ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

Date:

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ಸಚಿವರನ್ನ ಭೇಟಿ ಮಾಡುತ್ತಿದ್ದಾರೆ. ಅವರ ಭೇಟಿಗಳು ಕಾಂಗ್ರೆಸ್‌ನ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಏ ಶಿವಗಂಗಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರೇಣುಕಾಚಾರ್ಯ ಪ್ರಚಾರ ಪ್ರಿಯರು. ಅಧಿಕಾರ ಇರಲಿ ಬಿಡಲಿ ಅವರಿಗೆ ಪ್ರಚಾರಬೇಕು. ಹೀಗಾಗಿ, ಸಚಿವರ ಭೇಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಕಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಸಮಸ್ಯೆಗಳ ನೆಪದಲ್ಲಿ ಸಚಿವರುಗಳನ್ನು ಭೇಟಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ವಿರೋಧ ಪಕ್ಷದ ನಾಯಕರನ್ನೇ ಆಯ್ಕೆ ಮಾಡದ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ. ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರೇಣುಕಾಚಾರ್ಯ ಮುಂದಾಗುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್‌ ಸಚಿವರು ಪ್ರಾಮುಖ್ಯತೆ ನೀಡಬಾರದು. ಕಾಂಗ್ರೆಸ್‌ ಶಾಸಕರಿಗೆ ಸಚಿವರನ್ನ ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ. ಕೊನೆ ಪಕ್ಷ ಸಚಿವರುಗಳಿಗೆ ಫೋನ್ ಕರೆ ಮಾಡಿದರೂ ರೆಸ್ಪಾನ್ಸ್ ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ಮಾಜಿ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗುತ್ತಿದೆ” ಎಂದು ಕಿಡಿಕಾರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೇಣುಕಾಚಾರ್ಯ ಸಚಿವರನ್ನ ಭೇಟಿ ಮಾಡಿರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪ್ರಚಾರ ಪಡೆಯುತ್ತಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ. ಇಂಥವರಿಗೆ ಕಾಂಗ್ರೆಸ್ ನಾಯಕರು ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ...

ದೇವದಾರಿ ಉಕ್ಕು ಗಣಿಗಾರಿಕೆ | ಆರು ವರ್ಷಗಳ ಹಿಂದೆ ವಿರೋಧ – ಇಂದು ಒಪ್ಪಿಗೆ; ಇದು ಕೇಂದ್ರ ಸಚಿವ ಎಚ್‌ಡಿಕೆ ವರಸೆ!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿದ್ದು, ಮೋದಿ ನೇತೃತ್ವದ ಎನ್‌ಡಿಎ...

ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು...

ಬಿಎಸ್‌ವೈ ಪೋಕ್ಸೊ | ಕಾನೂನು ರಕ್ಷಕರಿಂದಲೇ ಕಾನೂನು ಉಲ್ಲಂಘನೆ: ವಕೀಲ ಎಸ್‌ ಬಾಲನ್ ಆರೋಪ

"ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧ ಗಂಭೀರವಾಗಿರುವ ಪೋಕ್ಸೊ ಪ್ರಕರಣ...