾರಿಗಳ ಕಚೇರಿಗಳಲ್ಲಿ ಡಾ. ಅಂಬೇಡ್ಕರ್, ಮಹಾತ್ಮ ಗಾಂಧೀಜಿ ಸೇರಿದಂತೆ ಯಾರೊಬ್ಬರ ಭಾವಚಿತ್ರ ಇಲ್ಲ. ಮಹನೀಯರ ಭಾವಚಿತ್ರ ಇಡದೆ ಸರ್ಕಾರದ ನಿರ್ದೇಶನದ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
ಸಭೆಯಲ್ಲಿ ಸಂಘಟನೆಯ ಹನುಮಂತಪ್ಪ, ಪ್ರದೀಪ್ ಇತರರು ಇದ್ದರು.