ದಾವಣಗೆರೆ | ಪ್ರಚೋದನಾತ್ಮಕ ಹೇಳಿಕೆ: ಸಂಘಪರಿವಾರದ ಮುಖಂಡ ಸತೀಶ್ ಪೂಜಾರಿ ಬಂಧನ

Date:

ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ಪೂಜಾರಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ದಾವಣಗೆರೆ ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ.

- Advertisement -

ಸದ್ಯ ಆರೋಪಿಯನ್ನು ದಾವಣಗೆರೆಗೆ ಕರೆತಂದಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಾವಣಗೆರೆಯಲ್ಲಿ ಗುರುವಾರ ಬೇತೂರು ರಸ್ತೆಯ ವೆಂಕಾಭೋವಿ ಕಾಲೋನಿಯ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನಾತ್ಮಕ ಹೇಳಿಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು.

ನಾಗಮಂಗಲದ ಗಣೇಶನ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ವಿರೋಧಿಸಿ ಬುಧವಾರ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಪೂಜಾರಿ ವಿರುದ್ಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಡಾವಣೆ ಪೊಲೀಸ್ ಠಾಣೆ

ದ್ವೇಷ ಭಾಷಣ ಮಾಡಿದ್ದರಿಂದ ಕಳೆದ ಗುರುವಾರ ದಾವಣಗೆರೆಯ ವೆಂಕಾಭೋವಿ ಕಾಲೋನಿಯ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿದೆ ಎಂದು ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಡೆದ ಗಲಾಟೆ ಬಳಿಕ ಸತೀಶ್ ಪೂಜಾರಿ ನಾಪತ್ತೆಯಾಗಿದ್ದರು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಸಂಬಂಧಿಯಿಂದಲೇ ಮಹಿಳೆಯ ಮೇಲೆ ಅತ್ಯಾಚಾರ: ಪ್ರಕರಣ ತಡವಾಗಿ ಬೆಳಕಿಗೆ

ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಸೆಪ್ಟಂಬರ್ 19ರಂದು ದಾವಣಗೆರೆ ನಗರದ ಅರಳಿಮರ ಸರ್ಕಲ್ ದಾಟಿ ಚಾಮರಾಜಪೇಟೆ ಸರ್ಕಲ್​ ಬಳಿ ಹೋಗುವಾಗ ಕಲ್ಲು ತೂರಾಟ ನಡೆದಿತ್ತು. ಈ ಪ್ರಕರಣ ಸಂಬಂಧ ಈವರೆಗೆ ಒಟ್ಟು 6 ಪ್ರಕರಣ ದಾಖಲಿಸಲಾಗಿದೆ. ಈವರೆಗೆ 48 ಜನರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...