ದಾವಣಗೆರೆ | ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Date:

ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಹಾನಗರ ಪಾಲಿಕೆಯ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಎಂ.ಆರ್. ದುಗ್ಗೇಶ್ ಮಾತನಾಡಿ, ಮಹಾನಗರ ಪಾಲಿಕೆಯ ಕಸ ಸಾಗಾಣಿಕೆ, ಒಳಚರಂಡಿ ಹಾಗೂ ಇತರ ವಿಭಾಗದಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಚಾಲಕರಾಗಿ ನಾವುಗಳು ಸೇವೆ ಸಲ್ಲಿಸುತ್ತಿದ್ದು, ಇದುವರೆಗೂ ಏಜೆನ್ಸಿಗಳ ಮೂಲಕ ಪ್ರತೀ ತಿಂಗಳು ವೇತನವನ್ನು ಪಡೆಯುತ್ತಿದ್ದೇವು. ಆದರೆ, ಕಳೆದ 2023ರ ಅಕ್ಟೋಬರ್ ತಿಂಗಳಿಂದ ಟೆಂಡ‌ರ್ ಮೂಲಕ ಏಜೆನ್ಸಿ ಬದಲಾವಣೆಯಾಗಿದ್ದು, ಆದರ್ಶ ಎಂಟರ್ ಪ್ರೈಸಸ್ ಹುಬ್ಬಳ್ಳಿ ಇವರಿಗೆ ಟೆಂಡ‌ರ್ ನೀಡಲಾಗಿದೆ.

ಆದರೆ, ಇವರು ಈ ಹಿಂದೆ ಹುಬ್ಬಳ್ಳಿ ಪಾಲಿಕೆಯಲ್ಲಿಯೂ ಚಾಲಕರುಗಳಿಗೆ ವೇತನ ನೀಡುವುದರಲ್ಲಿ ಸತಾಯಿಸುತ್ತಿರುವುದಾಗಿ ತಿಳಿದುಬಂದಿದ್ದು, ಟೆಂಡರ್ ನೀಡದಂತೆ ನಾವು ಈ ಹಿಂದೆ ಟೆಂಡ‌ರ್ ಸಮಯದಲ್ಲಿಯೇ ಮನವಿ ನೀಡಿದ್ದೆವು, ಆದರ್ಶ ಎಂಟರ್‌ಪ್ರೈಸಸ್ ಹುಬ್ಬಳ್ಳಿ ಏಜೆನ್ಸಿಯವರು ಆರಂಭದಲ್ಲಿಯೇ ಅಕ್ಟೋಬರ್ 2023ರ ವೇತನವನ್ನು ಕೊಡುವಲ್ಲಿ ಸತಾಯಿಸಿ, ಪಾಲಿಕೆಯಿಂದ ನೀಡಿದ ಮೇಲೆ ಪಾವತಿಸುತ್ತೇನೆ ಎಂದಿದ್ದಾರೆ. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದರು.

ಏಜೆನ್ಸಿಯವರು ನಮ್ಮ ದೂರವಾಣಿ ಕರೆಯನ್ನು ಸಹ ಸ್ವೀಕರಿಸುತ್ತಿಲ್ಲ. ಇದರಿಂದ ನಮ್ಮ ಸ್ಥಿತಿ ಅತಂತ್ರವಾಗಿದ್ದು, ಕುಟುಂಬ ನಿಭಾಯಿಸುವುದು ಕಷ್ಟವಾಗಿದೆ. ಮೂರು ತಿಂಗಳ ವೇತನ ನೀಡದೇ ಸತಾಯಿಸುತ್ತಿರುವ ಆದರ್ಶ ಎಂಟರ್‌ಪ್ರೈಸಸ್, ಹುಬ್ಬಳ್ಳಿ ಏಜೆನ್ಸಿಯವರ ಟೆಂಡ‌ರ್ ರದ್ದುಪಡಿಸಿ ಪಾಲಿಕೆಯಿಂದಲೇ ವೇತನ ನೀಡಿ. ಇಲ್ಲವೇ ಸ್ಥಳೀಯ ಏಜೆನ್ಸಿಗಳಿಗೆ ಟೆಂಡ‌ರ್ ನೀಡುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಂ.ವೀರೇಶ್, ಕಿರಣ್ ಕುಮಾರ್, ಎಚ್.ಎಂ. ಪ್ರಭಾಕರ್, ಸಂತೋಷ್, ಪ್ರಕಾಶ್, ಕೊಟ್ರೇಶ್, ಸಿದ್ದಲಿಂಗೇಶ್ವರ್, ಚಿದಾನಂದ, ಮೈಲಾರಿ, ನವೀನ್ ಮತ್ತಿತರರ ಕಾರ್ಮಿಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...