ದಾವಣಗೆರೆ | ಕೆಎಸ್‌ಆರ್‌ಟಿಸಿ ನೌಕರರ, ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ ಧರಣಿ ಸತ್ಯಾಗ್ರಹ ನಡೆಸಿದರು.

ದಾವಣಗೆರೆಯ ವಿಭಾಗೀಯ ನಿಯಂತ್ರಣ ಅಧಿಕಾರಿಗಳ ಮುಖಾಂತರ ಕೆಎಸ್ಆ‌ರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಪತ್ರ ನೀಡಿ, ಫೆಡರೇಶನ್ ನೌಕರರು ಮತ್ತು ಕಾರ್ಮಿಕರು ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಫೆಡರೇಶನ್ ಅಧ್ಯಕ್ಷ ಎಚ್.ಜಿ. ಉಮೇಶ್, ಮೂಲ ವೇತನಕ್ಕೆ 31ರ ಡಿಸೆಂಬರ್ 2023ರ ಮೂಲ ವೇತನದ ಶೇ.25ರಷ್ಟು ಹೆಚ್ಚಳ ಮಾಡಿ, ವೇತನ ಶ್ರೇಣಿಗಳನ್ನು ಸಿದ್ಧಪಡಿಸಬೇಕು. ಇನ್ಕ್ರಿಮೆಂಟ್ ದರ ಎಲ್ಲಾ ಹಂತಗಳಲ್ಲೂ ಮೂಲ ವೇತನದ ಶೇ.4 ಇರಬೇಕು. 2020ರ ಜನವರಿಯಿಂದ ಆಗಿರುವ ಶೇ.15ರ ವೇತನ ಹೆಚ್ಚಳದ 38ತಿಂಗಳ ಬಾಕಿ ಹಣ ವಿಳಂಬವಿಲ್ಲದೆ ಪಾವತಿಸಬೇಕು ಎಂದರು.

Advertisements

2020ರಿಂದ 2023ರ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ವಿಮುಕ್ತಿಯಾಗಿರುವ ಎಲ್ಲಾ ನೌಕರರಿಗೆ ನಿವೃತ್ತಿ, ಮೃತಪಟ್ಟವರು, ವಜಾಗೊಂಡವರು ಹಾಗೂ ಇತರ ಕಾರಣಗಳಿಗೆ ಸೇವೆಯಿಂದ ನಿರ್ಗಮಿಸಿರುವ ಎಲ್ಲಾ ನೌಕರರಿಗೆ 2020ರ ಜನವರಿ 1ರಿಂದ ಜಾರಿ ಮಾಡಿರುವ ವೇತನ ಶ್ರೇಣಿಯನ್ನು ಅನ್ವಯಿಸಿ ಎಲ್ಲಾ ರೀತಿಯ ಆರ್ಥಿಕ ಪಿ.ಎಫ್, ಗ್ರಾಚ್ಯುಯಿಟಿ, ರಜಾ ನಗದೀಕರಣ ಮತ್ತಿತರ ಸೌಲಭ್ಯಗಳನ್ನು ಪಾವತಿಸಬೇಕು ಎಂದು ಆಗ್ರಹಿಸಿದರು.

ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಸಿದ್ದಪಡಿಸತಕ್ಕದ್ದು. ಆಯ್ಕೆ ಶ್ರೇಣಿಯ ವಾರ್ಷಿಕ ವೇತನ ಬಡ್ತಿ ಹಾಗೂ ಉನ್ನತ ಶ್ರೇಣಿಗಳ ವಾರ್ಷಿಕ ವೇತನ ಬಡ್ತಿಯು ಆಯಾಯ ವೇತನ ಶ್ರೇಣಿಯ ಮೂಲವೇತನದ ಶೇ.4 ಇರತಕ್ಕದ್ದು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10ವರ್ಷಕ್ಕೊಮ್ಮೆ ನೀಡಬೇಕು. ಯಾವುದೇ ಸಂದರ್ಭದಲ್ಲಿಯೂ ಆಯ್ಕೆ ಶ್ರೇಣಿ, ಉನ್ನತ ಶ್ರೇಣಿಯ ವಾರ್ಷಿಕ ವೇತನ ಬಡ್ತಿಯ ಸಾಮಾನ್ಯ ಶ್ರೇಣಿಯ ಕೊನೆ ಹಂತದ ವಾರ್ಷಿಕ ವೇತನ ಬಡ್ತಿಯ ಮೊತ್ತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಇರಬೇಕು ಎಂದು ಒತ್ತಾಯಿಸಿದರು.

