ಕಾಲೇಜು ಸೇರಿ ನಾಲ್ಕು ದಿನವಷ್ಟೇ ತರಗತಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬರು ವಸತಿ ಕಾಲೇಜಿನ ಕಾಂಪೌಂಡ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುರುಬರಹಳ್ಳಿ ಬಳಿಕ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಸಿನಿಕ್ಷಾ (16) ಮೃತ ದುರ್ದೈವಿ. ಆಕೆ ಕಾಲೇಜಿನ ಕಾಂಪೌಂಡ್ ಮೇಲಿಂದ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಿನಿಕ್ಷಾ ಕಾಲೇಜಿಗೆ ದಾಖಲಾಗಿದ್ದರು. ಪ್ರಥಮ ಪಿಯುಸಿ ಸೈನ್ಸ್ ವಿಭಾಗದಲ್ಲಿ ದಾಖಲಾತಿ ಪಡೆದಿದ್ದರು.
ಘಟನೆ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.