ದಾವಣಗೆರೆ | ಸಾಲ ಮರುಪಾವತಿಗೆ ನೋಟಿಸ್‌, ರೈತರ ಪ್ರತಿಭಟನೆ

Date:

ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದಲ್ಲಿ ಪ್ರತಿಭಟಿಸಿದೆ.

ಜಗಳೂರು ಪಟ್ಟಣದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿದ್ದ ಪ್ರತಿಭಟನಾಕಾರರು ಬ್ಯಾಂಕ್ ಹಾಗೂ ಫೈನಾನ್ಸ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿದರು. ನಂತರ ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಿದರು.

ಸಂಘಟನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿ ಬರ ಆವರಿಸಿ ಬೆಳೆದ ಬೆಳೆಗಳು ಕೈಗೆಟಕುದೆ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲಮರುಪಾವತಿಗೆ ಕಾಲಾವಕಾಶ ನೀಡದೆ ಟ್ರ್ಯಾಕ್ಟರ್ ಹಾಗೂ ಜಮೀನುಗಳಲ್ಲಿ ಬೆಳೆ ಬೆಳೆಯಲು ಸಾಲಮಾಡಿರುವುದು. ಆದರೆ, ಸಾಲ ನೀಡಿದ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ನೋಟಿಸ್ ಜಾರಿಗೊಳಿಸಿ, ಬಲವಂತದಿಂದ ವಸೂಲು ಮಾಡಲು ಕಿರುಕುಳ ನೀಡುತ್ತಿದ್ದಾರೆ. ರೈತರು ಎದೆಗುಂದದೆ ಸಾಲವನ್ನು ಸವಾಲಾಗಿ ಸ್ವೀಕರಿಸಬೇಕು. ರೈತ ಸಂಘಟನೆಗಳ ಬಳಿ ಬರಬೇಕು ಎಂದು ಕರೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೈತಕಾರ್ಮಿಕರ ಖಾತೆಗೆ ವೃದ್ಧಾಪ್ಯ ವೇತನ, ಗೃಹಲಕ್ಷ್ಮೀ ಯೋಜನೆ, ಬೆಳೆಪರಿಹಾರ ಸೇರಿದಂತೆ ವಿವಿಧ ಸಾಮಾಜಿಕ ಭದ್ರತೆಯಡಿ ಸರ್ಕಾರ ಜಮಾ ಮಾಡುವ ಹಣವನ್ನು ಕೂಡಲೇ ಸಾಲ ಮರುಪಾವತಿಗೆ ಜಮಾ ಮಾಡಬಾರದು ಎಂದು ಆಗ್ರಹಿಸಿದರು.

ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಮನವಿ ಸ್ವೀಕರಿಸಿ ಮಾತನಾಡಿ, ಮುಂದಿನ ಸೋಮವಾರದಂದು ತಾಲೂಕಿನ ಎಲ್ಲಾ ಮೈಕ್ರೋ ಫೈನಾನ್ಸ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ  ವ್ಯವಸ್ಥಾಪಕರನ್ನು ರೈತ ಸಂಘಟನೆ ಸಮ್ಮುಖದಲ್ಲಿ ಸಭೆ ಕರೆದು ಚರ್ಚೆ ನಡೆಸಿ ರೈತರ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲು ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ಪ್ರತಿಭಟನಾಕಾರರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದರು. ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿಕ್ಕಮಲ್ಲನಹೊಳೆ ಚಿರಂಜೀವಿ, ಪದಾಧಿಕಾರಿಗಳಾದ ಸತೀಶ್ ಗೌಡಗೊಂಡನಹಳ್ಳಿ, ದಕಾನನಕಟ್ಟೆ ತಿಪ್ಪೇಸ್ವಾಮಿ, ರಾಜನಹಟ್ಟಿರಾಜು, ಸಹದೇವರೆಡ್ಡಿ, ಅಂಜಿನಪ್ಪ, ತಿಪ್ಪಣ್ಣ, ಸಣ್ಣಪಾಲಯ್ಯ, ತಿಪ್ಪೇಶ್‌, ಲೋಕಣ್ಣ, ಮಂಜುನಾಥ್ ರೆಡ್ಡಿ, ಅಶೋಕ, ಚಿದಾನಂದ ಸೇರಿದಂತೆ ಇತರರು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕಾಂಗ್ರೆಸ್‌ಗೆ ಮಡಿವಾಳ ಸಮಾಜ ಬೆಂಬಲ; ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಜ್ಯದಲ್ಲಿನ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದು, ರಾಜ್ಯದ ಎಲ್ಲ ತಾಲೂಕಿನಲ್ಲಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...