ಎಲ್ಲಾ ನೌಕರರಿಗೂ ಪಾಳಿ ವ್ಯವಸ್ಥೆ ಜಾರಿ ಮಾಡಬೇಕು. ರಿಯಾಯಿತಿ ದರದಲ್ಲಿ ಕ್ಯಾಂಟೀನ್ ಸೌಲಭ್ಯ ನೀಡಬೇಕು. ಮಹಿಳಾ ನೌಕರರಿಗೆ ಘಟಕ, ಬಸ್ ನಿಲ್ದಾಣ, ಟರ್ಮಿನಲ್ ಗಳಲ್ಲಿ ವಿಶ್ರಾಂತಿ ಕೊಠಡಿ, ಶೌಚಾಲಯಗಳ ವ್ಯವಸ್ಥೆ, ಕುಡಿಯುವ ನೀರು, ಘಟಕಗಳಲ್ಲಿ ಶಿಶುಪಾಲನಾ ಕೇಂದ್ರ ವ್ಯವಸ್ಥೆ ಮಾಡಿಕೊಡಬೇಕು. ಮಹಿಳಾ ನೌಕರರಿಗೆ ಅವರ ಆಯ್ಕೆಯ ಪ್ರಕಾರ ಉತ್ತಮ ಗುಣಮಟ್ಟದ ಸೀರೆ ಅಥವಾ ಡ್ರೆಸ್ ಮೆಟಿರೀಯಲ್ ಕೊಡತಕ್ಕದ್ದು. ಮಹಿಳಾ ನೌಕರರಿಗೆ ಯಾವುದೇ ಸಂದರ್ಭದಲ್ಲಿಯೂ 8 ಗಂಟೆಗಿಂತ ಅಧಿಕ ಕೆಲಸದಲ್ಲಿ ಕರ್ತವ್ಯ ನಿಯೋಜಿಸಬಾರದು ಎಂದು ಮನವಿ ಮಾಡಿದರು.

ಭವಿಷ್ಯ ನಿಧಿಯ ಬದಲು ಎಲ್ಲಾ ನಿವೃತ್ತ ನೌಕರರಿಗೂ ಸೂಕ್ತವಾದ, ತುಟ್ಟಿ ಭತ್ಯೆಗೆ ಸರಿಯಾದ ಪೆನ್ಸನ್ ಯೋಜನೆ ಜಾರಿಗೊಳಿಸಬೇಕು. ಗ್ರಾಚ್ಯುಟಿ ಸಂಬಂಧ ಹೊರಡಿಸಲಾಗಿರುವ ಸುತ್ತೋಲೆಯನ್ನು ರದ್ದು ಪಡಿಸಿ ಕೈಗಾರಿಕಾ ಒಪ್ಪಂದಗಳ ಪ್ರಕಾರ ಎಲ್ಲಾ ಕಾರ್ಮಿಕರಿಗೂ ಗ್ರಾಚ್ಯುಟಿ ಪಾವತಿಸತಕ್ಕದ್ದು, ನಾಲ್ಕೂ ನಿಗಮಗಳಲ್ಲೂ ಇರುವ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಹೇಳಿದರು.

ಮುದ್ರಣಾಲಯ ಮತ್ತು ಕಾರ್ಯಗಾರಗಳ ತಾಂತ್ರಿಕ ಸಿಬ್ಬಂದಿಗಳಿಗೆ ಬಡ್ತಿ ಅವಕಾಶಗಳು ಇಲ್ಲದ ಕಾರಣ ಸದರಿ ಸಿಬ್ಬಂದಿಗಳಿಗೆ ಪ್ರತಿ 10 ವರ್ಷಗಳಿಗೊಮ್ಮೆ ಹೆಚ್ಚುವರಿ ವಾರ್ಷಿಕ ವೇತನ ಬಡ್ತಿಯನ್ನು ನೀಡಿ ಪ್ರೋತ್ಸಾಹಿಸಬೇಕು. ಸಾರಿಗೆ ನಿಗಮಗಳ ವಿದ್ಯುತ್ ಚಾಲಿತ ವಾಹನಗಳಿಗೆ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು ಎಂದರು.

ಗುತ್ತಿಗೆ ಆಧಾರದಲ್ಲಿ ತೆಗೆದುಕೊಂಡಿರುವ ಚಾಲಕ, ತಾಂತ್ರಿಕ ಸಿಬ್ಬಂದಿಗಳನ್ನು ಸಂಸ್ಥೆಯ ನೌಕರರನ್ನಾಗಿ ನೇಮಿಸಿಕೊಳ್ಳಬೇಕು. ಪ್ರಸ್ತುತ ವೇತನ ಪರಿಷ್ಕರಣೆಯು 4 ವರ್ಷಗಳ ಕಾಲ ಜಾರಿಯಲ್ಲಿರಬೇಕು. 4 ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿಗಳ ನೇಮಕಾತಿಯನ್ನು ಬೇಗ ಮುಗಿಸಿ ಎಲ್ಲಾ ನಿಗಮಗಳಲ್ಲೂ ನೌಕರ ಮುಂಬಡ್ತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಮಿರ್ಜಾ ರೆಹಮತುಲ್ಲಾ, ಪ್ರಕಾಶ್, ಉಮೇದುಲ್ಲಾ, ಆನಂದ್ ನಾಯಕ್, ಹನುಮಂತಪ್ಪ, ಹರಿಹರದ ಕರಿಗೌಡ, ಈಶ್ವರ್, ಬಣವಿ ಲೋಕಪ್ಪ ಸೇರಿದಂತೆ ಜಂಟಿ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X