ದಾವಣಗೆರೆ | ವಿದ್ಯುತ್ ಕಂಪನಿ ಸಿಬ್ಬಂದಿ ಮೇಲೆ ಹಲ್ಲೆ; ಪಿಡಿಒ ವಿರುದ್ಧ ದೂರು ದಾಖಲು

Date:

ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ‘ಪವನ ವಿದ್ಯುತ್ ಕಂಪನಿ’ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರಿನ ದೊಣ್ಣೆಹಳ್ಳಿ ಪಿಡಿಒ ವಿರುದ್ಧ ದೂರು ದಾಖಲಾಗಿದೆ.

- Advertisement -

ಹಿರೇಮಲ್ಲನಹೊಳೆ ಗ್ರಾಮದ ಪವನ ವಿದ್ಯುತ್ ಕಂಪನಿ ಸಿಎಂಇಎಸ್ ಜೂಪಿಟರ್ ರಿನ್ಯೂವಬಲ್ ಸ್ಟೇಷನ್ ಉದ್ಯೋಗಿ ಉಮಾ ಮಹೇಶ್ವರ ರಾವ್ ಸುರಪನೇನಿ ಅವರು ಜಗಳೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ದೊಣೆಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಕೊಟ್ರೇಶ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕೊಟ್ರೇಶ್ ಮಾತ್ರವಲ್ಲದೆ, ಇತರ 30 ಮಂದಿ ವಿರುದ್ಧವೂ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಮಹೇಶ್ವರ ರಾವ್ ಅವರ ದೂರಿನಲ್ಲಿ; ಪವನ ವಿದ್ಯುತ್ ಘಟಕಗಳಿಗೆ ಸಂಬಂಧಿಸಿದಂತೆ 2021 ರಿಂದ 2025ರವರೆಗೂ ತೆರಿಗೆ ಪಾವತಿಸಲಾಗಿದೆ. 2025–2026ನೇ ಸಾಲಿನಲ್ಲಿ ಪಂಚಾಯತಿಯು ಹೊಸ ನಿಯಮ ರೂಪಿಸಿದ್ದರಿಂದ, ಅದರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗದ ಕಾರಣ ತೆರಿಗೆ ಪಾವತಿಸಿಲ್ಲ. ಆದರೂ, ದೊಣೆಹಳ್ಳಿ, ಹನುಮಂತಾಪುರ, ಹಿರೇಮಲ್ಲನಹೊಳೆ ಪಂಚಾಯಿತಿಗಳ ಪಿಡಿಒಗಳು ಮತ್ತು ಸದಸ್ಯರು ತೆರಿಗೆ ಕಟ್ಟುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೊಣೆಹಳ್ಳಿ ಗ್ರಾಮ ಪಂಚಾಯತಿಯ ಪಿಡಿಒ ಕೊಟ್ರೇಶ್‌ ಅವರು ಮದ್ಯಪಾನ ಮಾಡಿ, ಸುಮಾರು 30 ಮಂದಿಯ ಗುಂಪು ಕಟ್ಟಿಕೊಂಡು ಹಿರೇಮಲ್ಲನಹೊಳೆಯಲ್ಲಿರುವ ಇಂಧನ ಘಟಕಕ್ಕೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಘಟಕವನ್ನು ಸುಟ್ಟು ಹಾಕುವುದಾಗಿಯೂ, ಸಿಬ್ಬಂದಿಗಳನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...