ದಾವಣಗೆರೆ | ಹೊಸ ಪಡಿತರ ಚೀಟಿ ವಿತರಣೆ ಮತ್ತು ತಿದ್ದುಪಡಿಗೆ ಆಗ್ರಹ

Date:

ಹೊಸ ಪಡಿತರ ಚೀಟಿಗಳ ವಿತರಣೆ, ತಿದ್ದುಪಡಿ ಮತ್ತು ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್‌, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು 1 ವರ್ಷ ಸಂಪೂರ್ಣ ಮುಕ್ತಾಯವಾಗಿದ್ದು, ಇದುವರೆಗೂ ಹೊಸ ಪಡಿತರ ಚೀಟಿಯನ್ನು ಹಾಗೂ ತಿದ್ದುಪಡಿ ಮತ್ತು ಸೇರ್ಪಡೆಯನ್ನು ಮಾಡಿರುವುದಿಲ್ಲ. ಇದರಿಂದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೂ ಬಹಳ ತೊಂದರೆಯಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ʼಮಹಾಭಾರತʼ ಟಿವಿ ಧಾರಾವಾಹಿಗೆ ಅವಿಸ್ಮರಣೀಯ ಸಂಭಾಷಣೆ ಬರೆದಿದ್ದ ಈ...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

“ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದರೂ ಸಹ ಪಡಿತರ ಚೀಟಿಯ ಬಗ್ಗೆ ಯಾವುದೇ ಕಾರಣಕ್ಕೂ ಕ್ರಮ ವಹಿಸಿಲ್ಲ. ಕೂಡಲೇ ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿಯನ್ನು ಕೊಡಬೇಕು ಹಾಗೂ ಹಳೆಯ ಪಡಿತರ ಚೀಟಿಗಳ ತಿದ್ದುಪಡಿ ಮತ್ತು ಸೇರ್ಪಡೆಯ ಕಾರ್ಯಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು. ಪಡಿತರ ಚೀಟಿಯಲ್ಲಿ ಒಂದೆರಡು ಬಾರಿ ಸೇರ್ಪಡೆಗೆ ಅವಕಾಶ ಕೊಟ್ಟಿದ್ದರೂ ಕೂಡ ಯಾವೊಬ್ಬ ವ್ಯಕ್ತಿಗೂ ಅನ್ವಯಿಸಿಲ್ಲ. ಆಶ್ರಯ ಯೋಜನೆಯಡಿಯಲ್ಲಿ ಒಂದು ಕುಟುಂಬಕ್ಕೆ ಪಡಿತರ ಚೀಟಿಯನ್ನು ಸರ್ಕಾರ ನಿಗಧಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಪಡಿತರ ಚೀಟಿಯನ್ನು ಗ್ರಾಮ ಒನ್‌ನಲ್ಲಿ ತಿದ್ದುಪಡಿಗೆ ಅವಕಾಶ ಕೊಟ್ಟಿದ್ದರೂ ಯಾವೊಬ್ಬ ವ್ಯಕ್ತಿಯು ಸೇರ್ಪಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಆಹಾರ ನಾಗರೀಕ ಸರಬರಾಜು ಇಲಾಖೆಯ ತಾಲ್ಲೂಕು ಕಛೇರಿಯಲ್ಲಿ ಸುಮಾರು 600-800 ಅರ್ಜಿ ಬಂದಿದ್ದರೂ ಕೂಡ ತಾಲ್ಲೂಕು ಆಡಳಿತ ನಿರ್ವಹಣೆ ಮಾಡಿರುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಕಳುಹಿಸಬೇಕು. ಕೂಡಲೇ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಹೊಸ ಪಡಿತರ ಚೀಟಿಯನ್ನು ಕೊಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿಧಾನ ಸೌಧವನ್ನು ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಚಿಕ್ಕಬೂದಿಹಾಳ ಭಗತ್ ಸಿಂಹ, ಚಿಕ್ಕತೋಗಲೇರಿ ಮಲ್ಲಿಕಾರ್ಜುನ, ಸೋಮ್ಲಾಪುರ ರಂಜಿತ,ಕೆಂಚಮ್ಮನಹಳ್ಳಿ ಹನುಮಂತಪ್ಪ, ಹೊಟ್ಟೆಗಾನಳ್ ಸುನೀಲ್, ಭರಮಸಮುದ್ರ ಕುಮಾರ್, ಕೋಲ್ಕುಂಟೆ ಉಚ್ಚಂಗಪ್ಪ, ಕಿತ್ತೂರು ಹನುಮಂತಪ್ಪ, ಶಿವರಾಜ್, ಮೆದಿಗೇರಪ್ಪ, ಷಣ್ಮುಖಪ್ಪ, ಭೀಮಣ್ಣ, ತಿಪ್ಪೇಶ್‌ ಇತರ ರೈತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...